56,432 ಹುದ್ದೆಗಳ ನೇಮಕಾತಿಗೆ ಆಗ್ರಹಿಸಿ ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿಯಿಂದ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಸಮಿತಿಯ ಮುಖಂಡರಾದ ಶರಣು ಪಾಟೀಲ್, ಶರಣು ಗಡ್ಡಿ, ಸುಭಾನ್ ಸಾಬ್, ಶಿವಮೂರ್ತಿ ವದಗನಾಳ್, ರವಿ ಹೂವಿನಾಳ್ ಇದ್ದರು.
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
ಹೋರಾಟ ಸಮಿತಿಯಿಂದ ಸರ್ಕಾರಕ್ಕೆ ಮನವಿ ಸಲ್ಲಿಕೆ
ಕೊಪ್ಪಳ : ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿಯಿಂದ ರಾಜ್ಯ ಸರ್ಕಾರ ಘೋಷಿಸಿರುವ 56,432 ಹುದ್ದೆಗಳ ನೇಮಕಾತಿಗೆ ತಕ್ಷಣ ಅಧಿಸೂಚನೆ ಹೊರಡಿಸುವಂತೆ ಆಗ್ರಹಿಸಿ ಶುಕ್ರವಾರ ಡಿಸಿ ಕಚೇರಿ ಚುನಾವಣಾ ತಹಶೀಲ್ದಾರ ರವಿಕುಮಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ರಾಜ್ಯ ಸರ್ಕಾರ ಬೆಳಗಾವಿ ಚಳಿಗಾಲ ಅಧಿವೇಶನದಲ್ಲಿ 56,432 ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಘೋಷಿಸಿದ್ದರೂ ಐದು ತಿಂಗಳು ಕಳೆದರೂ ಯಾವುದೇ ಅಧಿಸೂಚನೆ ಹೊರಡಿಸದಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿ. ವಿವಿಧ ಇಲಾಖೆಗಳ ಸಚಿವರು ನೇಮಕಾತಿ ಶೀಘ್ರದಲ್ಲೇ ನಡೆಯಲಿದೆ ಎಂದು ಹೇಳಿಕೆ ನೀಡುತ್ತಿದ್ದರೂ ಕ್ರಮ ಕೈಗೊಳ್ಳದಿರುವುದು ಉದ್ಯೋಗಾಕಾಂಕ್ಷಿಗಳಲ್ಲಿ ನಿರಾಸೆ ಮೂಡಿಸಿದೆ ಎಂದು ದೂರಿದರು.
ಕೆಪಿಎಸ್ಸಿ ನಡೆಸಿದ ಕೆಎಎಸ್ ಪರೀಕ್ಷೆಯಲ್ಲಿ ಅಕ್ರಮಗಳ ಆರೋಪದ ಸಮಗ್ರ ತನಿಖೆ ನಡೆಸಬೇಕು ಹಾಗೂ ಕೆಪಿಎಸ್ಸಿಯನ್ನು ಪಾರದರ್ಶಕಗೊಳಿಸಲು ಪಿ.ಸಿ. ಹೋಟಾ ಸಮಿತಿ ವರದಿಯನ್ನು ತಕ್ಷಣ ಜಾರಿಗೆ ತರಬೇಕು. ಹಾಗೆಯೇ ನೇಮಕಾತಿ ಪರೀಕ್ಷೆಗಳ ದುಬಾರಿ ಅರ್ಜಿ ಶುಲ್ಕ ರದ್ದುಪಡಿಸಿ, ಅಭ್ಯರ್ಥಿಗಳಿಗೆ ಉಚಿತ ಸಾರಿಗೆ ಸೌಲಭ್ಯ ಕಲ್ಪಿಸಬೇಕು. ಪ್ರತಿ ವರ್ಫಿ ನೇಮಕಾತಿ ಕ್ಯಾಲೆಂಡರ್ ಪ್ರಕಟಿಸಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳಲ್ಲಿನ ಖಾಲಿ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು ಎಂದು ಆಗ್ರಹಿಸಲಾಯಿತು.
ಹೋರಾಟ ಸಮಿತಿಯ ಮುಖಂಡರಾದ ಶರಣು ಪಾಟೀಲ್, ಶರಣು ಗಡ್ಡಿ, ಸುಭಾನ್ ಸಾಬ್, ಉದ್ಯೋಗಾಕಾಂಕ್ಷಿಗಳಾದ ಶಿವಮೂರ್ತಿ ವದಗನಾಳ್, ರವಿ ಹೂವಿನಾಳ್ ಇದ್ದರು.