ಕೈಗಾರಿಕಗಳ ವಿರುದ್ಧ ಕ್ರಮಕ್ಕೆ ಆಗ್ರಹ

ಕೈಗಾರಿಕೆಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜೆಡಿಎಸ್​ ರಾಜ್ಯ ಕೋರ್​ ಕಮಿಟಿ ಸದಸ್ಯ ಸಿ.ವಿ.ಚಂದ್ರಶೇಖರ ಸೋಮವಾರ ಬೆಂಗಳೂರಿನಲ್ಲಿ ಮಾಜಿ ಪ್ರಧಾನಿ ಎಚ್​.ಡಿ.ದೇವೇಗೌಡಗೆ ಮನವಿ ಸಲ್ಲಿಸಿದರು.
ಕೈಗಾರಿಕೆಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜೆಡಿಎಸ್​ ರಾಜ್ಯ ಕೋರ್​ ಕಮಿಟಿ ಸದಸ್ಯ ಸಿ.ವಿ.ಚಂದ್ರಶೇಖರ ಸೋಮವಾರ ಬೆಂಗಳೂರಿನಲ್ಲಿ ಮಾಜಿ ಪ್ರಧಾನಿ ಎಚ್​.ಡಿ.ದೇವೇಗೌಡಗೆ ಮನವಿ ಸಲ್ಲಿಸಿದರು.
Published on

ಪ್ರಮುಖ ಮುಖ್ಯಾಂಶಗಳು

  • ಕೇಂದ್ರದ ಗಮನ ಸೆಳೆವ ಭರವಸೆ ನೀಡಿದ ಎಚ್​ಡಿಡಿ
ಕೊಪ್ಪಳ : ಕೊಪ್ಪಳದಲ್ಲಿ ಕೈಗಾರಿಕೆಗಳಿಂದ ಮಾಲಿನ್ಯ ಹೆಚ್ಚಿದ್ದು, ಈ ಬಗ್ಗೆ ಕೇಂದ್ರದ ಗಮನ ಸೆಳೆಯುವಂತೆ ಒತ್ತಾಯಿಸಿ ಜೆಡಿಎಸ್​ ರಾಜ್ಯ ಕೋರ್​ ಕಮಿಟಿ ಸದಸ್ಯ ಸಿ.ವಿ.ಚಂದ್ರಶೇಖರ್​ ಸೋಮವಾರ ಬೆಂಗಳೂರಿನಲ್ಲಿ ಮಾಜಿ ಪ್ರಧಾನಿ ಎಚ್​.ಡಿ.ದೇವೇಗೌಡಗೆ ಮನವಿ ಸಲ್ಲಿಸಿದರು.
ಈ ಹಿಂದೆ ನಾನು ಸಲ್ಲಿಸಿದ ಮನವಿ ಆಧರಿಸಿ ಕೇಂದ್ರ ಸಚಿವ ಎಚ್​.ಡಿ.ಕುಮಾರಸ್ವಾಮಿ ಸೂಚನೆ ಅನುಸಾರ ತಜ್ಞರ ತಂಡ 2024ರ ಡಿಸೆಂಬರ್​ನಲ್ಲಿ ಕೈಗಾರಿಕೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ವರದಿ ಸಲ್ಲಿಸಿದೆ. ನಿಯಮ ಉಲ್ಲಂನೆ ಪತ್ತೆ ಮಾಡಿದ್ದು, ಕೊಪ್ಪಳದ ಪರಿಸರ, ಆರೋಗ್ಯ ಮತ್ತು ಕೃಷಿ ಕ್ಷೇತ್ರದ ಅವನತಿ ಆಗುತ್ತಿದ್ದು, ತಡೆಯುವಂತೆ ಶಿಾರಸ್ಸು ಮಾಡಿದೆ. 6 ತಿಂಗಳಲ್ಲಿ ಅನುಷ್ಠಾನಕ್ಕೆ ಸೂಚಿಸಿದ್ದರೂ 1.5 ವರ್ಷವಾದರೂ ಸರ್ಕಾರ ಕ್ರಮವಹಿಸಿಲ್ಲ. ಪರಿಸ್ಥಿತಿ ಕೈ ಮೀರುತ್ತಿದ್ದು, ಕೇಂದ್ರ ಸರ್ಕಾರ ಮಧ್ಯಸ್ಥಿಕೆವಹಿಸಬೇಕಿದೆ ಎಂದು ಒತ್ತಾಯಿಸಿದರು.
ಕೊಪ್ಪಳದ ಸ್ಥಿತಿ ಕುಮಾರಸ್ವಾಮಿ ಗಮನದಲ್ಲಿದೆ. ಬಹುತೇಕ ವಿಷಯ ರಾಜ್ಯ ಸರ್ಕಾರದ ವ್ಯಾಪ್ತಿಗೆ ಬರುತ್ತವೆ. ರಾಜ್ಯ ಸರ್ಕಾರ ಕರ್ತವ್ಯ ರ್ನಿಲಸಿದರೆ ಕೇಂದ್ರದ ಮಧ್ಯಸ್ಥಿಕೆ ಅನಿವಾರ್ಯವಾಗಲಿದೆ. ಈ ಬಗ್ಗೆ ಕೇಂದ್ರದ ಗಮನ ಸೆಳೆದು ಸೂಕ್ತ ಕ್ರಮಕ್ಕೆ ಒತ್ತಾಯಿಸುವುದಾಗಿ ದೇವೇಗೌಡ ಭರವಸೆ ನೀಡಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net