ಬಾಲ್ಯವಿವಾಹಮುಕ್ತ ಜಿಲ್ಲೆಗೆ ಸಹಕರಿಸಿ

ಕೊಪ್ಪಳ ತಹಸಿಲ್ ಕಚೇರಿ ಸಭಾಂಗಣದಲ್ಲಿ ಬಾಲ್ಯವಿವಾಹ ನಿಷೇಧ ಕಾಯ್ದೆ-2006 ಹಾಗೂ ಕರ್ನಾಟಕ ತಿದ್ದುಪಡಿ-2016ರ ಜಾಗೃತಿ ಕಾರ್ಯಕ್ರಮಲ್ಲಿ ನ್ಯಾ. ಮಹಾಂತೇಶ ಎಸ್. ದರಗದ ವಾತನಾಡಿದರು. ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸಿಂಧು ಅಂಗಡಿ, ಗ್ರೇಡ್-2 ತಹಸೀಲ್ದಾರ್ ಗವಿಸಿದ್ದಪ್ಪ ಮಣ್ಣೂರ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಪ್ರಕಾಶ ಕಡಗದ, ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶರಣಪ್ಪ ಇದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ಸಂಪೂರ್ಣ
  • ನಿರ್ಮೂಲನೆ
  • ಕೈಜೋಡಿಸಬೇಕು
ಕೊಪ್ಪಳ: ಬಾಲ್ಯವಿವಾಹ ಸವಾಜಕ್ಕೆ ಅಂಟಿದ ಗಂಭೀರ ಸಮಸ್ಯೆ. ಇದನ್ನು ಸಂಪೂರ್ಣ ನಿರ್ಮೂಲನೆ ವಾಡಿ ಕೊಪ್ಪಳವನ್ನು ಬಾಲ್ಯವಿವಾಹಮುಕ್ತ ಜಿಲ್ಲೆಯಾಗಿಸಲು ಸಾರ್ವಜನಿಕರು ಕೈಜೋಡಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ನ್ಯಾ. ಮಹಾಂತೇಶ ಎಸ್. ದರಗದ ಹೇಳಿದರು.
ನಗರದ ತಹಸಿಲ್ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಬಾಲ್ಯವಿವಾಹ ನಿಷೇಧ ಕಾಯ್ದೆ-2006 ಹಾಗೂ ಕರ್ನಾಟಕ ತಿದ್ದುಪಡಿ-2016ರ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ವಾತನಾಡಿದರು.
18 ವರ್ಷದೊಳಗಿನ ಹೆಣ್ಣುಮಕ್ಕಳಿಗೆ ಮತ್ತು 21 ವರ್ಷದೊಳಗಿನ ಗಂಡುಮಕ್ಕಳಿಗೆ ವಿವಾಹ ನಿಷೇಧಿಸಲಾಗಿದ್ದು, ಕಾಯ್ದೆ ಉಲ್ಲಂಸಿದವರಿಗೆ 1ರಿಂದ 2 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಲಾಗುತ್ತದೆ. ರಾಜ್ಯದಲ್ಲಿ 2018ರ ವಾರ್ಚ್ 3ರಿಂದ ತಿದ್ದುಪಡಿ ಜಾರಿಗೆ ಬಂದಿದ್ದು, ಬಾಲ್ಯವಿವಾಹಗಳು ಅಸಿಂಧು ಎಂದು ೋಷಿಸಲಾಗಿದೆ ಎಂದರು.
ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸಿಂಧು ಅಂಗಡಿ ವಾತನಾಡಿ, ವಿವಾಹ ನಡೆಯುವ ಸ್ಥಳಗಳಲ್ಲಿ ಬಾಲ್ಯವಿವಾಹ ನಿಷೇಧ ಕುರಿತ ಶಾಶ್ವತ ಗೋಡೆ ಬರಹ ಕಡ್ಡಾಯವಾಗಿದ್ದು, ವಿವಾಹ ಆಮಂತ್ರಣ ಪತ್ರಿಕೆ ಮುದ್ರಿಸುವ ಮುನ್ನ ವಧು-ವರರ ವಯಸ್ಸು ಖಚಿತಪಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಗ್ರೇಡ್2 ತಹಸೀಲ್ದಾರ್ ಗವಿಸಿದ್ದಪ್ಪ ಮಣ್ಣೂರ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಪ್ರಕಾಶ ಕಡಗದ, ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶರಣಪ್ಪ, ರೀಡ್ಸ್ ಬಳ್ಳಾರಿ ಸಂಯೋಜಕ ತಿಪ್ಪೇಶಪ್ಪ, ಶರಣಪ್ಪ ಹಿರೇ ತೆಮ್ಮಿನಾಳ, ಪ್ರತಿಭಾ ಕಾಶೀಮಠ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net