ಕೊಪ್ಪಳದಲ್ಲಿ ಗ್ರಾಂಪಂ ನೌಕರರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಗ್ರಾಂಪಂ ನೌಕರರಿಂದ ಪ್ರತಿಭಟನೆ ನಡೆಸಲಾಯಿತು. ಗ್ರಾಂಪಂ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಎಂ.ಬಿ. ನಾಡಗೌಡ್ರು, ಕಾರ್ಯದರ್ಶಿ ರಾಜು, ಪ್ರಮುಖರಾದ ಚಂದ್ರಶೇಖರ ಪಾಟೀಲ್, ಚಂದನಗೌಡ, ಮೋಹನ್, ರವೀಂದ್ರ ಜೋಶಿ , ಆಂಜಿನೇಯ, ಪ್ರಕಾಶ್ ಇದ್ದರು.
ಕೊಪ್ಪಳ: ಗ್ರಾಮ ಪಂಚಾಯತ್ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ರಾಜ್ಯದ್ಯಾಂತ ಇಂದು ಜಿಲ್ಲಾ ಪಂಚಾಯತ್ ಚಲೋ ಹೋರಾಟ ಹಮ್ಮಿಕೊಳ್ಳಲಾಗಿದೆ. ರಾಜ್ಯ ಗ್ರಾಮ ಪಂಚಾಯತ್ ನೌಕರರ ಸಂಘ ರಾಜ್ಯ ಸಮಿತಿಯ ಕರೆ ಮೇರೆಗೆ ಜಿಲ್ಲೆಯ ನೂರಾರು ನೌಕರರು ಗುರುವಾರ ಕೊಪ್ಪಳ ಜಿಪಂ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಹಲವು ವರ್ಷಗಳಿಂದ ವೇತನ ಹೆಚ್ಚಳ ಸೇರಿದಂತೆ ಮೂಲಭೂತ ಸಮಸ್ಯೆಗಳ ಕುರಿತು ಸರ್ಕಾರದ ಗಮನ ಸೆಳೆಯಲು ನಿರಂತರ ಹೋರಾಟ ನಡೆಸಿದರೂ ಯಾವುದೇ ಸ್ಪಂದನೆ ದೊರೆತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. 2025 ಡಿಸೆಂಬರ್ 20ರಿಂದ ಬೆಂಗಳೂರಿನಲ್ಲಿ ಧರಣಿ ಸತ್ಯಾಗ್ರಹ ನಡೆಸಿ ಸಚಿವರು ಹಾಗೂ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಭರವಸೆಗಳಷ್ಟೇ ಸಿಕ್ಕಿವೆ, ಕಾರ್ಯರೂಪಕ್ಕೆ ಬಂದಿಲ್ಲ ಎಂದು ದೂರಿದರು.
ಆರ್.ಡಿ.ಪಿ.ಆರ್ ಇಲಾಖೆ ಸಚಿವರು ಮತ್ತು ಅಧಿಕಾರಿಗಳು ನೀಡಿದ ಭರವಸೆಯಂತೆ ಪ್ರಮುಖ ಬೇಡಿಕೆಗಳನ್ನು ಈಡೇರಿಸದಿರುವುದನ್ನು ಖಂಡಿಸಿದರು. ವೇತನದಲ್ಲಿ ರೂ.5000 ಹೆಚ್ಚಳ. ನಿವೃತ್ತಿ ಮತ್ತು ನಿಧನದ ಸಂದರ್ಭದಲ್ಲಿ ರೂ.6 ಲಕ್ಷ ಪರಿಹಾರ. ಸೇವಾ ಹಿರಿತನದ ಆಧಾರದಲ್ಲಿ ವೇತನ. ಡಾಟಾ ಎಂಟ್ರಿ ಆಪರೇಟರ್ಗಳಿಗೆ ಅನುಮೋದನೆ ಇತರೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿದರು. ಸರ್ಕಾರ ತಕ್ಷಣ ಕ್ರಮ ಕೈಗೊಂಡು ಬೇಡಿಕೆಗಳನ್ನು ಈಡೇರಿಸದಿದ್ದರೆ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ಎಚ್ಚರಿಸಿದರು.
ಗ್ರಾಂಪಂ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಎಂ.ಬಿ. ನಾಡಗೌಡ್ರು, ಕಾರ್ಯದರ್ಶಿ ರಾಜು, ಪ್ರಮುಖರಾದ ಚಂದ್ರಶೇಖರ ಪಾಟೀಲ್, ಚಂದನಗೌಡ, ಮೋಹನ್, ರವೀಂದ್ರ ಜೋಶಿ , ಆಂಜಿನೇಯ, ಪ್ರಕಾಶ್, ಉಮಾದೇವಿ ಇತರರಿದ್ದರು.