ಗಂಗಾವತಿ ತಾಲೂಕಾಡಳಿತ ಸೌಧದ ಕಚೇರಿ ಮುಂದೆ ದಲಿತ ಸೇನೆ ಜಿಲ್ಲಾ ಘಟಕದ ಸದಸ್ಯರು ಶಿರಸ್ತೇದಾರ್ ರವಿಕುಮಾರ ನಾಯಕ್ವಾಡಿಗೆ ಮನವಿ ಸಲ್ಲಿಸಿದರು. ಜಿಲ್ಲಾಧ್ಯಕ್ಷ ಉಡುಚಪ್ಪ ಶ್ರೀರಾಮನಗರ, ಪದಾಧಿಕಾರಿಗಳಾದ ಜಿ.ಮಂಜುನಾಥ, ಮೌಲಸಾಬ್ ನದ್ಾ, ಕೆ.ಮೌಲಾಲಿ ಇತರರಿದ್ದರು.
ಗಂಗಾವತಿ: ಸರ್ಕಾರಿ ಕಚೇರಿಗಳಲ್ಲಿರುವ ಖಾಲಿ ಹುದ್ದೆ ಭರ್ತಿ ಮಾಡುವಂತೆ ಒತ್ತಾಯಿಸಿ ದಲಿತ ಸೇನೆ ಜಿಲ್ಲಾ ಘಟಕದ ಸದಸ್ಯರು ನಗರದ ತಾಲೂಕಾಡಳಿತ ಸೌಧದ ಕಚೇರಿ ಮುಂದೆ ಬುಧವಾರ ಪ್ರತಿಭಟನೆ ನಡೆಸಿ ಶಿರಸ್ತೇದಾರ್ ರವಿಕುಮಾರ ನಾಯಕ್ವಾಡಿಗೆ ಮನವಿ ಸಲ್ಲಿಸಿದರು.
ಜಿಲ್ಲಾಧ್ಯಕ್ಷ ಉಡುಚಪ್ಪ ಶ್ರೀರಾಮನಗರ ಮಾತನಾಡಿ, ಯುವಕರಿಗೆ ಉದ್ಯೋಗ ನೀಡುವಲ್ಲಿ ಸರ್ಕಾರ ವಿಲವಾಗಿದ್ದು, ಸರ್ಕಾರಿ ಕಚೇರಿಗಳಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡುತ್ತಿಲ್ಲ. ಉದ್ಯೋಗಕ್ಕಾಗಿ ಅಲೆಯುತ್ತಿರುವ ಲಕ್ಷಾಂತರ ಯುವಕರು ಆಯುಷ್ಯ ಕಳೆದುಕೊಳ್ಳುತ್ತಿದ್ದಾರೆ.
ಬಜೆಟ್‌ಗೆ ಮುನ್ನವೇ ರಾಜ್ಯ ಸರ್ಕಾರ ಹುದ್ದೆ ಭರ್ತಿಗೆ ಸುತ್ತೋಲೆ ಹೊರಡಿಸಬೇಕಿದ್ದು, ನೇಮಕ ಪ್ರಕ್ರಿಯೆಯನ್ನು ಪಾರದರ್ಶಕ ಹಾಗೂ ಸಮಯಬದ್ಧವಾಗಿ ಪೂರ್ಣಗೊಳಿಸಿ ನ್ಯಾಯಯುತ ಉದ್ಯೋಗಾವಕಾಶ ನೀಡುವಂತೆ ಒತ್ತಾಯಿಸಿದರು.