ಯಲಬುರ್ಗಾದಲ್ಲಿ ನ್ಯಾಯಾಲಯ ಸಂಕೀರ್ಣ ಉದ್ಘಾಟನೆ ನಾಳೆ

ಸಿವಿಲ್ ನ್ಯಾಯಾಧೀಶ ರಂಗಸ್ವಾಮಿ ಜೆ.
ಸಿವಿಲ್ ನ್ಯಾಯಾಧೀಶ ರಂಗಸ್ವಾಮಿ ಜೆ.
Published on

ಪ್ರಮುಖ ಮುಖ್ಯಾಂಶಗಳು

  • ಸಿವಿಲ್ ನ್ಯಾಯಾಧೀಶ ರಂಗಸ್ವಾಮಿ ಜೆ. ಹೇಳಿಕೆ
ಕೊಪ್ಪಳ: ಜಿಲ್ಲೆಯ ಯಲಬುರ್ಗಾ ತಾಲೂಕಿನಲ್ಲಿ ನೂತನವಾಗಿ ನಿರ್ಮಿಸಲಾದ ನ್ಯಾಯಾಲಯ ಸಂಕೀರ್ಣ ಕಟ್ಟಡದ ಉದ್ಘಾಟನೆಯು ಏಪ್ರಿಲ್​ 4ರ ಶನಿವಾರ ಬೆಳಗ್ಗೆ 10 ಗಂಟೆಗೆ ನಡೆಯಲಿದೆ.
ಕರ್ನಾಟಕ ಹೈಕೋರ್ಟ್​ ನ್ಯಾಯಾಧೀಶರು ಹಾಗೂ ಜಿಲ್ಲಾ ಆಡಳಿತ ನ್ಯಾಯಾಧೀಶರಾದ ಗೌ. ನ್ಯಾ. ಸಿ.ಎಂ. ಪೂಣಚ್ಚ ಅವರು ಕಟ್ಟಡವನ್ನು ಉದ್ಘಾಟಿಸುವರು. ಹೈಕೋರ್ಟ್​ನ ಇತರ ನ್ಯಾಯಮೂರ್ತಿಗಳಾದ ಹಂಚಾಟೆ ಸಂಜೀವ್​ಕುಮಾರ್​, ಎಂ.ಜಿ. ಶುಕುರೆ ಕಮಲ ಹಾಗೂ ಪಿ. ಶ್ರೀ ಸುಧಾ ಅವರು ಘನ ಉಪಸ್ಥಿತಿ ವಹಿಸಲಿದ್ದಾರೆ. ಕಾನೂನು ಮತ್ತು ಪ್ರವಾಸೋದ್ಯಮ ಸಚಿವ ಎಚ್​.ಕೆ. ಪಾಟೀಲ್​ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ.
ಲೋಕೋಪಯೋಗಿ ಇಲಾಖೆ ಸಚಿವ ಸತೀಶ್​ ಜಾರಕಿಹೊಳಿ, ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್​ ತಂಗಡಗಿ, ಯಲಬುರ್ಗಾ ಶಾಸಕ ಬಸವರಾಜ ರಾಯರೆಡ್ಡಿ, ಸಂಸದ ರಾಜಶೇಖರ ಹಿಟ್ನಾಳ ಸೇರಿದಂತೆ ಹಲವು ಗಣ್ಯರು ಭಾಗವಹಿಸುವರು ಎಂದು ಸಿವಿಲ್ ನ್ಯಾಯಾಧೀಶ ರಂಗಸ್ವಾಮಿ ಜೆ. ಅವರು ತಿಳಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net