

ಕುಷ್ಟಗಿ: ಬೆಂಗಳೂರು-ಹುಬ್ಬಳ್ಳಿ ನಡುವೆ ಸಂಚರಿಸುವ ಸೂಪರ್‌ಫಾಸ್ಟ್ ರೈಲನ್ನು (ಸಂಖ್ಯೆ 20688/20687) ಗದಗ ಹಾಗೂ ತಳಕಲ್ ಜಂಕ್ಷನ್ ಮೂಲಕ ಕುಷ್ಟಗಿವರೆಗೆ ವಿಸ್ತರಿಸಬೇಕೆಂದು ಒತ್ತಾಯಿಸಿ ಕುಷ್ಟಗಿ ರೈಲ್ವೆ ಹೋರಾಟ ಸಮಿತಿಯು ಕೊಪ್ಪಳ ಸಂಸದ ರಾಜಶೇಖರ ಹಿಟ್ನಾಳ ನೇತೃತ್ವದಲ್ಲಿ ಗುರುವಾರ ಹುಬ್ಬಳ್ಳಿಯಲ್ಲಿ ನೈಋತ್ಯ ರೈಲ್ವೆ ವಲಯದ ಪ್ರಧಾನ ವ್ಯವಸ್ಥಾಪಕ ಪಿ. ಅನಂತಗೆ ಮನವಿ ಸಲ್ಲಿಸಿತು.