ಸಮಾಲೋಚಿಸದೆ ಕಾನೂನು ಜಾರಿ

ಕನಕಗಿರಿ ತಹಸಿಲ್ ಕಚೇರಿ ಶಿರಸ್ತೇದಾರ್ ಸುನಿಲ ಅವರಿಗೆ ಸಿಐಟಿಯು ತಾಲೂಕು ಘಟಕದಿಂದ ಮನವಿ ಸಲ್ಲಿಸಲಾಯಿತು. ಜಿಲ್ಲಾ ಖಜಾಂಚಿ ಲಕ್ಷ್ಮೀ ಸೋನಾರೆ, ತಾಲೂಕು ಅಧ್ಯಕ್ಷ ಮಲ್ಲಪ್ಪ ಮ್ಯಾಗಡೆ, ಪದಾಧಿಕಾರಿಗಳಾದ ನಿಂಗಪ್ಪ, ಶಿವು, ಮರಿಯಪ್ಪ, ಮೌಲಾ ಹುಸೇನ, ಹೊನ್ನೂರು ಸಾಬ್, ಪರಶುರಾಮ, ರಮೇಶ್, ಹನುಮಂತ, ಬಾಳಪ್ಪ ಹುಲಿಹೈದರ ಇತರರಿದ್ದರು.
ಕನಕಗಿರಿ ತಹಸಿಲ್ ಕಚೇರಿ ಶಿರಸ್ತೇದಾರ್ ಸುನಿಲ ಅವರಿಗೆ ಸಿಐಟಿಯು ತಾಲೂಕು ಘಟಕದಿಂದ ಮನವಿ ಸಲ್ಲಿಸಲಾಯಿತು. ಜಿಲ್ಲಾ ಖಜಾಂಚಿ ಲಕ್ಷ್ಮೀ ಸೋನಾರೆ, ತಾಲೂಕು ಅಧ್ಯಕ್ಷ ಮಲ್ಲಪ್ಪ ಮ್ಯಾಗಡೆ, ಪದಾಧಿಕಾರಿಗಳಾದ ನಿಂಗಪ್ಪ, ಶಿವು, ಮರಿಯಪ್ಪ, ಮೌಲಾ ಹುಸೇನ, ಹೊನ್ನೂರು ಸಾಬ್, ಪರಶುರಾಮ, ರಮೇಶ್, ಹನುಮಂತ, ಬಾಳಪ್ಪ ಹುಲಿಹೈದರ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಸಿಐಟಿಯು
  • ಜಿಲ್ಲಾ
  • ಖಜಾಂಚಿ
ಕನಕಗಿರಿ: ಕೇಂದ್ರ ಸರ್ಕಾರ ಏ.1ರಿಂದ ಜಾರಿಗೆ ತರುತ್ತಿರುವ ಕಾರ್ಮಿಕ ವಿರೋಧಿ 4 ಕಾರ್ಮಿಕ ಸಂಹಿತೆಗಳ ವಿರುದ್ಧ ಸಿಐಟಿಯು ತಾಲೂಕು ಘಟಕದಿಂದ ಬುಧವಾರ ಕಾರ್ಮಿಕ ಕರಾಳ ದಿನಾಚರಣೆಯನ್ನಾಗಿಸಿ ತಹಸಿಲ್ ಕಚೇರಿ ಶಿರಸ್ತೇದಾರ್ ಸುನಿಲ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಸಿಐಟಿಯು ಜಿಲ್ಲಾ ಖಜಾಂಚಿ ಲಕ್ಷ್ಮೀ ಸೋನಾರೆ ಮಾತನಾಡಿ, ವ್ಯವಹಾರವನ್ನು ಸುಲಭೀಕರಿಸಲು ಎಂಬ ಹೆಸರಿನಲ್ಲಿ ಕಾರ್ಮಿಕ ವಿರೋಧಿ ಮತ್ತು ಮಾಲೀಕರ ಪರವಾದ ಈ ಕಾರ್ಮಿಕ ಸಂಹಿತೆಗಳನ್ನು ಕಾರ್ಮಿಕ ಸಂಘಟನೆಗಳು ನಿರಂತರವಾಗಿ ವಿರೋಧಿಸುವುದಲ್ಲದೇ, ಅವುಗಳನ್ನು ರದ್ದುಪಡಿಸಲು ಆಗ್ರಹಿಸುತ್ತಿವೆ.
