ಕೊಪ್ಪಳದ ಡಿಸಿ ಕಚೇರಿ ಸಭಾಂಗಣದಲ್ಲಿ ಕಾಯಕ ಶರಣರ ಭಾವಚಿತ್ರಗಳಿಗೆ ಎಡಿಸಿ ಸಿದ್ರಾಮೇಶ್ವರ ಅವರು ಪುಷ್ಪನಮನ ಸಲ್ಲಿಸಿದರು. ವಿವಿಧ ಇಲಾಖೆಗಳ ಸಿಬ್ಬಂದಿಗಳು,ಹಿರಿಯ ಸಾಹಿತಿ ಮಹಾಂತೇಶ ಮಲ್ಲನಗೌಡರ, ಕಾಯಕ ಶರಣರ ಸೇವಾ ಸಮಿತಿ ಅಧ್ಯಕ್ಷ ರಾಮಣ್ಣ ಕಂದಾರಿ, ಡಾ. ಬಿ.ಜ್ಞಾನಸುಂದರ, ಮಾದಿಗ ಮಹಾಸಭಾ ಟ್ರಸ್ಟ್ ಅಧ್ಯಕ್ಷ ಚನ್ನಬಸಪ್ಪ ಹೆಚ್. ಹೊಳಿಯಪ್ಪನವರ ಇದ್ದರು.
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
ಕಾಯಕ ಶರಣರ ಜಯಂತಿ
ಕೊಪ್ಪಳ : ಕಾಯಕ ಶರಣರ ಜಯಂತಿ ಅಂಗವಾಗಿ ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಅವರು ಮಾದಾರ ಚನ್ನಯ್ಯ, ಮಾದಾರ ಧೂಳಯ್ಯ, ಡೋಹರ ಕಕ್ಕಯ್ಯ, ಸಮಗಾರ ಹರಳಯ್ಯ ಹಾಗೂ ಉರಿಲಿಂಗ ಪೆದ್ದಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಕಾಯಕ ಶರಣರ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.
ಕನ್ನಡ ಮತ್ತು ಸಂಸತಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸಿಬಂದಿಗಳು, ಹಿರಿಯ ಸಾಹಿತಿ ಮಹಾಂತೇಶ ಮಲ್ಲನಗೌಡರ, ಕಾಯಕ ಶರಣರ ಸೇವಾ ಸಮಿತಿ ಅಧ್ಯಕ್ಷ ರಾಮಣ್ಣ ಕಂದಾರಿ, ಡಾ. ಬಿ.ಜ್ಞಾನಸುಂದರ, ಮಾದಿಗ ಮಹಾಸಭಾ ಟ್ರಸ್ಟ್ ಅಧ್ಯಕ್ಷ ಚನ್ನಬಸಪ್ಪ ಹೆಚ್. ಹೊಳಿಯಪ್ಪನವರ ಇತರರಿದ್ದರು.