ಮಾಜಿ ದೇವದಾಸಿಯರಿಗೆ ಸೌಲಭ್ಯ ಒದಗಿಸಲು ಪ್ರಯತ್ನಿಸುವೆ

ತಾ.ಪಂ ಆವರಣದಲ್ಲಿ ಶುಕ್ರವಾರ ಆಯೋಜಿಸಿದ ಮಾಜಿ ದೇವದಾಸಿಯರೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು.ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಪಿ.ವೈ. ಶೆಟ್ಟಪ್ಪನವರ, ತಹಶೀಲ್ದಾರ ಬಸವರಾಜ ತೆನ್ನಳ್ಳಿ, ತಾಪಂ ಇಓ ದುಂಡಪ್ಪ ತುರಾದಿ, ನಗರಸಭೆ ಆಯುಕ್ತ ವೆಂಕಟೇಶ ನಾಗನೂರು ಇತರರಿದ್ದರು.
ತಾ.ಪಂ ಆವರಣದಲ್ಲಿ ಶುಕ್ರವಾರ ಆಯೋಜಿಸಿದ ಮಾಜಿ ದೇವದಾಸಿಯರೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು.ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಪಿ.ವೈ. ಶೆಟ್ಟಪ್ಪನವರ, ತಹಶೀಲ್ದಾರ ಬಸವರಾಜ ತೆನ್ನಳ್ಳಿ, ತಾಪಂ ಇಓ ದುಂಡಪ್ಪ ತುರಾದಿ, ನಗರಸಭೆ ಆಯುಕ್ತ ವೆಂಕಟೇಶ ನಾಗನೂರು ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಭರವಸೆ
  • ಸಂವಾದ ಕಾರ್ಯಕ್ರಮ
ಕೊಪ್ಪಳ : ಸಮಾಜದಲ್ಲಿ ಅನೇಕ ಸವಾಲುಗಳನ್ನು ಎದುರಿಸುತ್ತಿರುವ ಮಾಜಿ ದೇವದಾಸಿಯರಿಗೆ ಸರ್ಕಾರಿ ಸೌಲತ್ತು ಒದಗಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಅವರು ಹೇಳಿದರು.
ತಾ.ಪಂ ಆವರಣದಲ್ಲಿ ಶುಕ್ರವಾರ ಆಯೋಜಿಸಿದ ಮಾಜಿ ದೇವದಾಸಿಯರೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು.
ಮಾಜಿ ದೇವದಾಸಿಯರ ಹಲವಾರು ಸಮಸ್ಯೆಗಳನ್ನು ಅವಹಾಲುಗಳ ಮೂಲಕ ಸ್ವೀಕರಿಸಲಾಗಿದ್ದು ಆಯೋಗದಿಂದ ಬಗೆಹರಿಸುವಲ್ಲಿ ಕ್ರಮವಹಿಸುತ್ತದೆ. ಈಗಾಗಲೇ ಮಾಜಿ ದೇವದಾಸಿಯರ ಮರು ಸಮೀಕ್ಷೆ ಕೈಗೊಳ್ಳಲಾಗಿದ್ದು, ಇದರಿಂದ ಯಾರು ಹೊರಗುಳಿಯದಂತೆ ಕ್ರಮವಹಿಸಲು ನಿರ್ದೇಶನ ನೀಡುತ್ತೇನೆ. ವಿವಿಧ ವಸತಿ ಯೋಜನೆಯಡಿ ಮಾಜಿ ದೇವದಾಸಿಯರಿಗೆ ಮನೆ ಮಂಜೂರಾತಿಗೆ ಅವಕಾಶ ಕಲ್ಪಿಸಲಾಗುವುದರ ಜತೆಗೆ ಅವರ ಮಕ್ಕಳಿಗೆ ಶಿಕ್ಷಣ, ಉದ್ಯೋಗ, ಸರ್ಕಾರಿ ಮೀಸಲಾತಿ ಸೌಲಭ್ಯದ ಬಗ್ಗೆ ಸರ್ಕಾರದ ಗಮನಕ್ಕೆ ತರುತ್ತೇನೆ ಎಂದರು

ಸರಳತೆ ಮೆರೆದ ಅಧ್ಯಕ್ಷೆ

ಸಂವಾದದಲ್ಲಿ ಹಾಜರಿದ್ದ ಮಾಜಿ ದೇವದಾಸಿ ಮಹಿಳೆಯರು ತಮ್ಮ ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳುತ್ತಿರುವಾಗ. ಆಯೋಗ ಅಧ್ಯಕ್ಷೆ ಅವರು ಕುಳಿತ ಸ್ಥಳಕ್ಕೆ ಧಾವಿಸಿ ಸಮಸ್ಯೆಗಳನ್ನು ಆಲಿಸಿ. ಅವರ ಸಮಸ್ಯೆಗಳನ್ನು ಆದಷ್ಟು ಬೇಗ ಪರಿಹರಿಸುವ ಭರವಸೆ ನೀಡಿದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಪಿ.ವೈ. ಶೆಟ್ಟಪ್ಪನವರ, ತಹಶೀಲ್ದಾರ ಬಸವರಾಜ ತೆನ್ನಳ್ಳಿ, ತಾಪಂ ಇಓ ದುಂಡಪ್ಪ ತುರಾದಿ, ನಗರಸಭೆ ಆಯುಕ್ತ ವೆಂಕಟೇಶ ನಾಗನೂರು, ಸ್ನೇಹಾ ಸಂಸ್ಥೆಯ ಭಾರತಿ ಮಠದ ನಗರ ಪೋಲಿಸ್‌ ಠಾಣೆಯ ಪೋಲಿಸ್‌ ಇನ್ಸಪೆಕ್ಟರ್‌ ಜಯಪ್ರಕಾಶ, ಶಿಶು ಅಭಿವೃದ್ದಿ ಯೋಜನಾಧಿಕಾರಿ ರೋಹಿಣಿ ಕೊಟಗಾರ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net