ಕೊಪ್ಪಳ ತಾಲೂಕಿನ ಕಿಡದಾಳ ಶ್ರೀ ಶಾರದಾ ಇಂಟರ್ನ್ಯಾಷನಲ್ ಶಾಲೆಯಲ್ಲಿ ಆಯೋಜಿಸಿದ್ದ ಸೈಬರ್ ಕೆಂ ಜಾಗೃತಿ ಕಾರ್ಯಕ್ರಮದಲ್ಲಿ ಡಿವೈಎಸ್ಪಿ ಸಿದ್ದಲಿಂಗಪ್ಪ ಪಾಟೀಲ ಮಾತನಾಡಿದರು.
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
ಡಿವೈಎಸ್ಪಿ ಸಿದ್ದಲಿಂಗಪ್ಪ ಪಾಟೀಲ ಸಲಹೆ
ಸೈಬರ್ ಕೆಂ ಜಾಗೃತಿ
ಕೊಪ್ಪಳ : ಇಂದಿನ ಡಿಜಿಟಲ್ ಯುಗದಲ್ಲಿ ವಿದ್ಯಾರ್ಥಿಗಳು ಸೈಬರ್ ಅಪರಾಧಗಳ ಬಗ್ಗೆ ಸಂಪೂರ್ಣ ಜಾಗೃತಿ ಹೊಂದಿರಬೇಕು. ಸಾಮಾಜಿಕ ಜಾಲತಾಣಗಳು ಹಾಗೂ ಆನ್ಲೈನ್ ಸೇವೆ ಬಳಸುವಾಗ ಎಚ್ಚರಿಕೆ ವಹಿಸುವ ಮೂಲಕ ಸೈಬರ್ ವಂಚನೆಗಳಿಂದ ರಕ್ಷಿಸಿಕೊಳ್ಳಬಹುದು ಎಂದು ಕೊಪ್ಪಳ ಉಪ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಲಿಂಗಪ್ಪ ಪಾಟೀಲ ಹೇಳಿದರು.
ತಾಲೂಕಿನ ಕಿಡದಾಳ ಶ್ರೀ ಶಾರದಾ ಪಿಯು ಕಾಲೇಜು ಹಾಗೂ ಶ್ರೀ ಶಾರದಾ ಇಂಟರ್ನ್ಯಾಷನಲ್ ಶಾಲೆಯಲ್ಲಿ ಗುರುವಾರ ಆಯೋಜಿಸಿದ್ದ ಸೈಬರ್ ಕೆಂ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಸೈಬರ್ ಅಪರಾಧಗಳ ಹೊಸಹೊಸ ರೂಪಗಳ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿ, ಅಪರಿಚಿತ ವ್ಯಕ್ತಿಗಳೊಂದಿಗೆ ವೈಯಕ್ತಿಕ ಮಾಹಿತಿ, ಬ್ಯಾಂಕ್ ಖಾತೆ ವಿವರ ಹಾಗೂ ಒಟಿಪಿ ಮಾಹಿತಿಯನ್ನು ಹಂಚಿಕೊಳ್ಳಬಾರದು ಎಂದು ಸಲಹೆ ನೀಡಿದರು. ಕಾನೂನು ಪಾಲನೆ, ಸಂಚಾರ ನಿಯಮಗಳ ಅನುಸರಣೆ ಹಾಗೂ ಸಾಮಾಜಿಕ ಜವಾಬ್ದಾರಿಯ ಬಗ್ಗೆ ವಿದ್ಯಾರ್ಥಿಗಳು ಅರಿವು ಹೊಂದಿರುವುದು ಅಗತ್ಯ ಎಂದು ತಿಳಿಸಿದರು.
ವೃತ್ತ ನಿರೀಕ್ಷಕ ಆಂಜನೇಯ ಮಾತನಾಡಿ, ಸಹ ಸೈಬರ್ ಸುರಕ್ಷತೆ, ಆನ್ಲೈನ್ ವಂಚನೆ ತಡೆ ಹಾಗೂ ಸುರಕ್ಷಿತ ಇಂಟರ್ನೆಟ್ ಬಳಕೆಯ ಕುರಿತು ಮಾಹಿತಿ ನೀಡಿದರು. ಶ್ರೀ ಶಾರದಾ ವಿದ್ಯಾಸಂಸ್ಥೆಯ ಆಡಳಿತಾಧಿಕಾರಿ, ಪ್ರಾಂಶುಪಾಲರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಇದ್ದರು.