ಗ್ರಾಮದೇವಿ ಭಾವಚಿತ್ರ ಮೆರವಣಿಗೆ ಅದ್ದೂರಿ

ಗಂಗಾವತಿ ಗ್ರಾಮದೇವತೆ ಶ್ರೀ ದುರ್ಗಾದೇವಿ ಜಾತ್ರಾಮಹೋತ್ಸವ ನಿಮಿತ್ತ ಭಾವಚಿತ್ರ ಮೆರವಣಿಗೆಗೆ ಕಲ್ಮಠದ ಡಾ.ಕೊಟ್ಟೂರು ಸ್ವಾಮೀಜಿ ಗುರುವಾರ ಚಾಲನೆ ನೀಡಿದರು. ಮಾಜಿ ಸಂಸದ ಎಸ್.ಶಿವರಾಮನಗೌಡ, ಮಾಜಿ ಸಚಿವ ಎಂ.ಮಲ್ಲಿಕಾರ್ಜುನನಾಗಪ್ಪ, ಮಾಜಿ ಎಂಎಲ್ಸಿ ಎಚ್.ಆರ್.ಶ್ರೀನಾಥ, ದೇವಾಲಯ ಸಮಿತಿ ಅಧ್ಯಕ್ಷ ಜೋಗದ ನಾರಾಯಣಪ್ಪ ನಾಯಕ ಇತರರಿದ್ದರು.
ಗಂಗಾವತಿ ಗ್ರಾಮದೇವತೆ ಶ್ರೀ ದುರ್ಗಾದೇವಿ ಜಾತ್ರಾಮಹೋತ್ಸವ ನಿಮಿತ್ತ ಭಾವಚಿತ್ರ ಮೆರವಣಿಗೆಗೆ ಕಲ್ಮಠದ ಡಾ.ಕೊಟ್ಟೂರು ಸ್ವಾಮೀಜಿ ಗುರುವಾರ ಚಾಲನೆ ನೀಡಿದರು. ಮಾಜಿ ಸಂಸದ ಎಸ್.ಶಿವರಾಮನಗೌಡ, ಮಾಜಿ ಸಚಿವ ಎಂ.ಮಲ್ಲಿಕಾರ್ಜುನನಾಗಪ್ಪ, ಮಾಜಿ ಎಂಎಲ್ಸಿ ಎಚ್.ಆರ್.ಶ್ರೀನಾಥ, ದೇವಾಲಯ ಸಮಿತಿ ಅಧ್ಯಕ್ಷ ಜೋಗದ ನಾರಾಯಣಪ್ಪ ನಾಯಕ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ನವದುರ್ಗೆಯರ ವೇಷದಲ್ಲಿ ಗಮನಸೆಳೆದ ಚಿಣ್ಣರು
  • 108 ಕುಂಭದೊಂದಿಗೆ ಸಾಗಿದ ಉತ್ಸವ
ಗಂಗಾವತಿ: ನಗರದ ಗ್ರಾಮದೇವತೆ ಶ್ರೀ ದುರ್ಗಾದೇವಿ ಜಾತ್ರಾಮಹೋತ್ಸವ ನಿಮಿತ್ತ ಭಾವಚಿತ್ರದೊಂದಿಗೆ ಕುಂಭ ಮೆರವಣಿಗೆಗೆ ಗುರುವಾರ ಚಾಲನೆ ನೀಡಲಾಯಿತು.
ಮೂರು ವರ್ಷಕ್ಕೊಮ್ಮೆ ಜಾತ್ರೆ ನಡೆಯಲಿದ್ದು , ಡಿ.18ರಿಂದ 21ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ನಗರದ ಕಲ್ಮಠದ ಬಳಿ ಶ್ರೀ ಗಾಳೆಮ್ಮ ದೇವಾಲಯದಿಂದ ಶ್ರೀ ದುರ್ಗಾದೇವಿ ಭಾವಚಿತ್ರ ಮತ್ತು ಮೂರ್ತಿಯನ್ನು ಪಲ್ಲಕ್ಕಿಯಲ್ಲಿಟ್ಟು 108 ಕುಂಭ, ನವದುರ್ಗೆಯರ ವೇಷಧಾರಿ ಮಕ್ಕಳು, ಡೊಳ್ಳು ಕುಣಿತ ಇತರ ವಾದ್ಯಮೇಳದೊಂದಿಗೆ ಅದ್ದೂರಿಯಾಗಿ ಮೆರವಣಿಗೆ ನೆರವೇರಿಸಲಾಯಿತು.
