ನಾಲ್ಕು ಗ್ರಾಮಗಳಿಗೆ ಮದ್ಯಮುಕ್ತ ಸಂಯಮ ಪ್ರಶಸ್ತಿ

ಶರಣಪ್ಪ ಸಲದಾಪುರ
ಶರಣಪ್ಪ ಸಲದಾಪುರ
Published on

ಕುಷ್ಟಗಿ: ತಾಲೂಕಿನ ನಾಲ್ಕು ಗ್ರಾಮಗಳಿಗೆ ಮದ್ಯಮುಕ್ತ ಸಂಯಮ ಪ್ರಶಸ್ತಿ 2026 ಘೋಷಣೆ ಮಾಡಲಾಗಿದೆ ಎಂದು ರಾಜ್ಯ ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷ ಶರಣಪ್ಪ ಸಲದಾಪುರ ಹೇಳಿದರು. 

ಇಲ್ಲಿನ ಠಾಣೆಗೆ ಭಾನುವಾರ ಭೇಟಿ ನೀಡಿ ಮಾತನಾಡಿದರು. ತಾಲೂಕಿನ ಮದ್ನಾಳ, ನಾಗರಾಳ, ಬೋದೂರು ತಾಂಡಾ, ಹಿರೇಬನ್ನಿಗೋಳ ಗ್ರಾಮಗಳನ್ನು ಸಂಯಮ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಇದರಲ್ಲಿ ಸಿಪಿಐ ವಿಶ್ವನಾಥ ಹಿರೇಗೌಡರ ಶ್ರಮವೂ ಇದೆ ಎಂದ ಅವರು, ಮದ್ಯಪಾನಮುಕ್ತ ಗ್ರಾಮಗಳ ಸಂಖ್ಯೆ ಹೆಚ್ಚಾಗುವಂತೆ ಮಂಡಳಿಯೂ ವ್ಯಾಪಕ ಜಾಗೃತಿ ಮೂಡಿಸುತ್ತಿದೆ ಎಂದರು. 

ಆ.16ರಂದು ಕೊಪ್ಪಳ ತಾಲೂಕಿನ ಹಟ್ಟಿ ಗ್ರಾಮದಲ್ಲಿ ಆಯೋಜಿಸುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಗವಿಮಠದ ಅಭಿನವ ಗವಿಸಿದ್ಧೇಶ್ವರ ಶ್ರೀಗಳು, ಇಳಕಲ್ ಗುರು ಮಹಾಂತ ಶ್ರೀಗಳು, ಸಚಿವರಾದ ಬಸವರಾಜ ರಾಯರಡ್ಡಿ, ಶಿವರಾಜ ತಂಗಡಗಿ, ಶಾಸಕರಾದ ದೊಡ್ಡನಗೌಡ ಪಾಟೀಲ್, ರಾಘವೇಂದ್ರ ಹಿಟ್ನಾಳ, ತುಂಗಭದ್ರಾ ಕಾಡಾ ಅಧ್ಯಕ್ಷ ಹಸನಸಾಬ್ ದೋಟಿಹಾಳ ಇತರರು ಭಾಗವಹಿಸುವರು ಎಂದು ತಿಳಿಸಿದರು. 

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net