ಮಾನಸಿಕ ಬೆಳವಣಿಗೆಗೆ ಪಠ್ಯೇತರ ಚಟುವಟಿಕೆ ಪೂರಕ

ಗಂಗಾವತಿ ಎಚ್.ಆರ್. ಶ್ರೀರಾಮುಲು ಸ್ಮಾರಕ ಪದವಿ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಕ್ರೀಡಾಕೂಟಕ್ಕೆ ವಿಧಾನಪರಿಷತ್ ಮಾಜಿ ಸದಸ್ಯ ಎಚ್.ಆರ್. ಶ್ರೀನಾಥ ಶುಕ್ರವಾರ ಚಾಲನೆ ನೀಡಿದರು. ಪ್ರಾಚಾರ್ಯ ಡಾ. ವಿಜಯಾನಂದ ವಗ್ಗಿ, ದೈಹಿಕ ಶಿಕ್ಷಣ ನಿರ್ದೇಶಕ ಡಾ. ಮೋಹನ್ ಇತರರಿದ್ದರು.
ಗಂಗಾವತಿ ಎಚ್.ಆರ್. ಶ್ರೀರಾಮುಲು ಸ್ಮಾರಕ ಪದವಿ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಕ್ರೀಡಾಕೂಟಕ್ಕೆ ವಿಧಾನಪರಿಷತ್ ಮಾಜಿ ಸದಸ್ಯ ಎಚ್.ಆರ್. ಶ್ರೀನಾಥ ಶುಕ್ರವಾರ ಚಾಲನೆ ನೀಡಿದರು. ಪ್ರಾಚಾರ್ಯ ಡಾ. ವಿಜಯಾನಂದ ವಗ್ಗಿ, ದೈಹಿಕ ಶಿಕ್ಷಣ ನಿರ್ದೇಶಕ ಡಾ. ಮೋಹನ್ ಇತರರಿದ್ದರು.
Published on
ಗಂಗಾವತಿ: ನಗರದ ಎಚ್.ಆರ್. ಶ್ರೀರಾಮುಲು ಸ್ಮಾರಕ ಮಹಾವಿದ್ಯಾಲಯದಲ್ಲಿ ವಾರ್ಷಿಕ ಕ್ರೀಡಾಕೂಟಕ್ಕೆ ಶುಕ್ರವಾರ ಚಾಲನೆ ದೊರೆಯಿತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಗಂಗಾವತಿ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ, ವಿಧಾನ ಪರಿಷತ್ ಮಾಜಿ ಸದಸ್ಯ ಎಚ್.ಆರ್. ಶ್ರೀನಾಥ, ಕಾಲೇಜುಗಳಲ್ಲಿ ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳು ನಿರಂತರ ನಡೆಯುವುದರಿಂದ ವಿದ್ಯಾರ್ಥಿಗಳು ಮಾನಸಿಕವಾಗಿ ಸದೃಢರಾಗುತ್ತಾರೆ. ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಶಾರೀರಿಕ ದೃಢತೆ ಹಾಗೂ ನಾಯಕತ್ವ ಗುಣ ಬೆಳೆಸಿಕೊಳ್ಳಲು ಸಾಧ್ಯ ಎಂದರು.
ಸಂಸ್ಥೆಯ ಕಾರ್ಯದರ್ಶಿ ಡಾ.ಎ. ಸೋಮರಾಜು ಮಾತನಾಡಿ, ಕ್ರೀಡೆ ಇಲ್ಲದ ಜೀವನ ಕೀಟ ತಿಂದ ಹಣ್ಣಿನಂತೆ. ಕ್ರೀಡಾಪಟುಗಳು ಸೋಲು-ಗೆಲುವನ್ನು ಸಮನಾಗಿ ಸ್ವೀಕರಿಸಬೇಕು. ನಿರಂತರ ಅಭ್ಯಾಸ ಮತ್ತು ತರಬೇತಿಯಿಂದ ಮಾತ್ರ ಕ್ರೀಡಾ ಕ್ಷೇತ್ರದಲ್ಲಿ ದೊಡ್ಡ ಸಾಧನೆ ಮಾಡಲು ಸಾಧ್ಯ ಎಂದು ಕಿವಿಮಾತು ಹೇಳಿದರು.
ಕಾಲೇಜಿನ ಪ್ರಾಚಾರ್ಯರಾದ ಡಾ. ವಿಜಯಾನಂದ ವಗ್ಗಿ ಅಧ್ಯಕ್ಷತೆ ವಹಿಸಿದ್ದರು. ದೈಹಿಕ ಶಿಕ್ಷಣ ನಿರ್ದೇಶಕ ಡಾ. ಮೋಹನ್ ಹೊಸಕೋಟೆ ಕ್ರೀಡಾ ಪ್ರತಿಜ್ಞಾವಿಧಿ ಬೋಧಿಸಿದರು. ಸಂಸ್ಥೆಯ ಖಜಾಂಚಿ ಬದರಿ ನಾರಾಯಣ, ಸದಸ್ಯರಾದ ಜೆ. ನಾಗರಾಜ, ಸುಬ್ರಮಣ್ಯ ಭಟ್‌ರಾಯರ್, ಹನುಮಂತಪ್ಪ ನಾಯಕ ಉಪಸ್ಥಿತರಿದ್ದರು. ಡಾ. ಸತೀಶ್ ಕೊಂತಮ್ ಸ್ವಾಗತಿಸಿದರು. ಡಾ. ಪ್ರವೀಣ ಚಿತ್ರಗಾರ ಕಾರ್ಯಕ್ರಮ ನಿರೂಪಿಸಿದರು. ಪ್ರೊ. ರವಿ ವಂದಿಸಿದರು. ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಪಾಲ್ಗೊಂಡಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net