ಉತ್ಸವಗಳು ಪರಂಪರೆ ಸಂಕೇತ

ಗಂಗಾವತಿ  ಸಿಬಿಎಸ್ ಕಲ್ಯಾಣ ಮಂಟಪದಲ್ಲಿ ಆವರಣದಲ್ಲಿ ಶ್ರೀಗುರು ಚನ್ನಬಸವ ಶಿವಯೋಗಿಗಳ ಜಾತ್ರಾ ಮಹೋತ್ಸವ ನಿಮಿತ್ತ ಹಮ್ಮಿಕೊಂಡಿದ್ದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಮಾಜಿ ಶಾಸಕ ಪರಣ್ಣಮುನವಳ್ಳಿ ಉದ್ಘಾಟಿಸಿದರು. ಮಾಜಿ ಸಂಸದ ಎಸ್.ಶಿವರಾಮನಗೌಡ, ಮಾಜಿ ಸಚಿವ ಎಂ.ಮಲ್ಲಿಕಾರ್ಜುನ ನಾಗಪ್ಪ ಇತರರಿದ್ದರು.
ಗಂಗಾವತಿ ಸಿಬಿಎಸ್ ಕಲ್ಯಾಣ ಮಂಟಪದಲ್ಲಿ ಆವರಣದಲ್ಲಿ ಶ್ರೀಗುರು ಚನ್ನಬಸವ ಶಿವಯೋಗಿಗಳ ಜಾತ್ರಾ ಮಹೋತ್ಸವ ನಿಮಿತ್ತ ಹಮ್ಮಿಕೊಂಡಿದ್ದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಮಾಜಿ ಶಾಸಕ ಪರಣ್ಣಮುನವಳ್ಳಿ ಉದ್ಘಾಟಿಸಿದರು. ಮಾಜಿ ಸಂಸದ ಎಸ್.ಶಿವರಾಮನಗೌಡ, ಮಾಜಿ ಸಚಿವ ಎಂ.ಮಲ್ಲಿಕಾರ್ಜುನ ನಾಗಪ್ಪ ಇತರರಿದ್ದರು.
Published on
ಗಂಗಾವತಿ: ಧಾರ್ಮಿಕ ಮತ್ತು ಸಾಂಸ್ಕೃತಿಕ ಉತ್ಸವಗಳು ಪರಂಪರೆ ಸಂಕೇತವಾಗಿದ್ದು, ಕಲಾ ಪ್ರಕಾರಗಳಿಗೆ ಪ್ರೋತ್ಸಾಹ ದೊರೆಯಲಿದೆ ಎಂದು ಮಾಜಿ ಶಾಸಕ ಪರಣ್ಣಮುನವಳ್ಳಿ ಹೇಳಿದರು.
ನಗರದ ಸಿಬಿಎಸ್ ಕಲ್ಯಾಣ ಮಂಟಪದಲ್ಲಿ ಆವರಣದಲ್ಲಿ ಶ್ರೀಗುರು ಚನ್ನಬಸವ ಶಿವಯೋಗಿಗಳ ಜಾತ್ರಾ ಮಹೋತ್ಸವ ನಿಮಿತ್ತ ಶುಕ್ರವಾರ ಹಮ್ಮಿಕೊಂಡಿದ್ದ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಶ್ರೀಮಠದಿಂದ ಧಾರ್ಮಿಕ, ಆಧ್ಯಾತ್ಮಿಕ ಮತ್ತು ಶೈಕ್ಷಣಿಕ ಕಾರ್ಯಕ್ರಮಗಳ ಜತೆಗೆ ಸಾಮೂಹಿಕ ಮದುವೆ ಹಮ್ಮಿಕೊಳ್ಳಲಾಗುತ್ತಿದೆ. ಹೆಸರಾಂತ ಕಲಾವಿದರನ್ನು ಆಹ್ವಾನಿಸುವ ಮೂಲಕ ಮನೋರಂಜನೆಗೂ ಆದ್ಯತೆ ನೀಡಲಾಗುತ್ತಿದೆ ಎಂದರು.
ಕಾಮಿಡಿ ಕಿಲಾಡಿಗಳು ತಂಡದಿಂದ ಹಾಸ್ಯೋತ್ಸವ ಮತ್ತು ನೃತ್ಯ ಪ್ರದರ್ಶನ ನಡೆಯಿತು. ನಿಡಶೇಷಿಯ ಅಭಿನವ ಕರಿಬಸವ ಶಿವಾಚಾರ್ಯರು ಸಾನ್ನಿಧ್ಯವಹಿಸಿದ್ದರು. ಮಾಜಿ ಸಂಸದ ಎಸ್.ಶಿವರಾಮನಗೌಡ, ಮಾಜಿ ಸಚಿವ ಎಂ.ಮಲ್ಲಿಕಾರ್ಜುನನಾಗಪ್ಪ, ಶ್ರೀ ಚನ್ನಮಲ್ಲಿಕಾರ್ಜುನ ಟ್ರಸ್ಟಿಗಳಾದ ಸಿದ್ದನಗೌಡ ಪಾಟೀಲ್, ಹೊಸಳ್ಳಿ ರಾಮಲಿಂಗಪ್ಪ, ಕೆ.ಚನ್ನಬಸಯ್ಯಸ್ವಾಮಿ, ಎಚ್.ಗಿರಿಯಪ್ಪ, ಗಾಳಿ ರುದ್ರಪ್ಪ, ಜೋಗದ ನಾರಾಯಣಪ್ಪ ನಾಯಕ ಇತರರಿದ್ದರು.
ಅದರಂತೆ ಶ್ರೀಮಠ ಪುರಾಣ ಮಂಟಪದಲ್ಲಿ ನಟರಾಜ ನೃತ್ಯ ಕಲಾಮಂದಿರ ವಿದ್ಯಾರ್ಥಿಗಳಿಂದ ಭರತ ನಾಟ್ಯ ಪ್ರದರ್ಶನ ನಡೆಯಿತು. ಪ್ರಮುಖರಾದ ಬಾಬುಲಾಲ್ ಬಾಂಠಿಯಾ, ಪಂಪಾಪತಿ ಹುರಕಡ್ಲಿ, ಶಿವಲಿಂಗಯ್ಯ ಸಾಲಿಮಠ, ಅಕ್ಕಿಪ್ರಕಾಶ, ಅಶೋಕ ಪಾಟೀಲ್, ನಟರಾಜ್ ಸಾಲ್ಗುಡಿ, ಸಿದ್ದಲಿಂಗೇಶ್ವರ ಪೂಲಭಾವಿ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net