ಕೊಪ್ಪಳದಲ್ಲಿ ಒಳ ಮೀಸಲಾತಿ ಹೆಚ್ಚಳಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿ 9ನೇ ಅನೂಸುಚಿಗೆ ಸೇರಿಸುವಂತೆ ಸಿಪಿಐಎಂ ನಿಂದ ಎಂಪಿ ಕಚೇರಿ ಸಿಬ್ಬಂದಿಗೆ ಮನವಿ ಸಲ್ಲಿಸಲಾಯಿತು. ನಿರುಪಾದಿ ಬೆಣಕಲ್, ಮಂಜುನಾಥ ಡಗ್ಗಿ, ಸುಂಕಪ್ಪ ಗದಗ, ಬಸವರಾಜ ಮರಕುಂಬಿ, ಹುಸೇನಪ್ಪ ರಮೇಶ ಬಿ., ಮಲ್ಲಪ್ಪ ಕನಕಗಿರಿ ಇದ್ದರು.
ಕೊಪ್ಪಳ : ಕರ್ನಾಟಕದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಪ್ರಮಾಣ ಹೆಚ್ಚಳ ಹಾಗೂ ಒಳ ಮೀಸಲಾತಿ ಜಾರಿಗೆ ಮಾಡುವಂತೆ ಸಂಸದರು ಕೇಂದ್ರ ಸರ್ಕಾರದ ಮೇಲೆ ಒತ್ತಡ ತರಬೇಕೆಂದು ಭಾರತ ಕಮ್ಯೂನಿಸ್ಟ್ ಪಕ್ಷವು ಆಗ್ರಹಿಸಿತು.
ಕೊಪ್ಪಳ ಜಿಲ್ಲಾಡಳಿತ ಭವನದ ಮುಂದೆ ಸೋಮವಾರ ಸಿಪಿಐಎಂ ನಿಂದ ಪ್ರತಿಭಟನೆ ನಡೆಸಿ ಎಂಪಿ ಕಚೇರಿ ಸಿಬ್ಬಂದಿಗೆ ಮನವಿ ಸಲ್ಲಿಸಿದರು.
ನ್ಯಾ. ಹೆಚ್.ಎನ್. ನಾಗಮೋಹನದಾಸ್ ಆಯೋಗ ಶಿಫಾರಸಿನಂತೆ ಮೀಸಲಾತಿಯನ್ನು ಶೇ.17 ಮತ್ತು ಶೇ.7ಕ್ಕೆ ಹೆಚ್ಚಿಸಲು ರಾಜ್ಯ ಸರ್ಕಾರ ತೆಗೆದುಕೊಂಡ ತೀಮಾರ್ನಕ್ಕೆ ಕೇಂದ್ರ ಸರ್ಕಾರ ತಕ್ಷಣ ಅನುಮೋದನೆ ನೀಡಿ ಸಂವಿಧಾನದ 9ನೇ ಅನುಬಂಧಕ್ಕೆ ಸೇರಿಸಬೇಕು ಎಂದು ಒತ್ತಾಯಿಸಿ ಕೇಂದ್ರ ಸರ್ಕಾರ ತುರ್ತು ಕ್ರಮ ಕೈಗೊಳ್ಳಬೇಕು ಎಂದರು.
ಒಳ ಮೀಸಲಾತಿ ಜಾರಿಗೆ ಇರುವ ಅಡಚಣೆಗಳನ್ನು ನಿವಾರಿಸಿ ಸಾಮಾಜಿಕ ನ್ಯಾಯ ಸಾಧಿಸಲು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ. ಖಾಲಿ ಇರುವ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡುವುದು, ಬ್ಯಾಕ್ಲಾಗ್ ಹುದ್ದೆಗಳನ್ನು ಪರಿಶಿಷ್ಟರಿಗೆ ಉಳಿಸುವುದು ಹಾಗೂ ಸಾರ್ವಜನಿಕ-, ಖಾಸಗಿ ಕ್ಷೇತ್ರಗಳಲ್ಲಿ ಮೀಸಲಾತಿ ಜಾರಿಗೊಳಿಸುವುದೂ ಪ್ರಮುಖ ಬೇಡಿಕೆಗಳನ್ನು ವ್ಯಕ್ತಪಡಿಸಿದರು.