ಮಕ್ಕಳ ಮೇಲೆ ಹಲ್ಲೆ ಮಾಡಿಸಿದ ಶಿಕ್ಷಕ ಎತ್ತಂಗಡಿ

ಸಮಾಜ ಕಲ್ಯಾಣ ಇಲಾಖೆ ಡಿಡಿ ಅಜ್ಜಪ್ಪ ದೈಹಿಕ ಶಿಕ್ಷಣ ಶಿಕ್ಷಕ ಬಾಬು ನಡುವಿನಮನಿ ಅವರನ್ನು ಸಿರವಾರ ಡಾ. ಅಂಬೇಡ್ಕರ್ ವಸತಿ ಶಾಲೆಗೆ ನಿಯೋಜಿಸಿ ಆದೇಶಿಸಿರುವುದು.
ಸಮಾಜ ಕಲ್ಯಾಣ ಇಲಾಖೆ ಡಿಡಿ ಅಜ್ಜಪ್ಪ ದೈಹಿಕ ಶಿಕ್ಷಣ ಶಿಕ್ಷಕ ಬಾಬು ನಡುವಿನಮನಿ ಅವರನ್ನು ಸಿರವಾರ ಡಾ. ಅಂಬೇಡ್ಕರ್ ವಸತಿ ಶಾಲೆಗೆ ನಿಯೋಜಿಸಿ ಆದೇಶಿಸಿರುವುದು.
Published on

ಪ್ರಮುಖ ಮುಖ್ಯಾಂಶಗಳು

  • ಕನಕಗಿರಿ ತಾಲೂಕು ಸಿರವಾರ ಶಾಲೆಗೆ ನಿಯೋಜಿಸಿ ಸಮಾಜ ಕಲ್ಯಾಣ ಇಲಾಖೆ ಡಿಡಿ ಆದೇಶ
ಕನಕಗಿರಿ: ಮುರಾರ್ಜಿ ದೇಸಾಯಿ ವಸತಿ ಶಾಲೆ (ಎಸ್ಸಿ)ಯಲ್ಲಿ ಜು.11ರಂದು ಶಾಲಾ ಸಂಸತ್ ಚುನಾವಣೆ ಬಳಿಕ ನಡೆದ 10ನೇ ತರಗತಿ ವಿದ್ಯಾರ್ಥಿಗಳಿಂದ 7, 8ನೇ ತರಗತಿ ಮಕ್ಕಳ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೈಹಿಕ ಶಿಕ್ಷಣ ಶಿಕ್ಷಕ ಬಾಬು ನಡುವಿನಮನಿ ಅವರನ್ನು ಬೇರೊಂದು ಶಾಲೆಗೆ ನಿಯೋಜಿಸಿ ಸಮಾಜ ಕಲ್ಯಾಣ ಇಲಾಖೆ ಡಿಡಿ ಅಜ್ಜಪ್ಪ ಆದೇಶಿಸಿದ್ದಾರೆ.
ಚುನಾವಣೆಯಲ್ಲಿ ಕಿರಿಯ ವಿದ್ಯಾರ್ಥಿಗಳು ನಿಮಗೆ ಮತದಾನ ಮಾಡಿಲ್ಲವೆಂದು ಸೋಲುಂಡ 10ನೇ ತರಗತಿ ವಿದ್ಯಾರ್ಥಿಗಳಿಗೆ ಎತ್ತಿ ಕಟ್ಟಿ ರಾತ್ರಿ ವೇಳೆ ಹಾಸ್ಟೆಲ್‌ನಲ್ಲಿ ಕಿರಿಯ ಮಕ್ಕಳ ಹಲ್ಲೆ ಮಾಡಿಸಿದ್ದಾರೆಂದು ಆರೋಪಿಸಿ ಜು.12ಕ್ಕೆ ಹಲ್ಲೆಗೊಳಗಾದ ವಿದ್ಯಾರ್ಥಿಗಳ ಪಾಲಕರು ಶಾಲೆಗೆ ಧಾವಿಸಿ ಆಕ್ರೋಶ ವ್ಯಕ್ತಪಡಿಸಿದ್ದರು.
ಪೊಲೀಸರು ಸ್ಥಳಕ್ಕೆ ಆಗಮಿಸಿ ಇಲಾಖೆಯ ಅಧಿಕಾರಿಗಳು ವಿಚಾರಣೆ ಮಾಡಿ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದರು. ಅದರಂತೆ ಜು.15ರಂದು ಸಮಾಜ ಕಲ್ಯಾಣ ಇಲಾಖೆ ಡಿಡಿ ಅಜ್ಜಪ್ಪ ಶಾಲೆಗೆ ಆಗಮಿಸಿ ವರದಿ ಪಡೆದುಕೊಂಡಿದ್ದರು. ಮೇಲ್ನೋಟಕ್ಕೆ ದೈಹಿಕ ಶಿಕ್ಷಣ ಶಿಕ್ಷಕ ಬಾಬು ನಡುವಿನಮನಿ ಅವರ ಕರ್ತವ್ಯ ನಿರ್ಲಕ್ಷ್ಯಕಂಡುಬಂದಿತ್ತು. ಈ ಹಿನ್ನೆಲೆಯಲ್ಲಿ ವಸತಿ ಶಾಲೆಯ ಸುಗಮ ನಿರ್ವಹಣೆ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ದೈಹಿಕ ಶಿಕ್ಷಣ ಶಿಕ್ಷಕ ಬಾಬು ನಡುವಿನಮನಿ ಅವರನ್ನು ತಾಲೂಕಿನ ಸಿರವಾರ ಗ್ರಾಮದ ಡಾ.ಬಿ.ಆರ್. ಅಂಬೇಡ್ಕರ್ ವಸತಿ ಶಾಲೆ (ಎಸ್‌ಟಿ)ಗೆ ತಾತ್ಕಾಲಿಕ ನಿಯೋಜನೆ ಮಾಡಿ ಜು.23ರಂದು ಸಮಾಜ ಕಲ್ಯಾಣ ಇಲಾಖೆ ಡಿಡಿ ಆದೇಶಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net