ಬೆಳಗಿನ ಜಾವದಿಂದಲೇ ತುಂಗಭದ್ರಾ ನದಿಯಲ್ಲಿ ಪವಿತ್ರ ಸ್ನಾನ ಮಾಡಿದ ಭಕ್ತರು, ದೇವಿಗೆ ಹೂ-ಹಣ್ಣು, ನೈವೇದ್ಯ ಸಮರ್ಪಿಸಿ ಹರಕೆ ತೀರಿಸಿದರು. ಕೊಪ್ಪಳ, ಗಂಗಾವತಿ, ಹೊಸಪೇಟೆ ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಭಕ್ತರು ಟ್ರ್ಯಾಕ್ಟರ್, ಟಾಟಾ ಏಸ್ ಹಾಗೂ ಖಾಸಗಿ ವಾಹನಗಳ ಮೂಲಕ ಆಗಮಿಸಿದ್ದರು. ಭಕ್ತರ ಅನುಕೂಲಕ್ಕಾಗಿ ಸಾರಿಗೆ ಸಂಸ್ಥೆಯು ವಿವಿಧ ಘಟಕಗಳಿಂದ ವಿಶೇಷ ಬಸ್ ವ್ಯವಸ್ಥೆ ಕಲ್ಪಿಸಿತ್ತು.