ಈ ಕಾರ್ಯಕ್ರಮದಲ್ಲಿ ಕೊಪ್ಪಳದ ಗವಿಮಠದ ಶ್ರೀ ಅಭಿನವ ಶ್ರೀ ಗವಿಸಿದ್ದೇಶ್ವರ ಮಹಾಸ್ವಾಮಿಗಳು, ಚಿತ್ರದುರ್ಗದ ಶ್ರೀ ಬಸವಮೂರ್ತಿ ಮಾದರ್ ಚೆನ್ನಯ್ಯ ಸ್ವಾಮಿಗಳು, ಹಾಲವರ್ತಿ ಕನಕಗುರುಪೀಠ ಶಾಖಾಮಠದ ಶ್ರೀ ಶಿವಸಿದ್ದೇಶ್ವರ ಮಹಾಸ್ವಾಮಿಗಳು ಚಿತ್ರದುರ್ಗದ ಶ್ರೀ ಮಾರ್ಕಂಡಯ್ಯ ಮುನಿಸ್ವಾಮೀಜಿ, ವಿಜಯನಗರದ ಶ್ರೀ ಪೂರ್ಣಾನಂದ ಭಾರತಿ ಸ್ವಾಮೀಜಿಗಳು, ಇಟಗಿ ಶ್ರೀ ಮರಳುಸಿದ್ದೇಶ್ವರ ಗದ್ದಗೆಪ್ಪ ಅಜ್ಜನವರು, ಬಿಸರಹಳ್ಳಿ ಶ್ರೀ ಮರಳುಸಿದ್ದೇಶ್ವರ ಸ್ವಾಮೀಜಿಗಳು ಸಾನಿಧ್ಯವಹಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಮತ್ತು ಶಾಸಕ ರಾಘವೇಂದ್ರ ಹಿಟ್ನಾಳ ಅವರು ಕಾರ್ಯಕ್ರಮ ಉದ್ಘಾಟಿಸುವರು. ಸಂಸದ ರಾಜಶೇಖರ ಹಿಟ್ನಾಳ ಮತ್ತು ಮಾಜಿ ಸಂಸದ ಸಂಗಣ್ಣ ಕರಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು ಎಂದು ತಿಳಿಸಿದರು.