ಕೊಪ್ಪಳದಲ್ಲಿ ಕುಡಿವ ನೀರಿಗೆ ಆಗದಿರಲಿ ತೊಂದರೆ

ಕೊಪ್ಪಳದಲ್ಲಿ ಬುಧವಾರ ಹಮ್ಮಿಕೊಂಡ ಅಧಿಕಾರಿಗಳೊಂದಿಗಿನ ಸಭೆಯಲ್ಲಿ ಡಿಸಿ ಡಾ. ಸುರೇಶ ಬಿ. ಇಟ್ನಾಳ ಮಾತನಾಡುದರು. ಎಡಿಸಿ ಸಿದ್ರಾಮೇಶ್ವರ, ಜಿ.ಪಂ. ಉಪ ಕಾರ್ಯದರ್ಶಿ ಟಿ. ಕೃಷ್ಣಮೂರ್ತಿ, ಎಸಿ ಕ್ಯಾಪ್ಟನ್​ ಮಹೇಶ ಮಾಲಗಿತ್ತಿ ಇದ್ದರು.
ಕೊಪ್ಪಳದಲ್ಲಿ ಬುಧವಾರ ಹಮ್ಮಿಕೊಂಡ ಅಧಿಕಾರಿಗಳೊಂದಿಗಿನ ಸಭೆಯಲ್ಲಿ ಡಿಸಿ ಡಾ. ಸುರೇಶ ಬಿ. ಇಟ್ನಾಳ ಮಾತನಾಡುದರು. ಎಡಿಸಿ ಸಿದ್ರಾಮೇಶ್ವರ, ಜಿ.ಪಂ. ಉಪ ಕಾರ್ಯದರ್ಶಿ ಟಿ. ಕೃಷ್ಣಮೂರ್ತಿ, ಎಸಿ ಕ್ಯಾಪ್ಟನ್​ ಮಹೇಶ ಮಾಲಗಿತ್ತಿ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಡಿಸಿ ಡಾ. ಸುರೇಶ ಬಿ. ಇಟ್ನಾಳ ಸೂಚನೆ
ಕೊಪ್ಪಳ: ಜಿಲ್ಲೆಯ ನಗರ ಹಾಗೂ ಗ್ರಾಮೀಣ ಪ್ರದೇಶದ ಯಾವುದೇ ಭಾಗದಲ್ಲಿ ಬೇಸಿಗೆಯ ಈ ಸಂದರ್ಭದಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಬಾರದು. ನೀರು ಪೂರೈಕೆಗೆ ಮೊದಲ ಆದ್ಯತೆ ನೀಡಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ ಡಾ. ಸುರೇಶ ಬಿ. ಇಟ್ನಾಳ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಜಿಪಂ ಜಲನಿರ್ಮಲ ಸಭಾಂಗಣದಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ಆಯೋಜಿಸಿದ ಅಧಿಕಾರಿಗಳೊಂದಿಗಿನ ಸಭೆಯಲ್ಲಿ ಮಾತನಾಡಿದರು.
ಗ್ರಾಂಪಂ ವ್ಯಾಪ್ತಿಯಲ್ಲಿ ನೀರಿನ ಬವಣೆ ಎದುರಾಗುವ ಮುನ್ಸೂಚನೆ ಸಿಕ್ಕ ಕೂಡಲೇ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳಬೇಕು. ಅಂತಹ ಕಡೆಗಳಲ್ಲಿ ಮೊದಲೆ ಖಾಸಗಿ ಬೋರವೆಲ್​ಗಳನ್ನು ಗುರುತಿಸಿ, ಮಾಲೀಕರೊಂದಿಗೆ ಒಪ್ಪಂದ ಮಾಡಿಕೊಳ್ಳಬೇಕು. ಮಾಲೀಕರು ಸಹಕರಿಸದಿದ್ದಲ್ಲಿ ತಕ್ಷಣವೇ ಜಿಲ್ಲಾಡಳಿತದ ಗಮನಕ್ಕೆ ತರಬೇಕು ಎಂದು ಪಿಡಿಒಗಳಿಗೆ ತಿಳಿಸಿದರು.
ಕುಡಿಯುವ ನೀರು ಪೂರೈಕೆಗೆ ಜಿಲ್ಲೆಯಲ್ಲಿ ಯಾವುದೇ ಹಣಕಾಸಿನ ಕೊರತೆಯಿಲ್ಲ. ಅನುದಾನ ಇಲ್ಲ ಎಂಬ ನೆಪ ಹೇಳಿ ಕೆಲಸ ವಿಳಂಬ ಮಾಡಬಾರದು. 15ನೇ ಹಣಕಾಸು ಯೋಜನೆ ಅಥವಾ ಸ್ಥಳಿಯ ಕರ ವಸೂಲಾತಿ ಹಣವನ್ನು ಬಳಸಿಕೊಳ್ಳಬೇಕು. ಹೆಚ್ಚಿನ ಅನುದಾನ ಬೇಕಿದ್ದಲ್ಲಿ ಕೂಡಲೇ ಪ್ರಸ್ತಾವನೆ ಸಲ್ಲಿಸಿ ಎಂದು ಎಚ್ಚರಿಕೆ ನೀಡಿದರು.
ತಸೀಲ್ದಾರರು ಗ್ರಾಮ ಆಡಳಿತ ಅಧಿಕಾರಿಗಳಿಂದ ನಿರಂತರ ಮಾಹಿತಿ ಪಡೆದು ಪರಿಸ್ಥಿತಿಯನ್ನು ಅವಲೋಕಿಸಬೇಕು. ತಾ.ಪಂ. ಇಒಗಳು ಪಿಡಿಒಗಳ ಕೆಲಸದ ಮೇಲೆ ನಿಗಾ ವಹಿಸಬೇಕು. ಮೇಲ್ಮಟ್ಟದ ಜಲಾಗಾರಗಳನ್ನು ನಿಯಮಿತವಾಗಿ ಸ್ವಚ್ಛಗೊಳಿಸಿ ಮತ್ತು ನೀರಿನ ಗುಣಮಟ್ಟ ಪರೀಕ್ಷಿಸಿದ ನಂತರ ಸಾರ್ವಜನಿಕರಿಗೆ ಪೂರೈಸಬೇಕು. ಪ್ರತಿ ಪಂಚಾಯಿತಿಯಲ್ಲಿ ಗ್ರಾಮ ನೀರು ನೈರ್ಮಲ್ಯ ಸಮಿತಿ ಸಭೆಗಳನ್ನು ನಡೆಸಿ, ನೀರಿನ ಲಭ್ಯತೆ ಮತ್ತು ಕರ ವಸೂಲಾತಿ ಬಗ್ಗೆ ಚರ್ಚಿಸಬೇಕು ಎಂದರು.
ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಜಿ.ಪಂ. ಉಪ ಕಾರ್ಯದರ್ಶಿ ಟಿ.ಕೃಷ್ಣಮೂರ್ತಿ, ಸಹಾಯಕ ಆಯುಕ್ತ ಕ್ಯಾಪ್ಟನ್​ ಮಹೇಶ ಮಾಲಗಿತ್ತಿ, ಹಾಗೂ ಜಿಲ್ಲೆಯ ಎಲ್ಲಾ ತಾಲೂಕುಗಳ ತಹಸೀಲ್ದಾರರು ಮತ್ತು ಪಿಡಿಒಗಳು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net