ವಡ್ಡರಹಟ್ಟಿ ಗ್ರಾಪಂ ಕಚೇರಿ ಮುಂದೆ ಕರ್ನಾಟಕ ಕೃಷಿ ಕೂಲಿಕಾರರ ಮತ್ತು ಗ್ರಾಮೀಣ ಕಾರ್ಮಿಕರ ಸಂಘದ ಸದಸ್ಯರು ಪ್ರತಿಭಟನೆ ನಡೆಸಿದರು. ಜಿಲ್ಲಾಧ್ಯಕ್ಷ ಬಸವರಾಜ ಮರಕುಂಬಿ, ಪದಾಧಿಕಾರಿಗಳಾದ ಕೆ.ಹುಸೇನಪ್ಪ, ತೋಟಪ್ಪ ಆರಾಳ್, ಬಸವರಾಜ, ಮಂಜುನಾಥ ಇತರರಿದ್ದರು.
ಗಂಗಾವತಿ: ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ನೀಡುವುದು ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ಕೃಷಿ ಕೂಲಿಕಾರರ ಮತ್ತು ಗ್ರಾಮೀಣ ಕಾರ್ಮಿಕರ ಸಂಘದ ಸದಸ್ಯರು ತಾಲೂಕಿನ ವಡ್ಡರಹಟ್ಟಿ ಗ್ರಾಪಂ ಕಚೇರಿ ಮುಂದೆ ಬುಧವಾರ ಪ್ರತಿಭಟನೆ ನಡೆಸಿದರು.
ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ನೀಡುವುದು ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ಕೃಷಿ ಕೂಲಿಕಾರರ ಮತ್ತು ಗ್ರಾಮೀಣ ಕಾರ್ಮಿಕರ ಸಂಘದ ಸದಸ್ಯರು ತಾಲೂಕಿನ ವಡ್ಡರಹಟ್ಟಿ ಗ್ರಾಪಂ ಕಚೇರಿ ಮುಂದೆ ಬುಧವಾರ ಪ್ರತಿಭಟನೆ ನಡೆಸಿದರು.
ಆರಾಳ್ ಗ್ರಾಮ ಘಟಕದ ಸದಸ್ಯರೊಂದಿಗೆ ಪ್ರತಿಭಟಿಸಿದ ನಂತರ ಬೇಡಿಕೆ ಮನವಿಯನ್ನು ಪಿಡಿಒ ಸುರೇಶ ಛಲವಾದಿಗೆ ಮನವಿ ಸಲ್ಲಿಸಿದರು. ಜಿಲ್ಲಾಧ್ಯಕ್ಷ ಬಸವರಾಜ ಮರಕುಂಬಿ ಮಾತನಾಡಿ, ಅರ್ಜಿ ಸಲ್ಲಿಸಿದ ಕೂಲಿಕಾರರಿಗೆ ಕೆಲಸ ನೀಡದಿದ್ದರಿಂದ ಗುಳೇ ಹೋಗುತ್ತಿದ್ದು, ಈ ಹಿಂದೆ ಕೆಲಸ ಮಾಡಿರುವ ಕೂಲಿಕಾರರಿಗೆ ಬಾಕಿ ಹಣ ವಿತರಿಸಿಲ್ಲ.
ಕೆಲಸ ಸೃಷ್ಟಿಸುವುದರ ಜತೆಗೆ ಹದಗೆಟ್ಟಿರುವ ಆರಾಳ್, ವಡ್ಡರಹಟ್ಟಿ ರಸ್ತೆ ದುರಸ್ತಿಗೊಳಿಸಬೇಕು. ಆರಾಳ್‌ದಲ್ಲಿ ಕುಡಿವ ನೀರಿನ ಸಮಸ್ಯೆ ಹೆಚ್ಚಿದ್ದು, ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು. ಕಾಲುವೆ, ಕೆರೆ ಹೂಳೆತ್ತುವ ಕಾಮಗಾರಿಗೆ ಅನುಮೋದನೆ ನೀಡುವುದು, ಟ್ರ್ಯಾಕ್ಟರ್ ಬಾಡಿಗೆ ಪಾವತಿಸುವುದು ಸೇರಿ ಮೂಲ ಸೌಕರ್ಯ ಒದಗಿಸುವಂತೆ ಒತ್ತಾಯಿಸಿದರು.