ಬರಪೀಡಿತ ಜಿಲ್ಲೆ ಎಂದು ಘೋಷಿಸಲು ಕರವೇ ಆಗ್ರಹ

ಜಿಲ್ಲೆಯನ್ನು ತಕ್ಷಣ ಬರಪೀಡಿತ ಎಂದು ಘೋಷಿಸಿ ವಿಶೇಷ ಪರಿಹಾರ ಪ್ಯಾಕೇಜ್​ ಪ್ರಕಟಿಸುವಂತೆ ಒತ್ತಾಯಿಸಿ ಮಂಗಳವಾರ ಕರವೇಯಿಂದ ಎಡಿಸಿ ಸಿದ್ದರಾಮೇಶ್ವರಗೆ ಮನವಿ ಸಲ್ಲಿಸಲಾಯಿತು. ಜಿಲ್ಲಾಧ್ಯಕ್ಷ ಬಿ. ಗಿರೀಶಾನಂದ ಜ್ಞಾನಸುಂದರ, ಪದಾಧಿಕಾರಿಗಳಾದ  ಹನುಮಂತ ಬೆಸ್ತರ, ಶಿವನಗೌಡ ಪಾಟೀಲ ಹಲಗೇರಿ,ಹುಸೇನಬಾಷಾ ಮಣ್ಣೂರು, ಕಲ್ಲಯ್ಯ ಹಿರೇಮಠ, ಸಾಯಿಕುಮಾರ ಅಳ್ಳಳ್ಳಿ ಇದ್ದರು.
ಜಿಲ್ಲೆಯನ್ನು ತಕ್ಷಣ ಬರಪೀಡಿತ ಎಂದು ಘೋಷಿಸಿ ವಿಶೇಷ ಪರಿಹಾರ ಪ್ಯಾಕೇಜ್​ ಪ್ರಕಟಿಸುವಂತೆ ಒತ್ತಾಯಿಸಿ ಮಂಗಳವಾರ ಕರವೇಯಿಂದ ಎಡಿಸಿ ಸಿದ್ದರಾಮೇಶ್ವರಗೆ ಮನವಿ ಸಲ್ಲಿಸಲಾಯಿತು. ಜಿಲ್ಲಾಧ್ಯಕ್ಷ ಬಿ. ಗಿರೀಶಾನಂದ ಜ್ಞಾನಸುಂದರ, ಪದಾಧಿಕಾರಿಗಳಾದ ಹನುಮಂತ ಬೆಸ್ತರ, ಶಿವನಗೌಡ ಪಾಟೀಲ ಹಲಗೇರಿ,ಹುಸೇನಬಾಷಾ ಮಣ್ಣೂರು, ಕಲ್ಲಯ್ಯ ಹಿರೇಮಠ, ಸಾಯಿಕುಮಾರ ಅಳ್ಳಳ್ಳಿ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಕೊಪ್ಪಳಕ್ಕೆ ವಿಶೇಷ ಪ್ಯಾಕೇಜ್​ ಘೋಷಿಸುವಂತೆ ಮನವಿ
ಕೊಪ್ಪಳ : ಮುಂಗಾರು ಹಂಗಾಮಿನಲ್ಲಿ ತೀವ್ರ ಮಳೆ ಕೊರತೆಯಿಂದ ಕೊಪ್ಪಳ ಜಿಲ್ಲೆಯ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯನ್ನು ತಕ್ಷಣ ಬರಪೀಡಿತ ಎಂದು ಘೋಷಿಸಿ ವಿಶೇಷ ಪರಿಹಾರ ಪ್ಯಾಕೇಜ್​ ಪ್ರಕಟಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಬಿ. ಗಿರೀಶಾನಂದ ಜ್ಞಾನಸುಂದರ ಆಗ್ರಹಿಸಿದರು.
ನಗರದ ಜಿಲ್ಲಾಡಳಿತ ಭವನದಲ್ಲಿ ಮಂಗಳವಾರ ಕರವೇ ಜಿಲ್ಲಾ ಘಟಕದಿಂದ ಅಪರ ಜಿಲ್ಲಾಧಿಕಾರಿ ಸಿದ್ದರಾಮೇಶ್ವರ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಿ ಅವರು ಮಾತನಾಡಿದರು.
