ಸಭೆಯ ನಂತರ ನಗರದ ಹೋಟೆಲ್, ಗ್ಯಾರೇಜ್, ಬೇಕರಿ ಹಾಗೂ ಬಟ್ಟೆ ಅಂಗಡಿಗಳ ಮೇಲೆ ಟಾಸ್ಕ್ ಫೋರ್ಸ್ ತಂಡವು ದಿಢೀರ್ ದಾಳಿ ನಡೆಸಿತು. ಈ ಸಂದರ್ಭದಲ್ಲಿ ನಗರದ ಮಾಜಿಸಾ ಕಲೆಕ್ಷನ್ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಒಬ್ಬ ಕಿಶೋರ ಕಾರ್ಮಿಕನನ್ನು ರಕ್ಷಿಸಲಾಯಿತು. 18 ವರ್ಷದೊಳಗಿನ ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದು ಅಪರಾಧ ಎಂದು ಮಾಲೀಕರಿಗೆ ಎಚ್ಚರಿಸಿದರು. ರಕ್ಷಿಸಲ್ಪಟ್ಟ ಬಾಲಕನನ್ನು ಮುಂದಿನ ಪೋಷಣೆ ಮತ್ತು ಪುನರ್ವಸತಿಗಾಗಿ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಗೆ ಒಪ್ಪಿಸಲಾಯಿತು. ಈ ಕಾರ್ಯಾಚರಣೆಯಲ್ಲಿ ಕಾರ್ಮಿಕ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಪೊಲೀಸ್ ಇಲಾಖೆ, ನಗರಸಭೆ, 1098 ಸಹಾಯವಾಣಿ ಸಿಬ್ಬಂದಿ ಹಾಗೂ ವಿವಿಧ ಸ್ವಯಂಸೇವಾ ಸಂಸ್ಥೆಗಳ ಪ್ರತಿನಿಧಿಗಳು ಪಾಲ್ಗೊಂಡಿದ್ದರು.