ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಸಿ. ಚಂದ್ರಶೇಖರ ನೇತೃತ್ವದಲ್ಲಿ ಜುಲೈ 11ರಂದು ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ್ ಅದಾಲತ್ ನಡೆಯಲಿದ್ದು. ಸಿವಿಲ್ ದಾವೆಗಳು, ಭೂಸ್ವಾಧಿನ, ಬ್ಯಾಂಕ್ ವಸೂಲಾತಿ, ಚೆಕ್ ಬೌನ್ಸ್, ಮೋಟಾರು ಅಪಘಾತ ಪರಿಹಾರ, ವೈವಾಹಿಕ ಹಾಗೂ ರಾಜಿಯಾಗಲು ಅರ್ಹವಾದ ಕ್ರಿಮಿನಲ್ ಪ್ರಕರಣಗಳನ್ನು ಪರಸ್ಪರ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಬಹುದು ಎಂದರು.