ಕೊಪ್ಪಳದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಮಹಿಳಾ ದೌರ್ಜನ್ಯ ತಡೆ ಕಾನೂನು ಜಾಗೃತಿ ಕಾರ್ಯಾಗಾರವನ್ನು ರಾಜ್ಯ ಮಹಿಳಾ ಆಯೋಗ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಉದ್ಘಾಟಿಸಿದರು. ಜಿಪಂ ಸಿಇಒ ವರ್ಣಿತ್ ನೇಗಿ,ಡಿಎ್ಒ ನಿರ್ಮಲಾ, ಎಡಿಸಿ ಸಿದ್ರಾಮೇಶ್ವರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಪಿ.ವೈ.ಶೆಟ್ಟೆಪ್ಪನವರ, ಮಹಿಖಾ ಆಯೋಗದ ಸದಸ್ಯ ಕಾರ್ಯದರ್ಶಿ ರೂಪಾ ಇದ್ದರು.
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
ತರಬೇತಿ ಹಾಗೂ ಅರಿವು ಕಾರ್ಯಕ್ರಮ
ಕೊಪ್ಪಳ: ಮಹಿಳೆಯರು ಒಳ್ಳೆಯವರಾಗಿರುವುದು ತಪ್ಪಲ್ಲ, ಆದರೆ ಅದಕ್ಕೂ ಹೆಚ್ಚು ಧೈರ್ಯವಂತರಾಗಿರಬೇಕು. ತಮಗಾಗುವ ಅನ್ಯಾಯದ ವಿರುದ್ಧ ಧ್ವನಿ ಎತ್ತುವ ಧೈರ್ಯ ಇರಬೇಕು ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ.ನಾಗಲಕ್ಷ್ಮೀ ಚೌಧರಿ ಅವರು ಹೇಳಿದರು.
ಶುಕ್ರವಾರದಂದು ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ-2013 ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಉದ್ಯೋಗಸ್ಥ ಅಥವಾ ಕೌಟುಂಬಿಕ ವಲಯಗಳಲ್ಲಿರುವ ಬಹುತೇಕ ಮಹಿಳೆಯರು ತಮ್ಮ ಮೇಲೆ ಉಂಟಾಗುವ ದೈಹಿಕ ಹಲ್ಲೆ, ಲೈಂಗಿಕ ದೌರ್ಜನ್ಯದಂತ ಘಟನೆಗಳಲ್ಲಿ ಮೌನದಿಂದ ಇದ್ದರೆ ಪರಿಸ್ಥಿತಿ ಸುಧಾರಿಸಬಹುದು ಎಂಬ ಭಾವನೆ ಇರುತ್ತದೆ. ಅಥವಾ ತಮ್ಮ ಮೇಲಿನ ದೌರ್ಜನ್ಯದ ಕುರಿತು ಯಾರಿಗಾದರೂ ಹೇಳಿದಲ್ಲಿ ಸಮಾಜ ತಮ್ಮನ್ನು ಕೀಳಾಗಿ ನೋಡಬಹುದು ಎಂಬ ಕೀಳರಿಮೆಯೂ ಇರುತ್ತದೆ ಎಂದರು.
ಕೆಲವೊಮ್ಮೆ ಮಾನ, ಪ್ರಾಣದ ಭಯದಿಂದಲೂ ದೌರ್ಜನ್ಯದ ಕುರಿತು ಮಹಿಳೆ ಎಲ್ಲಿಯೂ ಧ್ವನಿ ಎತ್ತುವುದಿಲ್ಲ. ಇದರಿಂದ ಮಹಿಳೆಯ ಸಮಸ್ಯೆಗೆ ಪರಿಹಾರ ದೊರೆಯುವ ಬದಲು ಇನ್ನಷ್ಟು ನೋವು, ದೌರ್ಜನ್ಯ ಹೆಚ್ಚಾಗುತ್ತಾ ಹೋಗುತ್ತದೆ. ಮಹಿಳೆಯರು ಮೂಲತ@ ಭಾವನಾತ್ಮಕ ಜೀವಿಗಳು. ಇದನ್ನೇ ಬಂಡವಾಳವಾಗಿಸಿಕೊಂಡು ಕೆಲವು ವಿಕೃತ ಮನಸ್ಸಿನವರು ಮಹಿಳೆಯ ಮೇಲೆ ದೌರ್ಜನ್ಯವೆಸುಗುತ್ತಾರೆ. ಇಂತಹ ಸಂದರ್ಭಗಳಲ್ಲಿ ಮಹಿಳೆಯರು ತಮ್ಮ ಒಳ್ಳೆಯತನ, ಭಾವನೆಗಳು, ಇತರೆ ಹಿಂಜರಿಕೆಗಳನ್ನು ಬಿಟ್ಟು ಧೈರ್ಯದಿಂದ ತಮಗಾಗುತ್ತಿರುವ ಅನ್ಯಾಯದ ವಿರುದ್ಧ ಧ್ವನಿ ಎತ್ತಬೇಕು. ನಮ್ಮ ಒಳ್ಳೆಯತನ ದೌರ್ಬಲ್ಯವಾಗಬಾರದು ಎಂದು ಅವರು ಹೇಳಿದರು.
ಜಿಪಂ ಸಿಇಒ ವರ್ಣಿತ್ ನೇಗಿ, ಡಿಎಫ್ಒ ನಿರ್ಮಲಾ, ಎಡಿಸಿ ಸಿದ್ರಾಮೇಶ್ವರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಪಿ.ವೈ.ಶೆಟ್ಟೆಪ್ಪನವರ, ಆಯೋಗದ ಸದಸ್ಯ ಕಾರ್ಯದರ್ಶಿ ರೂಪಾ, ಸಂಪನ್ಮೂಲ ವ್ಯಕ್ತಿ ಚಂದ್ರಿಕಾ ಟಿ.ಎಸ್. ಇತರರಿದ್ದರು.