ಜಿಲ್ಲೆಯ ಬಹುತೇಕ ರೈತರು ಕೃಷಿಯನ್ನೇ ಅವಲಂಬಿಸಿ ಜೀವನ ಸಾಗಿಸುತ್ತಿದ್ದು, ಈ ಬಾರಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಹಿನ್ನೆಲೆಯಲ್ಲಿ ರೈತರು ಸಾಲ ಮಾಡಿ ಬಿತ್ತನೆ ಮಾಡಿದ ಬೆಳೆಗಳು ಒಣಗಿ ನಾಶವಾಗುತ್ತಿವೆ. ಮೆಕ್ಕೆಜೋಳ, ಸಜ್ಜೆ, ತೊಗರಿ, ಹತ್ತಿ, ಮೆಣಸಿನಕಾಯಿ ಸೇರಿದಂತೆ ವಿವಿಧ ಬೆಳೆಗಳು ತೀವ್ರ ಹಾನಿಗೊಳಗಾಗಿದ್ದು, ರೈತರು ಕುಟುಂಬ ನಿರ್ವಹಣೆ ಹಾಗೂ ಕೃಷಿ ಸಾಲ ಮರುಪಾವತಿಗೂ ಪರದಾಡುವ ಪರಿಸ್ಥಿತಿ ನಿಮಾರ್ಣವಾಗಿದೆ ಎಂದು ತಿಳಿಸಿದರು.
ಯಲಬುರ್ಗಾ, ಕುಕನೂರು, ಕನಕಗಿರಿ, ಕುಷ್ಟಗಿ ಸೇರಿದಂತೆ ಮಳೆ ಆಶ್ರಿತ ತಾಲೂಕುಗಳಲ್ಲಿ ಪರಿಸ್ಥಿತಿ ಗಂಭೀರವಾಗಿದ್ದು, ಜಾನುವಾರುಗಳಿಗೆ ಮೇವು ಮತ್ತು ಕುಡಿಯುವ ನೀರಿನ ಕೊರತೆಯೂ ಹೆಚ್ಚುತ್ತಿದೆ. ಸರ್ಕಾರವು ತಕ್ಷಣ ಸಮಗ್ರ ಬೆಳೆಹಾನಿ ಸಮೀಕ್ಷೆ ನಡೆಸಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆಯೆಂದು ಘೋಷಿಸಬೇಕು. ರೈತರ ಕೃಷಿ ಸಾಲಗಳ ವಸೂಲಾತಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ ಸಾಲ ಮನ್ನಾ ಮಾಡಬೇಕು. ಜಾನುವಾರುಗಳಿಗೆ ಮೇವು ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಕೃಷಿ ಪಂಪ್​ಸೆಟ್​ಗಳಿಗೆ ನಿರಂತರ ವಿದ್ಯುತ್​ ಪೂರೈಕೆ, ಬಿತ್ತನೆ ಬೀಜ ಹಾಗೂ ಯೂರಿಯಾ ರಸಗೊಬ್ಬರವನ್ನು ಸಕಾಲದಲ್ಲಿ ಒದಗಿಸುವ ಜೊತೆಗೆ ಬೆಳೆಹಾನಿಗೆ ಸೂಕ್ತ ಪರಿಹಾರಧನ ಬಿಡುಗಡೆ ಮಾಡಿ ವಿಶೇಷ ಪರಿಹಾರ ಪ್ಯಾಕೇಜ್​ ಘೋಷಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಜಿಲ್ಲಾ ಯುವ ಘಟಕದ ಅಧ್ಯಕ್ಷ ಹನುಮಂತ ಬೆಸ್ತರ, ಜಿಲ್ಲಾ ಉಪಾಧ್ಯಕ್ಷ ಶಿವನಗೌಡ ಪಾಟೀಲ ಹಲಗೇರಿ, ಪದಾಧಿಕಾರಿಗಳಾದ ಹುಸೇನಬಾಷಾ ಮಣ್ಣೂರು, ಕಲ್ಲಯ್ಯ ಹಿರೇಮಠ, ಸಾಯಿಕುಮಾರ ಅಳ್ಳಳ್ಳಿ, ಬೋರಮ್ಮ ತಳಗಡೆ, ಶಂಕ್ರಮ್ಮ ಮ್ಯಾಗಳಮನಿ, ಶರಣಮ್ಮ ಸಂಗನಳ್ಳಿ, ಶೇಖರ ಈಳಗೇರ, ವಿರೇಶ ಮುಂಡಾಸದ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net