2026ರ ಫೆ. 12ರಂದು ನಡೆದ ಐತಿಹಾಸಿಕ ಸಾರ್ವತ್ರಿಕ ಮುಷ್ಕರದ ನಂತರವೂ ಕೇಂದ್ರ ಸರ್ಕಾರ ಈ ವಿಷಯದಲ್ಲಿ ಯಾವುದೇ ಗಂಭೀರ ಚರ್ಚೆಗೆ ಮುಂದೆ ಬಂದಿಲ್ಲ. ಕಾರ್ಮಿಕ ಸಂಹಿತೆಗಳ ರಚನೆಯ ಹಂತದಿಂದಲೂ ಕಾರ್ಮಿಕ ಸಂಘಟನೆಗಳೊಂದಿಗೆ ಯಾವುದೇ ಸಮಾಲೋಚನೆ ನಡೆಸಿಲ್ಲ. ಭಾರತದ ಕಾರ್ಮಿಕರ ಜೀವನಕ್ಕೆ ಸಂಬಂಧಿಸಿದಂತಹ ಮಹತ್ವದ ವಿಷಯದ ಬಗ್ಗೆ ಚರ್ಚಿಸಲು ಭಾರತೀಯ ಕಾರ್ಮಿಕ ಸಮ್ಮೇಳನವನ್ನೂ ಕರೆದಿಲ್ಲ.
ಕಾರ್ಮಿಕ ವರ್ಗವು ಕೆಲಸದ ಸುರಕ್ಷತೆ, ಸಂಘಟನೆಯ ಹಕ್ಕು, ತ್ರಿಪಕ್ಷೀಯ ಮಾತುಕತೆ, ಮುಷ್ಕರ ಹಕ್ಕು, ಸಮರ್ಪಕ ವೇತನ, ಸಾಮಾಜಿಕ ಭದ್ರತೆ, ಸಮಾನ ಕೆಲಸಕ್ಕೆ ಸಮಾನ ವೇತನ, ಬೋನಸ್, ಗ್ರ್ಯಾಚುಟಿ ಮತ್ತು ಪಿಂಚಣಿ ಹಕ್ಕುಗಳಿಗಾಗಿ ಹೋರಾಟ ನಡೆಸಿ ಈ ಹಕ್ಕುಗಳನ್ನು ಗಳಿಸಿದೆ.
ಇವೆಲ್ಲವೂ ಸುಮಾರು 150 ವಷರ್ಗಳ ಹೋರಾಟದ ಫಲ. ಆದರೆ, ಈ ಎಲ್ಲ ಸಾಧನೆಗಳನ್ನು ಈಗಿನ ಕೇಂದ್ರ ಸರ್ಕಾರ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರಚಿಸುವ ಮೂಲಕ ಅವೆಲ್ಲವನ್ನೂ ಹಿಂಪಡೆಯಲು ಪ್ರಯತ್ನಿಸುತ್ತಿದೆ. ಜಾರಿಗೆ ಬರಲಿರುವ ಕಾರ್ಮಿಕ ಸಂಹಿತೆಗಳು ಕಾರ್ಮಿಕರನ್ನು ಮತ್ತೆ ಬ್ರಿಟಿಷ್ ವಸಾಹತು ಕಾಲದ ಶೋಷಣಾತ್ಮಕ ಪರಿಸ್ಥಿತಿಗಳಿಗೆ ತಳ್ಳಲಿವೆ ಎಂದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net