ಕರ್ನಾಟಕ ಪಬ್ಲಿಕ್ ಸ್ಕೂಲ್‌ ಕಟ್ಟಡ ನಿರ್ಮಾಣಕ್ಕೆ ಚಾಲನೆ

ಹೊಸ ಬಂಡಿಹರ್ಲಾಪುರದಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಕಟ್ಟಡ ನಿರ್ಮಾಣಕ್ಕೆ ಶಾಸಕ ರಾಘವೇಂದ್ರ ಹಿಟ್ನಾಳ ಗುರುವಾರ ಭೂಮಿಪೂಜೆ ನೆರವೇರಿಸಿದರು. ಕೊಪ್ಪಳ ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಬಾಲಚಂದ್ರನ್ ಮುನಿರಾಬಾದ್, ಕಾಂಗ್ರೆಸ್ ಮುಖಂಡರಾದ ಕೆ.ಎಂ. ಸೈಯದ್, ವಿಶ್ವನಾಥ ರಾಜೂರು. ಯಂಕಪ್ಪ ಹೊಸಳ್ಳಿ ಇದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ಶಾಸಕ ರಾಘವೇಂದ್ರ ಹಿಟ್ನಾಳ ಹೇಳಿಕೆ
  • ಶಿಕ್ಷಣ ಕ್ಷೇತ್ರ ಬಲವರ್ಧನೆಗೆ ಕ್ರಮ
ಮುನಿರಾಬಾದ್: ಕ್ಷೇತ್ರದ ಶೈಕ್ಷಣಿಕ ಪ್ರಗತಿಗೆ ಮೊದಲ ಆದ್ಯತೆ ನೀಡುತ್ತಿದ್ದು, ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ದೊರೆಯುವಂತಾಗಲು 8 ಕರ್ನಾಟಕ ಪಬ್ಲಿಕ್ ಸ್ಕೂಲ್‌ಗಳನ್ನು ಮಂಜೂರು ಮಾಡಿಸಲಾಗಿದೆ ಎಂದು ಶಾಸಕ ರಾಘವೇಂದ್ರ ಹಿಟ್ನಾಳ ತಿಳಿಸಿದರು.
ಬಂಡಿಹರ್ಲಾಪುರ ಜಿಪಂ ವ್ಯಾಪ್ತಿಯ ಗ್ರಾಮಗಳಲ್ಲಿ ಗುರುವಾರ ಹಮ್ಮಿಕೊಂಡಿದ್ದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಭೂಮಿಪೂಜೆ ನೆರವೇರಿಸಿ ಮಾತನಾಡಿದರು. ಹಿಟ್ನಾಳ, ಹೊಸಳ್ಳಿ, ಹೊಸ ಬಂಡಿಹರ್ಲಾಪುರದಲ್ಲಿ ಶಾಲಾ ಕಟ್ಟಡ ಕಾಮಗಾರಿ ಶುರುವಾಗಿದೆ ಎಂದರು.  
ಅಹವಾಲು ಸ್ವೀಕಾರ: ಅಗಳಕೇರಿ, ಶಿವಪುರ, ಹೊಸ ಮತ್ತು ಹಳೇ ಬಂಡಿಹರ್ಲಾಪುರ, ಬಸಾಪುರ, ಅಯೋಧ್ಯಾ, ರಾಜರಾಮಪೇಟೆ, ನಾರಾಯಣಪೇಟೆ, ಮಹಮದ್ ನಗರ, ಕವಳಿ ಗ್ರಾಮಗಳಲ್ಲಿ ಸಂಚರಿಸಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಮೂಲಸೌಕರ್ಯ ಕಾಮಗಾರಿಗಳಿಗೆ ಚಾಲನೆ ನೀಡಿದರು.
ಮುಖಂಡರಾದ ಚಂದಕೃಷ್ಣ ಹರ್ಲಾಪುರ, ಕನಕರಾಯ, ನಾಗರಾಜ ಪಠವಾರಿ, ಯಮನೂರಪ್ಪ ಬಸಾಪುರ, ಸೀನಣ್ಣ ಶಿವಪುರ, ಧರ್ಮರಾಜ ಕಂಪಸಾಗರ, ಮಲ್ಲಿಕಾರ್ಜುನ ಪೂಜಾರ, ಭೀಮಣ್ಣ ಹರ್ಲಾಪುರ, ರೇಣುಕಮ್ಮ ಹರ್ಲಾಪುರ, ಸೋಮಶೇಖರ ಹಿಟ್ನಾಳ, ಬಸಣ್ಣ ಅಗಳಕೇರಿ, ಓಬಳೇಶ, ಅಶೋಕ ಹಿಟ್ನಾಳ, ಅಕ್ತರ್ ಪಲ್ಟಾನ್ ಇದ್ದರು. 
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net