ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣನ ಪುಣ್ಯಸ್ಮರಣೆ ಅಂಗವಾಗಿ ಜಿಲ್ಲಾಡಳಿತದಿಂದ ಪುಷ್ಪ ಮನ ಸಲ್ಲಿಕೆ. ಡಿಸಿ ಡಾ.ಸುರೇಶ ಬಿ. ಇಟ್ನಾಳ, ಸಿಇಒ ವರ್ಣಿತ್ ನೇಗಿ, ಎಡಿಸಿ ಸಿದ್ರಾಮೇಶ್ವರ ಇತರರಿದ್ದರು.
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
ಪುಷ್ಪ ಅರ್ಪಿಸಿದ ಗಣ್ಯರು
ಕೊಪ್ಪಳ: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಪುಣ್ಯಸ್ಮರಣೆ ದಿನಾಚರಣೆ ಅಂಗವಾಗಿ ಸೋಮವಾರ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ನವರ ಭಾವಚಿತ್ರಕ್ಕೆ ಡಿಸಿ ಡಾ.ಸುರೇಶ ಬಿ. ಇಟ್ನಾಳ ಹಾಗೂ ಜಿಪಂ ಸಿಇಒ ವರ್ಣಿತ್ ನೇಗಿ ಅವರು ಪುಷ್ಪಾರ್ಪಣೆ ಮೂಲಕ ಗೌರವ ನಮನ ಸಲ್ಲಿಸಿದರು.
ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಂಜುನಾಥ ಗುಂಡೂರ್, ಆಹಾರ ಇಲಾಖೆ ಉಪನಿರ್ದೇಶಕ ಸೋಮಶೇಖರ ಬಿರಾದರ್, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಜಗದೀಶ, ಕನ್ನಡ ಮತ್ತು ಸಂಸತಿ ಇಲಾಖೆ ಸಹಾಯಕ ನಿರ್ದೇಶಕ ಕರ್ಣಕುಮಾರ ಇತರರಿದ್ದರು.