ಸ್ವಯಂ ದೂರು ದಾಖಲಿಸಲು ಆಗ್ರಹ

ಕೇಂದ್ರ ಸಚಿವ ವಿ.ಸೋಮಣ್ಣ ಮೇಲೆ ಹಲ್ಲೆಗೆ ಯತ್ನಿಸಿದವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಬಿಜೆಪಿ ನಾಯಕರು ಎಸ್ಪಿ ಡಾ.ರಾಮ್​ ಎಲ್​.ಅರಸಿದ್ದಿಗೆ ಒತ್ತಾಯಿಸಿದರು.
ಕೇಂದ್ರ ಸಚಿವ ವಿ.ಸೋಮಣ್ಣ ಮೇಲೆ ಹಲ್ಲೆಗೆ ಯತ್ನಿಸಿದವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಬಿಜೆಪಿ ನಾಯಕರು ಎಸ್ಪಿ ಡಾ.ರಾಮ್​ ಎಲ್​.ಅರಸಿದ್ದಿಗೆ ಒತ್ತಾಯಿಸಿದರು.
Published on

ಪ್ರಮುಖ ಮುಖ್ಯಾಂಶಗಳು

  • ಬಿಜೆಪಿ ನಾಯಕರ ಆಗ್ರಹ
ಕೊಪ್ಪಳ: ಕೇಂದ್ರ ಸಚಿವ ವಿ.ಸೋಮಣ್ಣ ಅವರ ಮೇಲೆ ಹಲ್ಲೆಗೆ ಮುಂದಾದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಜಿಲ್ಲಾ ಬಿಜೆಪಿ ನಿಯೋಗವು ಎಸ್ಪಿ ಡಾ.ರಾಮ್​.ಎಲ್​.ಅರಸಿದ್ದಿ ಅವರಿಗೆ ಒತ್ತಾಯಿಸಿದರು.
ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸದಸ್ಯ ಬಸವರಾಜ ಕ್ಯಾವಟರ್​ ಮಾತನಾಡಿ, ತಾಲೂಕಿನ ಹಿಟ್ನಾಳ್​ ಗ್ರಾಮದ ರೈಲ್ವೆ ಸೇತುವೆ ಕಾಮಗಾರಿ ಭೂಮಿಪೂಜೆಗೆ ಎರಡು ದಿನಗಳ ಹಿಂದ ರೈಲ್ವೆ ರಾಜ್ಯ ಖಾತೆಯ ಸಚಿವ ವಿ.ಸೋಮಣ್ಣ ಬಂದಾಗ ಅನಗತ್ಯ ವಿವಾದ ಮಾಡಲಾಗಿದೆ. ಶಿಷ್ಟಾಚಾರ ಉಲ್ಲಂಘನೆ ಆಗದಿದ್ದರೂ ಅವರಿಗೆ ಅವಮಾನ ಮಾಡುವ ಉದ್ದೇಶದಿಂದ, ಹಲ್ಲೆಗೆ ಜಿಲ್ಲೆಯ ಕಾಂಗ್ರೆಸ್​ ನಾಯಕರು ಹಾಗೂ ಕಾರ್ಯಕರ್ತರು ಮುಂದಾಗಿದ್ದು ಸರಿಯಲ್ಲ. ಸಂಸದ- ಶಾಸಕರ ತವರೂರಿನಲ್ಲಿಯೇ ಹೀಗಾಗಿರುವುದು ದುರಂತ ಎಂದರು.
ವಿಧಾನ ಪರಿಷತ್​ ಸದಸ್ಯೆ ಹೇಮಲತಾ ನಾಯಕ್​ ಮಾತನಾಡಿ, ಈ ಪ್ರಕರಣದಲ್ಲಿ ತ್ವರಿತವಾಗಿ ಸೊಮೋಟೋ ಪ್ರಕರಣ ದಾಖಲು ಮಾಡಿಕೊಂಡು ದುಷತ್ಯಕ್ಕೆ ಕಾರಣ ಆದವರ ಮೇಲೆ ಕ್ರಮ ಜರುಗಿಸಬೇಕು. ಜಿಲ್ಲೆಯ ಅಭಿವೃದ್ಧಿಗಾಗಿ ಭೂಮಿ ಪೂಜೆಗೆ ಬಂದಾಗ ಕಾಂಗ್ರೆಸ್​ ನಾಯಕರು ಉದ್ದೇಶ ಪೂರ್ವಕವಾಗಿ ಹಲ್ಲೆಗೆ ಮುಂದಾಗಿದ್ದು ಸರಿಯಲ್ಲ. ಜಿಲ್ಲೆಯ ಕಾಂಗ್ರೆಸ್ಸಿಗರಿಗೆ ಅಭಿವೃದ್ಧಿ ಬೇಕಿಲ್ಲ. ಹೀಗಾಗಿ ಇಂತಹ ಕೆಲಸಗಳಿಗೆ ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ಆರೋಪಿಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಬಸವರಾಜ ದಡೇಸ್ಗೂರು ಮಾತನಾಡಿ, ಈ ಘಟನೆಯ ಹಿಂದೆ ಷಡ್ಯಂತ್ರವಿದೆ. ಕೇಂದ್ರ ಸಚಿವರು ಜಿಲ್ಲೆಗೆ ಬಂದಾಗ ರಕ್ಷಣೆ ಸಿಗದಿದ್ದರೇ ಹೇಗೆ ? ಈ ವಿಚಾರದಲ್ಲಿ ಪೊಲೀಸ್​ ಇಲಾಖೆ, ಸರಿಯಾದ ನ್ಯಾಯ ಒದಗಿಸಬೇಕು. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳಬೇಕೆಂದು ಒತ್ತಾಯಿಸಿದರು.
ಮುಖಂಡರಾದ ಅಪ್ಪಣ್ಣ ಪದಕಿ, ಎಸ್​.ಆರ್​. ಭೂಸನೂರಮಠ, ಪೀರಾ ಹುಸೇನ ಹೊಸಳ್ಳಿ, ರಾಘವೇಂದ್ರ ಪಾನಗಂಟಿ, ಈಶಪ್ಪ ಮಾದಿನೂರ, ರಾಜು ಬಾಕಳೆ, ಸುನಿಲ ಹೆಸರೂರ, ಉಮೇಶ, ರಮೇಶ ನಾಡಗೇರಾ, ರಾಜು ವಸ್ತ್ರದ. ಸೇರಿದಂತೆ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net