ನಗರದ ಶ್ರೀ ದುರ್ಗಾದೇವಿ ದೇವಾಲಯವರೆಗೆ ವಿಜೃಂಭಣೆಯಿಂದ ಜರುಗಿತು. ದೇವಾಲಯದಲ್ಲಿನ ಮೂರ್ತಿಗೆ ವಿಶೇಷ ಅಭಿಷೇಕ, ಹೂವಿನ ಅಲಂಕಾರ, ಜಾತ್ರಾಮಹೋತ್ಸವದ ಮಾಹಸಂಕಲ್ಪ ನಂತರ ಶ್ರೀ ದುರ್ಗಾಸಪ್ತಶತಿ ಪಾರಾಯಣ, ಮಹಾಅನ್ನಸಂತರ್ಪಣೆ, ಸಂಜೆ ಸಾಮೂಹಿಕ ಕುಂಕುಮಾರ್ಚನೆ ನೆರವೇರಿಸಲಾಯಿತು.
ಮೆರವಣಿಗೆಗೆ ಚಾಲನೆ ನೀಡಿದ ಕಲ್ಮಠದ ಡಾ.ಕೊಟ್ಟೂರು ಸ್ವಾಮೀಜಿ ಮಾತನಾಡಿದರು. ರಾಜನಹಳ್ಳಿ ಮಹರ್ಷಿ ವಾಲ್ಮೀಕಿ ಗುರುಪೀಠದ ಡಾ.ಪ್ರಸನ್ನಾನಂದಪುರಿ ಸ್ವಾಮೀಜಿ, ಮಾಜಿ ಸಚಿವ ಎಂ.ಮಲ್ಲಿಕಾರ್ಜುನನಾಗಪ್ಪ, ಮಾಜಿ ಸಂಸದ ಎಸ್.ಶಿವರಾಮನಗೌಡ, ಮಾಜಿ ಎಂಎಲ್ಸಿ ಎಚ್.ಆರ್.ಶ್ರೀನಾಥ, ಶ್ರೀ ವಿದ್ಯಾನಿಕೇತನ ಸಮೂಹ ಶಿಕ್ಷಣ ಸಂಸ್ಥೆ ಅಧ್ಯಕ್ಷ ಸೂರಿಬಾಬು ನೆಕ್ಕಂಟಿ, ದೇವಾಲಯ ಸಮಿತಿ ಅಧ್ಯಕ್ಷ ಜೋಗದ ನಾರಾಯಣಪ್ಪ ನಾಯಕ, ಬಿಜೆಪಿ ಜಿಲ್ಲಾ ಮಾಜಿ ಅಧ್ಯಕ್ಷ ಸಿಂಗನಾಳ ವಿರೂಪಾಕ್ಷಪ್ಪ ಇತರರಿದ್ದರು.
"

ಗ್ರಾಮದೇವತೆ ಶ್ರೀ ದುರ್ಗಾದೇವಿ ಜಾತ್ರಾಮಹೋತ್ಸವನ್ನು ಸರ್ವ ಸಮುದಾಯದವರ ಸಹಕಾರದೊಂದಿಗೆ ಹಮ್ಮಿಕೊಂಡಿದ್ದು, ನಾಲ್ಕುದಿನ ವಿವಿಧ ಧಾರ್ಮಿಕ ಕಾರ್ಯಕ್ರಮ ಜರುಗಲಿವೆ. ಡಿ.21ರ ರಾತ್ರಿ ವಿಶಿಷ್ಟ ರೀತಿಯ ಬಾಣ ಬಿರುಸುಗಳ ಪ್ರದರ್ಶನವಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net