ಅಡುಗೆದಾರರು ಸೇರಿ ಇತರ ಸಿಬ್ಬಂದಿಯೊಂದಿಗೆ ಸಭೆ ನಡೆಸಿ, ವಿದ್ಯಾರ್ಥಿನಿಯರ ಯೋಗಕ್ಷೇಮದ ಜತೆಗೆ ಸ್ವಚ್ಛತೆ ಬಗ್ಗೆ ಕಾಳಜಿವಹಿಸಬೇಕು. ವಿದ್ಯಾರ್ಥಿನಿಯರಿಗೆ ನೀಡುವ ಪೌಷ್ಟಿಕ ಆಹಾರದ ಮೆನು ಪರಿಶೀಲಿಸಿದರು. ಸರ್ಕಾರದ ನಿಯಮಾವಳಿಯಂತೆ ಪೌಷ್ಟಿಕ ಆಹಾರ ವಿತರಣೆಯಾಗಬೇಕಿದ್ದು, ಲೋಪಕ್ಕೆ ಅವಕಾಶ ನೀಡಬಾರದು ಎಂದರು. ಕಾನೂನಿನ ಅರಿವು, ಹಕ್ಕುಗಳು ಮತ್ತು ಕಾಯ್ದೆಗಳ ಕುರಿತು ವಿದ್ಯಾರ್ಥಿನಿಯರಿಗೆ ಮಾಹಿತಿ ನೀಡಲಾಯಿತು. ಪ್ರಧಾನ ಸಿವಿಲ್ ನ್ಯಾಯಾಧೀಶ ನಾಗೇಶ ಪಾಟೀಲ್, ಹಾಸ್ಟೆಲ್ ವಾರ್ಡನ್ ಮತ್ತು ಸಿಬ್ಬಂದಿ ಇದ್ದರು.