ಅಭಿವೃದ್ಧಿ ಕಾಮಗಾರಿಗಳ ಕ್ರಿಯಾಯೋಜನೆ ರೂಪಿಸಿ

ಗಂಗಾವತಿ ತಾಪಂ ಮಂಥನ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ವಿಶೇಷ ಸಭೆಯಲ್ಲಿ ಶಾಸಕ ಗಾಲಿ ಜನಾರ್ದನರೆಡ್ಡಿ ಮಾತನಾಡಿದರು. ತಾಪಂ ಇಒ ರಾಮರೆಡ್ಡಿ ಪಾಟೀಲ್, ಸಮಿತಿ ಉಪಾಧ್ಯಕ್ಷೆ  ಅಕ್ಕಮ್ಮ, ತಹಸೀಲ್ದಾರ್ ಯು.ನಾಗರಾಜ, ಪೌರಾಯುಕ್ತ ಆರ್.ವಿರೂಪಾಕ್ಷ ಮೂರ್ತಿ ಇದ್ದರು.
ಗಂಗಾವತಿ ತಾಪಂ ಮಂಥನ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ವಿಶೇಷ ಸಭೆಯಲ್ಲಿ ಶಾಸಕ ಗಾಲಿ ಜನಾರ್ದನರೆಡ್ಡಿ ಮಾತನಾಡಿದರು. ತಾಪಂ ಇಒ ರಾಮರೆಡ್ಡಿ ಪಾಟೀಲ್, ಸಮಿತಿ ಉಪಾಧ್ಯಕ್ಷೆ ಅಕ್ಕಮ್ಮ, ತಹಸೀಲ್ದಾರ್ ಯು.ನಾಗರಾಜ, ಪೌರಾಯುಕ್ತ ಆರ್.ವಿರೂಪಾಕ್ಷ ಮೂರ್ತಿ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಶಾಸಕ ಗಾಲಿ ಜನಾರ್ದನ ರೆಡ್ಡಿಮ ಸೂಚನೆ
  • ತಾಲೂಕು ಯೋಜನೆ ಮತ್ತು ಅಭಿವೃದ್ಧಿ ಸಮಿತಿಯಿಂದ ವಿಶೇಷ ಸಭೆ
ಗಂಗಾವತಿ: ಗ್ರಾಪಂ ವ್ಯಾಪ್ತಿಯ ವಾರ್ಡ್‌ವಾರು ಗ್ರಾಮಸಭೆಯಲ್ಲಿ ನಿರ್ಧರಿಸಿರುವ ಯೋಜನೆಗಳ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಾಗುತ್ತಿದ್ದು, ಸಭೆಯ ಮೂಲಕವೇ ಕ್ರಿಯಾಯೋಜನೆ ರೂಪಿಸಿ ಎಂದು ಶಾಸಕ ಗಾಲಿ ಜನಾರ್ದನ ರೆಡ್ಡಿ ತಿಳಿಸಿದರು.
ನಗರದ ತಾಪಂ ಮಂಥನ ಸಭಾಂಗಣದಲ್ಲಿ ತಾಲೂಕು ಯೋಜನೆ ಮತ್ತು ಅಭಿವೃದ್ಧಿ ಸಮಿತಿಯಿಂದ ಶುಕ್ರವಾರ ಹಮ್ಮಿಕೊಂಡಿದ್ದ ವಿಶೇಷ ಸಭೆಯಲ್ಲಿ ಮಾತನಾಡಿದರು.
ರಾಜ್ಯ ಮತ್ತು ಕೇಂದ್ರ ಪುರಸ್ಕೃತ ಯೋಜನೆಗಳನ್ನು ಸಮರ್ಪಕ ಅನುಷ್ಠಾನಗೊಳಿಸಬೇಕಿದ್ದು, ಸಭೆಯ ಮೂಲಕ ಅಭಿವೃದ್ಧಿ ಕಾಮಗಾರಿಗಳ ಕ್ರಿಯಾಯೋಜನೆ ರೂಪಿಸಬೇಕು. ವೈಯಕ್ತಿಕ ಮತ್ತು ಸಮುದಾಯ ಯೋಜನೆ ಲಾನುಭವಿಗಳನ್ನು ಪಾರದರ್ಶಕತೆಯಿಂದ ಆಯ್ಕೆ ಮಾಡಬೇಕು. ಗ್ರಾಮೀಣ ಭಾಗದ ಸಮಗ್ರ ಅಭಿವೃದ್ಧಿಗೆ ಸಮಿತಿ ಸಭೆ ಮಹತ್ವ ಪಡೆದುಕೊಂಡಿದ್ದು, ಗ್ರಾಮ ಸ್ವರಾಜ್ ಕಲ್ಪನೆಯ ಸಾಕಾರಕ್ಕೆ ಗ್ರಾಮವಾರು ವಾರ್ಡ ಸಭೆ ಪೂರಕವಾಗಿದೆ ಎಂದರು.
ಸಭೆಯಲ್ಲಿ ಆದ್ಯತೆ ಮೇರೆಗೆ ಕಾಮಗಾರಿಗಳನ್ನು ಆಯ್ಕೆ ಮಾಡಿಕೊಳ್ಳಬೇಕು. ಗ್ರಾಮಸಭೆಯ ಪ್ರಸ್ತಾವನೆಯನ್ನು ಟಿಪಿಡಿಸಿ ಸಭೆಯಲ್ಲಿ ಚರ್ಚಿಸಿ ಅನುಮೋದನೆಗೆ ಜಿಲ್ಲಾ ಸಮಿತಿಗೆ ಕಳುಹಿಸಲಾಗುವುದು. 2026-27ನೇ ಸಾಲಿನಲ್ಲಿ ಅಂದಾಜು 200 ಕೋಟಿ ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿಗಳ ಕ್ರಿಯಾಯೋಜನೆ ರೂಪಿಸಲಾಗಿದೆ ಎಂದರು.
