ಬರಪೀಡಿತ ತಾಲೂಕುಗಳಾಗಿ ಘೋಷಿಸಿ

ಗಂಗಾವತಿ ಎಚ್.ಜಿ. ರಾಮುಲು ನಿವಾಸಕ್ಕೆ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಶುಕ್ರವಾರ ಭೇಟಿ ನೀಡಿ ಚರ್ಚಿಸಿದರು. ಮಾಜಿ ಎಂಎಲ್ಸಿ ಎಚ್.ಆರ್. ಶ್ರೀನಾಥ, ಪ್ರಮುಖರಾದ ರಾಜಶೇಖರ್ ಮುಷ್ಟೂರು ಇತರರಿದ್ದರು.
ಗಂಗಾವತಿ ಎಚ್.ಜಿ. ರಾಮುಲು ನಿವಾಸಕ್ಕೆ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಶುಕ್ರವಾರ ಭೇಟಿ ನೀಡಿ ಚರ್ಚಿಸಿದರು. ಮಾಜಿ ಎಂಎಲ್ಸಿ ಎಚ್.ಆರ್. ಶ್ರೀನಾಥ, ಪ್ರಮುಖರಾದ ರಾಜಶೇಖರ್ ಮುಷ್ಟೂರು ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಜಿಲ್ಲಾ ಉಸ್ತುವಾರಿ ಮಂತ್ರಿಗೆ ಬಿಜೆಪಿ ಒತ್ತಾಯ
ಗಂಗಾವತಿ: ಗಂಗಾವತಿ, ಕನಕಗಿರಿ ಮತ್ತು ಕಾರಟಗಿ ತಾಲೂಕುಗಳನ್ನು ಬರಪೀಡಿತ ಪ್ರದೇಶವೆಂದು ಘೋಷಿಸುವಂತೆ ಒತ್ತಾಯಿಸಿ ಟಿಎಪಿಸಿಎಂಎಸ್ ಅಧ್ಯಕ್ಷ ಚನ್ನಪ್ಪ ಮಳಗಿ ನೇತೃತ್ವದ ಬಿಜೆಪಿ ಮುಖಂಡರು ಸಚಿವ ಡಾ.ಶರಣಪ್ರಕಾಶ ಪಾಟೀಲ್ ಅವರಿಗೆ ಮನವಿ ಸಲ್ಲಿಸಿದರು.
ಸಕಾಲಕ್ಕೆ ಮಳೆಯಾಗದಿದ್ದರಿಂದ ಒಣ ಬೇಸಾಯದ ಕೃಷಿ ಚಟುವಟಿಕೆಗಳಿಗೆ ತೀವ್ರ ಹಿನ್ನಡೆಯಾಗಿದೆ. ಅಲ್ಲದೆ ತುಂಗಭದ್ರಾ ಜಲಾಶಯಕ್ಕೆ ಸಮರ್ಪಕವಾಗಿ ನೀರು ಬಾರದೆ ಭತ್ತದ ಬೆಳೆ ಅವಲಂಬಿತ ರೈತರಿಗೆ ನೀರು ಸಿಗುವುದು ಅಸಾಧ್ಯವಾಗಿದೆ. ಹೀಗಾಗಿ ತ್ರಿವಳಿ ತಾಲೂಕುಗಳನ್ನು ತಕ್ಷಣವೇ ಬರಗಾಲ ಪೀಡಿತ ಪ್ರದೇಶ ಎಂದು ಘೋಷಿಸಿ, ರೈತರಿಗೆ ಸೂಕ್ತ ಪರಿಹಾರ ನೀಡಬೇಕು. ಜೊತೆಗೆ ಈ ಭಾಗದಲ್ಲಿ ಎದುರಾಗಿರುವ ಯೂರಿಯಾ ಗೊಬ್ಬರದ ಕೊರತೆಯನ್ನು ನೀಗಿಸಿ ಸಮರ್ಪಕವಾಗಿ ವಿತರಿಸಬೇಕು ಎಂದು ಮುಖಂಡರು ಆಗ್ರಹಿಸಿದರು. ಈ ಸಂದರ್ಭದಲ್ಲಿ ಮಾಜಿ ಸದಸ್ಯ ಸುಭಾಶ್ಚಂದ್ರ ತಿಪ್ಪಶೆಟ್ಟಿ ಸೇರಿದಂತೆ ಇತರರಿದ್ದರು.
ರಾಮುಲು-ಪಾಟೀಲ್ ಚರ್ಚೆ
ಮೊದಲ ಬಾರಿಗೆ ಗಂಗಾವತಿಗೆ ಆಗಮಿಸಿದ್ದ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಅವರು ಮಾಜಿ ಸಂಸದ ಎಚ್.ಜಿ. ರಾಮುಲು ನಿವಾಸಕ್ಕೆ ತೆರಳಿ ಆಶೀರ್ವಾದ ಪಡೆದರು. ಬಳಿಕ ಜಿಲ್ಲೆಯ ಕಾಂಗ್ರೆಸ್ ಸಂಘಟನೆ ಹಾಗೂ ಗೊಂದಲಗಳ ಕುರಿತು ಮುಖಂಡರು ಮತ್ತು ಕಾರ್ಯಕರ್ತರೊಂದಿಗೆ ಚರ್ಚಿಸಿ, ಸಮಸ್ಯೆಗಳನ್ನು ಸರಿಪಡಿಸುವ ಭರವಸೆ ನೀಡಿದರು. ಮಾಜಿ ಎಂಎಲ್ಸಿ ಎಚ್.ಆರ್. ಶ್ರೀನಾಥ, ಪ್ರಮುಖರಾದ ರಾಜಶೇಖರ್ ಮುಷ್ಟೂರು, ರಮೇಶ ಗೌಳಿ, ಸೈಯ್ಯದ್ ನಾಜನೀನ್, ಪಾಂಡುನಾಯ್ಕ, ಹನುಮಂತರಾಯ, ಆನಂದ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net