ಕೊಪ್ಪಳ ತಾಲೂಕಿನ ಮುನಿರಾಬಾದ್ ಡ್ಯಾಂ ಗ್ರಾಪಂನಲ್ಲಿ ಗುರುವಾರ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಜರುಗಿತು. ಜಿಲ್ಲಾಧ್ಯಕ್ಷ ರೆಡ್ಡಿ ಶ್ರೀನಿವಾಸ, ತಾಲೂಕಾಧ್ಯಕ್ಷ ಬಾಲಚಂದ್ರನ್ ಎಸ್, ತಾಪಂ ಇಒ ದುಂಡಪ್ಪ ತುರಾದಿ, ತಹಸೀಲ್ದಾರ್ ವಿಠ್ಠಲ್ ಚೌಗಲಾ ಸೇರಿದಂತೆ ಸಮಿತಿ ಸದಸ್ಯರು ಇದ್ದರು.
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
ಬಾಲಚಂದ್ರನ್ ಎಸ್. ಸೂಚನೆ
ಗ್ಯಾರಂಟಿ ಪ್ರಗತಿ ಪರಿಶೀಲನಾ ಸಭೆ
ಕೊಪ್ಪಳ: ರಾಜ್ಯ ಸರ್ಕಾರದ ಮಹತ್ವದ ಪಂಚ ಗ್ಯಾರಂಟಿ ಯೋಜನೆಗಳು ಜನಸಾಮಾನ್ಯರಿಗೆ ಸಮರ್ಪಕವಾಗಿ ತಲುಪುವಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ತಾಲೂಕು ಅಧ್ಯಕ್ಷ ಬಾಲಚಂದ್ರನ್ ಎಸ್. ಅವರು ತಿಳಿಸಿದರು.
ತಾಲೂಕಿನ ಮುನಿರಾಬಾದ್ ಡ್ಯಾಂ ಗ್ರಾಪಂ ಸಭಾಂಗಣದಲ್ಲಿ ಗುರುವಾರ ಜರುಗಿದ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮುನಿರಾಬಾದ್ ಡ್ಯಾಂ ಗ್ರಾಮದ ಬಸ್ ನಿಲ್ದಾಣಕ್ಕೆ ಕೆಲವು ಬಸ್ಗಳು ಬಾರದೇ ಹೊರಗಡೆಯಿಂದ ಹೋಗುತ್ತಿರುವ ಬಗ್ಗೆ ಸಮಸ್ಯೆಗಳು ಕೇಳಿಬರುತ್ತಿವೆ. ಕಟ್ಟುನಿಟ್ಟಾಗಿ ಬಸ್ಗಳು ನಿಲ್ದಾಣಕ್ಕೆ ಬರುವಂತೆ ಮಾಡಬೇಕು. ಕೊಪ್ಪಳ ಬಸ್ ನಿಲ್ದಾಣದ ಶೌಚಾಲಯ ಬಳಕೆಗೆ ಮುಕ್ತಗೊಳಿಸುವಂತೆ ಸಾರಿಗೆ ಅಧಿಕಾರಿಗಳಿಗೆ ತಿಳಿಸಿದರು.
ಪದವೀಧರ ನಿರುದ್ಯೋಗಿಗಳಿಗೆ 'ಯುವನಿಧಿ' ಯೋಜನೆಯ ಬಗ್ಗೆ ಹೆಚ್ಚಿನ ಪ್ರಚಾರ ನೀಡಿ. ಹೆಚ್ಚಿನ ಯುವಕರು ಇದರ ಲಾಭ ಪಡೆಯುವಂತೆ ಮಾಡಿಬೇಕು ಎಂದರು. ಅಳವಂಡಿ ಮಾರ್ಗದಲ್ಲಿ ಗ್ರಾಹಕರೊಂದಿಗೆ ಅನುಚಿತವಾಗಿ ವರ್ತಿಸುವ ವಿದ್ಯುತ್ ಪ್ರತಿನಿಧಿಗಳ ಮೇಲೆ ಕ್ರಮ ಕೈಗೊಳ್ಳಲು ಜೆಸ್ಕಾಂ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ತಾಪಂ ಇಒ ದುಂಡಪ್ಪ ತುರಾದಿ, ತಹಸೀಲ್ದಾರ್ ವಿಠ್ಠಲ್ ಚೌಗಲಾ, ಸಮಿತಿಯ ಸದಸ್ಯರಾದ ದೇವರಾಜ ನಡುವಿನಮನಿ, ಜ್ಯೋತಿ ಗೊಂಡಬಾಳ, ರಮೇಶ ಹ್ಯಾಟಿ, ಮಾನ್ವಿ ಪಾಷಾ,ಲಕ್ಷ್ಮಣ ಡೊಳ್ಳಿನ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಮತ್ತು ಗ್ರಾಪಂ ಜನಪ್ರತಿನಿಧಿಗಳು ಇದ್ದರು.