ಸಮುದಾಯವಾರು ಬೇಡಿಕೆಗೆ ಸ್ಪಂದನೆ

ಕಾರಟಗಿ ರೈಲು ನಿಲ್ದಾಣ ರಸ್ತೆಯಲ್ಲಿ ಭಗೀರಥ(ಉಪ್ಪಾರ )ಸೇವಾ ಸಮಿತಿಯ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಸಚಿವ ಶಿವರಾಜ ತಂಗಡಗಿ ಮಂಗಳವಾರ ಭೂಮಿಪೂಜೆ ನೆರವೇರಿಸಿದರು. ಪುರಸಭೆ ಅಧ್ಯಕ್ಷ ಮಂಜುನಾಥ ಮೇಗೂರು, ಶರಣಪ್ಪ ಪರಕಿ ಇದ್ದರು.
ಕಾರಟಗಿ ರೈಲು ನಿಲ್ದಾಣ ರಸ್ತೆಯಲ್ಲಿ ಭಗೀರಥ(ಉಪ್ಪಾರ )ಸೇವಾ ಸಮಿತಿಯ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಸಚಿವ ಶಿವರಾಜ ತಂಗಡಗಿ ಮಂಗಳವಾರ ಭೂಮಿಪೂಜೆ ನೆರವೇರಿಸಿದರು. ಪುರಸಭೆ ಅಧ್ಯಕ್ಷ ಮಂಜುನಾಥ ಮೇಗೂರು, ಶರಣಪ್ಪ ಪರಕಿ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಸಚಿವ ಶಿವರಾಜ ತಂಗಡಗಿ ಹೇಳಿಕೆ
  • ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ
ಕಾರಟಗಿ: ಕ್ಷೇತ್ರದಲ್ಲಿ ಸಮುದಾಯವಾರು ಬೇಡಿಕೆಗೆ ಸ್ಪಂದಿಸಿ ಸಮುದಾಯ ಭವನಗಳನ್ನು ನಿರ್ಮಿಸಲಾಗುತ್ತಿದ್ದು ಮುಂದಿನ ದಿನಗಳಲ್ಲಿಯೂ ಎಲ್ಲ ಸಮಾಜದವರು ಆಶೀರ್ವದಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಹೇಳಿದರು.
ಪಟ್ಟಣದ ಸೇರಿದಂತೆ ನಾನಾ ಕಡೆ 7.36 ಕೋಟಿ ರೂ. ವೆಚ್ಚದ ಸಮುದಾಯ ಭವನ ಇತರ ಅಭಿವೃದ್ಧಿ ಕಾಮಗಾರಿಗಳಿಗೆ ಮಂಗಳವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.
ಕಳೆದ ಎರಡು ಅವಧಿಗಳಲ್ಲಿ ಸಮುದಾಯ ಭವನಗಳಿಗಾಗಿ ನಾನಾ ಸಮುದಾಯಗಳಿಂದ ಸಾಕಷ್ಟು ಬೇಡಿಕೆ ಬಂದಿತ್ತು. ಈ ಹಿನ್ನೆಲೆಯಲ್ಲಿ ಈ ಬಾರಿ ಅತಿ ಹೆಚ್ಚು ಸಮುದಾಯ ಭವನಗಳನ್ನು ನಿರ್ಮಿಸಲಾಗುತ್ತಿದ್ದು, ಎಲ್ಲ ಸಮುದಾಯಗಳ ಹಿತ ಕಾಯಲಾಗುತ್ತಿದೆ. ಜತೆಗೆ ಪಟ್ಟಣದಲ್ಲಿ ಕಸ ವಿಲೇವಾರಿ ಘಟಕಕ್ಕೆ 3 ಕೋಟಿ, ಪ್ರಮುಖ ರಸ್ತೆಗಳ ವಿಸ್ತರಣೆ, ವಿದ್ಯುದೀಪಗಳ ಅಳವಡಿಕೆ ಹಾಗೂ ಜನನಿಬಿಡ ಪ್ರದೇಶಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸಲಾಗುತ್ತಿದೆ ಎಂದು ತಿಳಿಸಿದರು.
ಬಿಜೆಪಿ ವಿರುದ್ಧ ವಾಗ್ದಾಳಿ
ದೇಶದಲ್ಲಿ ಮೋದಿ ಹವಾ ಮುಗಿದಿದೆ. ಹೀಗಾಗಿ ಬಿಜೆಪಿಯವರು ಮಹಿಳಾ ಮೀಸಲಾತಿ ಗಿಮಿಕ್ ನಡೆಸುತ್ತಿದ್ದಾರೆ. 2010ರಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ರಾಜ್ಯ ಸಭೆಯಲ್ಲಿ ಮಹಿಳಾ ಮೀಸಲಾತಿ ಜಾರಿಗೊಳಿಸಲು ಮುಂದಾದಾಗ ಬಿಜೆಪಿಯವರೇ ವಿರೋಧಿಸಿದ್ದರು. ಈ ಬಾರಿ ಬಹುಮತವಿಲ್ಲದಿದ್ದರೂ ಗಿಮಿಕ್ ಮಾಡಲು ಪ್ರಯತ್ನಿಸಿದ್ದಾರಷ್ಟೇ ಎಂದರು.
ಇನ್ನು ರಾಜ್ಯ ಸರ್ಕಾರ ಸಾಮಾಜಿಕ ಹಾಗೂ ಆರ್ಥಿಕ ಗಣತಿ ಕೈಗೊಂಡಾಗ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸಣ್ಣತನದಿಂದ ವರ್ತಿಸಿದ್ದರು. ಪ್ರತಿಯೊಬ್ಬರೂ ಜನಗಣಿತಿಯಲ್ಲಿ ಭಾಗವಹಿಸಬೇಕು. ಅಂದಾಗ ಮಾತ್ರ ಸಮುದಾಯಗಳ ಅಭಿವೃದ್ಧಿಯಾಗುತ್ತದೆ ಎಂದು ಹೇಳಿದರು.
ಪುರಸಭೆ ಅಧ್ಯಕ್ಷ ಮಂಜುನಾಥ ಮೇಗೂರು, ಸ್ಥಾಯಿಸಮಿತಿ ಅಧ್ಯಕ್ಷ ದೊಡ್ಡಬಸವರಾಜ ಬೂದಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶರಣೆಗೌಡ ಮಾಲಿಪಾಟೀಲ್, ಪ್ರಮುಖರಾದ ಅಯ್ಯಪ್ಪ ಉಪ್ಪಾರ, ಶರಣಪ್ಪ ಪರಕಿ, ಚನ್ನಬಸಪ್ಪ ಸುಂಕದ, ಬೂದಿಗಿರಿಯಪ್ಪ, ಮಹಮದ್ ರಫಿ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net