ಫೆಬ್ರವರಿಯಲ್ಲಿ ಗ್ಯಾರಂಟಿ ಉತ್ಸವ

ಕೊಪ್ಪಳದಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ರಡ್ಡಿ ಶ್ರೀನಿವಾಸ ಮಾತನಾಡಿದರು. ಜಿಪಂ ಸಿಇಒ ವರ್ಣಿತ್ ನೇಗಿ, ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಮಂಜುನಾಥ ಗೋಂಡಬಾಳ, ಕಾಸಿಮ್ ಸಾಬ್, ಎಸ್.ಜಿ.ಅಮರೇಶಪ್ಪ ಇತರರಿದ್ದರು.
ಕೊಪ್ಪಳದಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ರಡ್ಡಿ ಶ್ರೀನಿವಾಸ ಮಾತನಾಡಿದರು. ಜಿಪಂ ಸಿಇಒ ವರ್ಣಿತ್ ನೇಗಿ, ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಮಂಜುನಾಥ ಗೋಂಡಬಾಳ, ಕಾಸಿಮ್ ಸಾಬ್, ಎಸ್.ಜಿ.ಅಮರೇಶಪ್ಪ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಪ್ರಗತಿ ಪರಿಶೀಲನಾ ಸಭೆ

ಫೆಬ್ರವರಿಯಲ್ಲಿ ಗ್ಯಾರಂಟಿ ಉತ್ಸವ

ಕೊಪ್ಪಳ: ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಉತ್ಸವವನ್ನು ನಗರದಲ್ಲಿ ಫೆಬ್ರವರಿ ವಾಹೆಯಲ್ಲಿ ಹಮ್ಮಿಕೊಳ್ಳಲಾಗುವುದು ಎಂದು ಜಿಲ್ಲಾ ಗ್ರಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ರೆಡ್ಡಿ ಶ್ರೀನಿವಾಸ ಹೇಳಿದರು.
ನಗರದ ಜಿಪಂ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಗುರುವಾರ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ವಾತನಾಡಿದರು. ಕಾರ್ಯಕ್ರಮದಲ್ಲಿ ಯೋಜನೆಗಳ ಫಲಾನುಭವಿಗಳನ್ನು ಸನ್ಮಾನಿಸಲಾಗುವುದು. ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಯೋಜಿಸಲು ಯೋಜನೆಗಳಿಗೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ವಿಶೇಷ ಕ್ರಮ ವಹಿಸಬೇಕು.
ಉತ್ಸವಕ್ಕಾಗಿ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಎಲ್ಲ ತಾಲೂಕು ಅಧ್ಯಕ್ಷರು, ಸದಸ್ಯರು ಹೆಚ್ಚಿನ ಜವಾಬ್ದಾರಿಯಿಂದ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದರು.
ಜಿಪಂ ಸಿಇಒ ವರ್ಣಿತ್ ನೇಗಿ ವಾತನಾಡಿ, ಯುವನಿಧಿ ಯೋಜನೆ ಫಲಾನುಭವಿಗಳಿಗೆ ಯುವನಿಧಿ ಪ್ಲಸ್ ಕಾರ್ಯಕ್ರಮದಡಿ ಕೌಶಲ ತರಬೇತಿ ನೀಡಲಾಗುತ್ತಿದ್ದು, ಉದ್ಯೋಗಕ್ಕೆ ಅನುಕೂಲವಾಗಲಿದೆ. ತರಬೇತುದಾರರಿಗೆ ಯುವನಿಧಿ ಯೋಜನೆಯ ನಿರುದ್ಯೋಗ ಭತ್ಯೆ ಕಡಿತವಾಗುವುದಿಲ್ಲ. ಈ ಬಗ್ಗೆ ಎಲ್ಲರಿಗೂ ವಾಹಿತಿ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಮಂಜುನಾಥ ಜಿ.ಗೊಂಡಬಾಳ ವಾತನಾಡಿ, ಉತ್ಸವದಲ್ಲಿ ಜಿಲ್ಲೆಯಲ್ಲಿ ಇವರೆಗೂ ನೀಡಿರುವ ಯೋಜನೆಗಳ ವಾಹಿತಿಯನ್ನು ಫ್ಲೆಕ್ಸ್‌ನಲ್ಲಿ ಅಳವಡಿಸಬೇಕು. ವಯಸ್ಸಾದ ಫಲಾನುಭವಿಗಳಿಗೆ ಅನ್ನಭಾಗ್ಯ ಯೋಜನೆಯ ಸುವಿಧಾ ಕುರಿತು ಹೆಚ್ಚಿನ ಪ್ರಚಾರ ಮತ್ತು ನಾಯಬೆಲೆ ಅಂಗಡಿ ವಾಲೀಕರಿಗೆ ಸೂಚಿಸುವಂತೆ ಆಹಾರ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಕಾಸಿಮ್ ಸಾಬ್, ಅಮರೇಶಪ್ಪ ಎಸ್.ಜಿ., ಸದಸ್ಯರು, ಹಾಗೂ ಗ್ಯಾರಂಟಿ ಯೋಜನೆ ಅನುಷ್ಠಾನ ಇಲಾಖೆಗಳ ಅಧಿಕಾರಿಗಳು ಮತ್ತು ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net