ಪರಿಸರ ರಕ್ಷಣೆ ಉಜ್ವಲ ಭವಿಷ್ಯಕ್ಕೆ ಅಡಿಪಾಯ

ಬೆಟಗೇರಿಯಲ್ಲಿ ಗಿಡಗಳನ್ನು ನೆಟ್ಟು ಪೋಷಿಸುತ್ತಿರುವ ವಿದ್ಯಾರ್ಥಿಗಳಿಗೆ ಅಭಿನಂದನಾ ಪತ್ರ ವಿತರಿಸಲಾಯಿತು. ಮುಖ್ಯಶಿಕ್ಷಕ ಪರಶುರಾಮ ಸಾಲ್ಮನಿ, ಶಿಕ್ಷಕರಾದ ಗಿರಿಯಪ್ಪ, ರವಿಕಿರಣ, ರಾಜಾಸಾಬ್, ಮರ್ದಾನಲಿ, ಪ್ರಕಾಶರೆಡ್ಡಿ, ವೀರಯ್ಯ, ನಾರಾಯಣಪ್ಪ, ಶಾಂತವೀರಯ್ಯ, ಸುನೀತಾ, ಶ್ವೇತಾ, ಸೋಮಣ್ಣ ಇತರರಿದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ಮುಖ್ಯಶಿಕ್ಷಕ ಪರಶುರಾಮ ಸಾಲ್ಮನಿ ಅನಿಸಿಕೆ
  • ಪರಿಸರ ಸಂರಕ್ಷಣೆಯ ಪ್ರತಿಜ್ಞಾವಿಧಿ
  • ಅಭಿನಂದನಾ ಪತ್ರ ವಿತರಣೆ
ಅಳವಂಡಿ: ಪ್ರತಿಯೊಬ್ಬರೂ ಗಿಡ-ಮರಗಳನ್ನು ಬೆಳೆಸುವ ಮೂಲಕ ಪರಿಸರ ರಕ್ಷಿಸುವುದು ಇಂದಿನ ತುರ್ತು ಅಗತ್ಯ ಎಂದು ಮುಖ್ಯಶಿಕ್ಷಕ ಪರಶುರಾಮ ಸಾಲ್ಮನಿ ಹೇಳಿದರು.
ಬೆಟಗೇರಿ ಸರ್ಕಾರಿ ಪ್ರೌಢಶಾಲೆಯಲ್ಲಿ ಸಾಲುಮರದ ತಿಮ್ಮಕ್ಕ ಇಕೋ ಕ್ಲಬ್‌ನಿಂದ ಶನಿವಾರ ವಿದ್ಯಾರ್ಥಿಗಳಿಗೆ ಪರಿಸರ ಸಂರಕ್ಷಣೆಯ ಪ್ರತಿಜ್ಞಾವಿಧಿ ಹಾಗೂ ಗಿಡಗಳನ್ನು ನೆಟ್ಟು ಪೋಷಿಸುತ್ತಿರುವ ಮಕ್ಕಳಿಗೆ ಅಭಿನಂದನಾ ಪತ್ರ ವಿತರಿಸಿ ಮಾತನಾಡಿದರು.
ಸಣ್ಣ ವಯಸ್ಸಿನಲ್ಲೇ ಮಕ್ಕಳಿಗೆ ಪರಿಸರ ಕಾಳಜಿ ಮೂಡಿಸುವುದು ನಾಡಿನ ಉಜ್ವಲ ಭವಿಷ್ಯಕ್ಕೆ ಅಡಿಪಾಯ. ಪರಿಸರ ಬೆಳೆಸಿ, ನಾಡು ಉಳಿಸಿ, ಶುದ್ಧ ಪರಿಸರ ಆರೋಗ್ಯಕರ ಜೀವನಕ್ಕೆ ಅನುಕೂಲ ಎಂದರು. ವಿದ್ಯಾರ್ಥಿಗಳಿಗೆ ಪರಿಸರ ಸಂರಕ್ಷಣೆಯ ಪ್ರತಿಜ್ಞಾವಿಧಿ ಬೋಧಿಸಿ ಅಭಿನಂದನಾ ಪತ್ರ ವಿತರಿಸಲಾಯಿತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net