ಕನಕಗಿರಿಯಲ್ಲಿ ಉತ್ತಮ ಸ್ಪಂದನೆ

ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಬಂದ್ ಹಿನ್ನೆಲೆಯಲ್ಲಿ ಕನಕಗಿರಿ ಎಪಿಎಂಸಿಯಲ್ಲಿನ ಅಂಗಡಿಗಳು ಸಂಪೂರ್ಣ ಮುಚ್ಚಿದ್ದವು.
ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಬಂದ್ ಹಿನ್ನೆಲೆಯಲ್ಲಿ ಕನಕಗಿರಿ ಎಪಿಎಂಸಿಯಲ್ಲಿನ ಅಂಗಡಿಗಳು ಸಂಪೂರ್ಣ ಮುಚ್ಚಿದ್ದವು.
Published on
ಕನಕಗಿರಿ: ಕಾರ್ಮಿಕರಿಗೆ ಸೇವಾ ಭದ್ರತೆ ಒದಗಿಸುವುದು ಸೇರಿದಂತೆ ನಾನಾ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕ ಸಂಘಟನೆಗಳು ಕರೆದಿದ್ದ ಅಖಿಲ ಭಾರತ ಸಾರ್ವತ್ರಿಕ ಮುಷ್ಕರಕ್ಕೆ ಪಟ್ಟಣದಲ್ಲಿ ಸ್ಪಂದನೆ ದೊರೆಯಿತು.
ಪಟ್ಟಣದ ದಲ್ಲಾಲಿ, ಕಿರಾಣಿ, ತರಕಾರಿ, ಬೇಕರಿ ಸೇರಿದಂತೆ ನಾನಾ ಅಂಗಡಿಗಳ ಮಾಲೀಕರು ಬೆಂಬಲ ಸೂಚಿಸಿ ಅಂಗಡಿ ಮುಂಗಟ್ಟುಗಳನ್ನು ಪ್ರತಿಭಟನ ಮೆರವಣಿಗೆ ಮುಗಿಯುವವರೆಗೆ ಸ್ವಯಂ ಪ್ರೇರಿತವಾಗಿ ಬಂದ್ ಮಾಡಿ ಸಹಕರಿಸಿದರು.
ಕೃಷಿ ಕಾರ್ಮಿಕ ಸಂಘದ ತಾಲೂಕು ಕಾರ್ಯದರ್ಶಿ ಬಾಳಪ್ಪ ಹುಲಿಹೈದರ್ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರದ ಅಧೀನದಲ್ಲಿರುವ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರಿಗೆ ಸೇವಾ ಭದ್ರತೆ ಇಲ್ಲ. ಸೇವೆಗೆ ತಕ್ಕಂತೆ ಕೇಂದ್ರ ಸರ್ಕಾರ ಬಿಸಿಯೂಟ ನೌಕರರಿಗೆ ವೇತನ ಹೆಚ್ಚಿಸುತ್ತಿಲ್ಲ. ಪ್ರತಿ ಶಾಲೆಯ ನೂರಾರು ಮಕ್ಕಳಿಗೆ ಮಧ್ಯಾಹ್ನ ಅವಧಿಯಲ್ಲಿ ಬಿಸಿಯೂಟ ನೀಡುವ ನೌಕರರನ್ನು 4ನೇ ದರ್ಜೆ ನೌಕರರನ್ನಾಗಿ ಪರಿಗಣಿಸಬೇಕು. 10 ಸಾವಿರ ರೂ. ನಿವೃತ್ತಿ ವೇತನ ನೀಡಬೇಕು. ಬಿಸಿಯೂಟ ನೌಕರರಿಗೆ ಆರೋಗ್ಯ ವಿಮೆ ಜಾರಿ ಮಾಡಬೇಕು ಎಂದು ಆಗ್ರಹಿಸಿ ತಹಸೀಲ್ದಾರ್ ವಿಶ್ವನಾಥ ಮುರುಡಿಗೆ ಮನವಿ ಸಲ್ಲಿಸಿದರು.
ಇದಕ್ಕೂ ಮೊದಲು ಅಂಗನವಾಡಿ, ಬಿಸಿಯೂಟ ನೌಕರರು ಮಾನವ ಸರಪಳಿ ರಚಿಸುವ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಸ್ ನಿಲ್ದಾಣದಿಂದ ವಾಲ್ಮೀಕಿ ವೃತ್ತದವರೆಗೆ ಸಿಐಟಿಯು ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ನಡೆಸಿದರು.
ಅಕ್ಷರ ದಾಸೋಹ ಬಿಸಿಯೂಟ ನೌಕರರ ರಾಜ್ಯಾಧ್ಯಕ್ಷೆ ಲಕ್ಷ್ಮೀದೇವಿ ಸೋನಾರೆ, ಅಂಗನವಾಡಿ ನೌಕರರ ಸಂಘದ ತಾಲೂಕಾಧ್ಯಕ್ಷೆ ಅಮರಮ್ಮ, ಅಂಗನವಾಡಿ ತಾಲೂಕಾ ಕಾರ್ಯದರ್ಶಿ ಲಕ್ಷ್ಮೀ ಸಜ್ಜನ್, ಖಜಾಂಚಿ ಸವಿತಾ, ತೊಂಡೆಪ್ಪ ಕನಕಾಪುರ, ಗ್ರಾಪಂ ನೌಕರರ ಸಂಘದ ತಾಲೂಕು ಅಧ್ಯಕ್ಷ ಮೋಹನ್ ಲಮಾಣಿ, ಕಾರ್ಯದರ್ಶಿ, ನಾಗೇಶ ನಾಯಕ, ಸಿಐಟಿಯು ತಾಲೂಕು ಅಧ್ಯಕ್ಷ ಮಲ್ಲಪ್ಪ ಮ್ಯಾಗಡೆ, ಕಾರ್ಯದರ್ಶಿ ಪರಶುರಾಮ, ಕಾರ್ಮಿಕ ಮುಖಂಡರಾದ ಅಮರೇಶ ಕಡಗದ, ನಿಂಗಪ್ಪ, ಹೊನ್ನೂರುಸಾಬ, ಮೌಲಾಹುಸೇನ, ಕೆಂಚಪ್ಪ, ಪಾಮಣ್ಣ, ವೆಂಕಟೇಶ, ಶಿವು ಕಜ್ಜಿ, ಶಿವಕುಮಾರ ಈಚನಾಳ, ಹನುಮೇಶ ಮ್ಯಾಗಡೆ, ಮಹಿಳಾ ಸಂಘಟಕರಾದ ನೂರಜಹಾನ್, ಭಾರ್ಗವಿ, ಶಾಮೀದಬೀ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net