ತಾಪಂ ಇಒ ರಾಮರೆಡ್ಡಿ ಪಾಟೀಲ್ ಮಾತನಾಡಿ, ಗ್ರಾಮೀಣಾಭಿವೃದ್ಧಿಗೆ ಸಮಿತಿ ನೆರವಾಗಿದ್ದು, ರಾಜ್ಯ ಮತ್ತು ಕೇಂದ್ರದ ಅನುದಾನ ಕ್ರೋಡೀಕರಿಸಿ, ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು. ವೈಯಕ್ತಿಕ, ಸಮುದಾಯಿಕ ಕಾಮಗಾರಿಗಳಿಗೆ ಆದ್ಯತೆ ನೀಡಲಾಗಿದೆ ಎಂದರು.
ಸಮಿತಿ ಉಪಾಧ್ಯಕ್ಷೆ ಅಕ್ಕಮ್ಮ, ಸದಸ್ಯ ಹಾಗೂ ತಹಸೀಲ್ದಾರ್ ಯು.ನಾಗರಾಜ, ಪೌರಾಯುಕ್ತ ಆರ್.ವಿರೂಪಾಕ್ಷ ಮೂರ್ತಿ, ಪ್ರಮುಖರಾದ ಮೇಘರಾಣಿ, ಮಂಜಮ್ಮ ಶಿವನಗೌಡ, ಕೊಟ್ರೇಶ ಸೇರಿ ತಾಲೂಕು ಮಟ್ಟದ ಅಧಿಕಾರಿಗಳು ಮತ್ತು ಪಿಡಿಒಗಳಿದ್ದರು.
ಕೆಲವೇ ದಿನಗಳಲ್ಲಿ ಡಿಕೆಶಿ ಸಿಎಂ
ಗಂಗಾವತಿ: ಸಿದ್ದರಾಮಯ್ಯ ಅಧಿಕಾರದಿಂದ ಕೆಳಗಿಳಿಯಲಿದ್ದು, ಕೆಲವೇ ದಿನಗಳಲ್ಲಿ ಡಿ.ಕೆ. ಶಿವಕುಮಾರ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಶಾಸಕ ಗಾಲಿ ಜನಾರ್ದನರೆಡ್ಡಿ ಹೇಳಿದರು. ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ಒಳ ಒಪ್ಪಂದದಂತೆ ಇನ್ನುಳಿದ ಅವಧಿಗೆ ಡಿ.ಕೆ.ಶಿವಕುಮಾರ ಸಿಎಂ ಆಗಲಿದ್ದಾರೆಂಬ ವಿಚಾರ ಸಿದ್ದರಾಮಯ್ಯ ಆಪ್ತವಲಯಗಳಿಂದ ತಿಳಿದುಬಂದಿದೆ. ಕೆಲದಿನಗಳಿಂದ ನಡೆಯುತ್ತಿರುವ ವಿದ್ಯಮಾನಗಳಿಂದ ಆಡಳಿತ ವ್ಯವಸ್ಥೆ ಸ್ತಬ್ಧವಾಗಿದ್ದು, ಅಭಿವೃದ್ಧಿ ಕಾರ್ಯಗಳಿಗೆ ಹಿನ್ನಡೆಯಾಗಿದೆ. ಯಾರ ಮಾತು ಕೇಳಬೇಕೆಂಬ ಗೊಂದಲದಲ್ಲಿ ಅಧಿಕಾರಿಗಳಿದ್ದಾರೆ. ಎಲ್ಲವನ್ನು ಗಮನಿಸುತ್ತಿರುವ ಕಾಂಗ್ರೆಸ್ ಹೈಕಮಾಂಡ್, ರಾಜ್ಯದ ಸಮಸ್ಯೆಯನ್ನು ಶೀಘ್ರವೇ ಬಗೆಹರಿಸಲಿದೆ ಎಂದರು.
"

ಅಭಿವೃದ್ಧಿ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ರಾಜಕೀಯ ಮಾಡಲ್ಲ. ಎರಡು ದಿನದ ಹಿಂದೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಗಂಗಾವತಿಯಲ್ಲಿ ಸ್ಯಾಟ್‌ಲೈಟ್ ಹೊಸ ಬಸ್ ನಿಲ್ದಾಣದ ನಿರ್ಮಾಣಕ್ಕೆ ಒಪ್ಪಿಗೆ ದೊರೆತಿದ್ದು, 17.50 ಕೋಟಿ ರೂ. ಅನುದಾನಕ್ಕೆ ಆಡಳಿತಾತ್ಮಕ ಅನುಮೋದನೆ ನೀಡಿದೆ. ನಗರದ ಕನಕಗಿರಿ ರಸ್ತೆಯ ಕೃಷಿ ವಿಜ್ಞಾನ ಕೇಂದ್ರದ ಸುಪರ್ದಿಯಲ್ಲಿರುವ 5 ಎಕರೆ ಜಾಗೆ ಮಂಜೂರಾಗಿದ್ದು, ಶೀಘ್ರವೇ ಟೆಂಡರ್ ಪ್ರಕ್ರಿಯೆ ನಡೆಯಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net