ಉಪನ್ಯಾಸಕರ ಅಕ್ರಮ ನೇಮಕಾತಿ ತನಿಖೆಗೆ ಆಗ್ರಹ

ಜಿಲ್ಲೆಯ ಕುಷ್ಟಗಿ ಪಟ್ಟಣದ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ ಸೂಕ್ತ ತನಿಖೆ ನಡೆಸುವಂತೆ ಆಗ್ರಹಿಸಿ ಡಿವೈಎಫ್​ಐ ಜಿಲ್ಲಾ ಸಮಿತಿ ಎಡಿಸಿ ಸಿದ್ರಾಮೇಶ್ವರಗೆ ಮನವಿ ಸಲ್ಲಿಸಿದರು. ರಾಜ್ಯ ಸಮಿತಿ ಸದಸ್ಯ ಅಮರೇಶ ಕಡಗದ, ಜಿಲ್ಲಾ ಮುಖಂಡ ಲಕ್ಷ$್ಮಣ ನವಲಹಳ್ಳಿ, ಅತಿಥಿ ಉಪನ್ಯಾಸಕರ ಅಭ್ಯರ್ಥಿಗಳಾದ ಯಮನೂರಪ್ಪ, ಅಶೋಕ ಇದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ಡಿವೈಎಫ್​ಐ ಎಡಿಸಿ ಸಿದ್ರಾಮೇಶ್ವರಗೆ ಮನವಿ
ಕೊಪ್ಪಳ : ಜಿಲ್ಲೆಯ ಕುಷ್ಟಗಿ ಪಟ್ಟಣದ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ, ನಿಯಮ ಉಲ್ಲಂಘನೆ ಹಾಗೂ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್​ ಜಿಲ್ಲಾ ಸಮಿತಿ ತನಿಖೆಗೆ ಆಗ್ರಹಿಸಿ ಗುರುವಾರ ಎಡಿಸಿ ಸಿದ್ರಾಮೇಶ್ವರಗೆ ಮನವಿ ಸಲ್ಲಿಸಲಾಯಿತು.
ಕಾಲೇಜಿನ ಪ್ರಾಚಾರ್ಯರು ಅಧಿಕಾರ ದುರುಪಯೋಗಪಡಿಸಿಕೊಂಡು ಪ್ರತಿಭೆ ಹಾಗೂ ಅರ್ಹತೆ ಹೊಂದಿದ ಅಭ್ಯರ್ಥಿಗಳನ್ನು ಕಡೆಗಣಿಸಿ, ತಮ್ಮ ಇಚ್ಛೆಯ ಅಭ್ಯರ್ಥಿಗಳನ್ನು ಅತಿಥಿ ಉಪನ್ಯಾಸಕರಾಗಿ ಆಯ್ಕೆ ಮಾಡಿದ್ದಾರೆ. ಸರ್ಕಾರದ ನಿಯಮಾನುಸಾರ ಸಮಿತಿ ಮೂಲಕ ಒಂದೇ ದಿನದಲ್ಲಿ ಆಯ್ಕೆ ಪ್ರಕ್ರಿಯೆ ನಡೆಸಬೇಕಿದ್ದರೂ, ವಿವಿಧ ವಿಫಿಯಗಳಿಗೆ ಬೇರೆ ಬೇರೆ ದಿನಗಳಲ್ಲಿ ಆಯ್ಕೆ ನಡೆಸಲಾಗಿದೆ ಎಂದು ದೂರಿದರು.
ಕಳೆದ ಶೈಕ್ಷಣಿಕ ವರ್ಷದಲ್ಲಿಯೂ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮಗಳಾಗಿದ್ದು, ಅತಿಥಿ ಉಪನ್ಯಾಸಕರ ಗೌರವಧನ ಹಾಗೂ ವಿದ್ಯಾರ್ಥಿನಿಯರಿಂದ ಸಂಗ್ರಹಿಸಲಾದ ಕಾಲೇಜು ಅಭಿವೃದ್ಧಿ ಸಮಿತಿ ನಿಧಿಯ ದುರುಪಯೋಗ ನಡೆದಿರುವ ಶಂಕೆ ಇದೆ. ಈ ಎಲ್ಲ ಆರೋಪಗಳ ಕುರಿತು ಸಮಗ್ರ ತನಿಖೆ ನಡೆಸಿ, ಪ್ರಸ್ತುತ ಆಯ್ಕೆ ಪಟ್ಟಿಯನ್ನು ರದ್ದುಗೊಳಿಸಿ ಸರ್ಕಾರದ ನಿಯಮಾನುಸಾರ ಹೊಸದಾಗಿ ಆಯ್ಕೆ ಪ್ರಕ್ರಿಯೆ ನಡೆಸಬೇಕು ಎಂದು ಆಗ್ರಹಿಸಿದರು.
ಡಿವೈಎಫ್​ಐ ರಾಜ್ಯ ಸಮಿತಿ ಸದಸ್ಯ ಅಮರೇಶ ಕಡಗದ, ಜಿಲ್ಲಾ ಮುಖಂಡ ಲಕ್ಷ$್ಮಣ ನವಲಹಳ್ಳಿ, ಅತಿಥಿ ಉಪನ್ಯಾಸಕರ ಅಭ್ಯರ್ಥಿಗಳಾದ ಯಮನೂರಪ್ಪ, ಅಶೋಕ ಹಾಗೂ ಉಮೇಶ ದೋಟಿಹಾಳ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net