ಮಂಗಳೂರು ಗ್ರಾಮದಲ್ಲಿ ಭೂಮಿ ದಿನ ಕಾರ್ಯಕ್ರಮವನ್ನು ಯಲಬುರ್ಗಾ ಹಿರಿಯ ಪ್ರಧಾನ ಸಿವಿಲ್ ನ್ಯಾಯಾಧೀಶ ರಂಗಸ್ವಾಮಿ ಜೆ ಮಾತನಾಡಿದರು. ತಾಪಂ ಇಒ ಸಂತೋಷ ಬಿರಾದಾರ್ ಪಾಟೀಲ್, ವಕೀಲರ ಸಂಘದ ಅಧ್ಯಕ್ಷ ಎಸ್.ಎಸ್.ಹೊಂಬಳ, ಅಪರ ಸರ್ಕಾರಿ ವಕೀಲ ಮಲ್ಲನಗೌಡ ಎಸ್. ಪಾಟೀಲ್ ಇತರರಿದ್ದರು.
ಕುಕನೂರು: ಭೂಮಿಯನ್ನು ರಕ್ಷಣೆ ಮಾಡುವುದು ಪ್ರತಿಯೊಬ್ಬರ ಮುಖ್ಯ ಕರ್ತವ್ಯವಾಗಿದೆ ಎಂದು ಯಲಬುರ್ಗಾ ಹಿರಿಯ ಪ್ರಧಾನ ಸಿವಿಲ್ ನ್ಯಾಯಾಧೀಶ ರಂಗಸ್ವಾಮಿ ಜೆ ಹೇಳಿದರು.
ತಾಲೂಕಿನ ಮಂಗಳೂರು ಗ್ರಾಮದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ನ್ಯಾಯವಾದಿಗಳ ಸಂಘ, ತಾಪಂ, ಗ್ರಾಪಂ ಹಾಗೂ ಕಂದಾಯ ಇಲಾಖೆ ಆಶ್ರಯದಲ್ಲಿ ಭೂಮಿ ದಿನ ಕಾರ್ಯಕ್ರಮವನ್ನು ಬುಧವಾರ ಉದ್ಘಾಟಿಸಿ ಮಾತನಾಡಿದರು.
ಭೂಮಿ ಒಂದು ಗ್ರಹ. ನಮ್ಮೆಲ್ಲರನ್ನು ಹೊತ್ತು ರಕ್ಷಣೆ ಮಾಡುತ್ತದೆ. ಭೂಮಿ ಇರದಿದ್ದರೆ ನಾವು ಬದುಕಲು ಸಾಧ್ಯವಿಲ್ಲ. ಪರಿಸರ ರಕ್ಷಣೆ ಮಾಡಿದಾಗ ಮಾತ್ರ ಭೂಮಿ ಉಳಿಯುತ್ತದೆ. ಇಲ್ಲದಿದ್ದರೆ ನಮ್ಮನ್ನು ರಕ್ಷಣೆ ಮಾಡುತ್ತಿರುವ ಭೂಮಿ ತನ್ನ ಸತ್ತ್ವವನ್ನು ಕಳೆದುಕೊಳ್ಳುತ್ತದೆ. ತಾವೆಲ್ಲರೂ ಭೂಮಿಯನ್ನು ರಕ್ಷಣೆ ಮಾಡಿ ಪರಿಸರವನ್ನು ರಕ್ಷಿಸಿ ಮತ್ತು ನಮ್ಮ ಬೆಳೆಗಳಿಗೆ ರಾಸಾಯನಿಕ ಗೊಬ್ಬರ ಬಳಸದೆ ಸಾವಯವ ಕೃಷಿ ಅಳವಡಿಸಿಕೊಳ್ಳಬೇಕು ಎಂದರು.
ವಕೀಲರ ಸಂಘದ ಜಂಟಿ ಕಾರ್ಯದರ್ಶಿ ಹಸನಸಾಬ್ ನದಾಫ್, ಗ್ರಾಪಂ ಪಿಡಿಒ ನೀಲಮ್ಮ ಚಳಗೇರಿ, ಉಪ ತಹಸೀಲ್ದಾರ್ ಡಿ.ಕೆ.ಬಸವರಾಜ, ನ್ಯಾಯಾಲಯ ಸಿಬ್ಬಂದಿ ರಾಘವೇಂದ್ರ ಕೋಳಿಹಾಳ ವಿನಾಯಕ ಇತರರಿದ್ದರು.