ಸ್ಥಾನ ಹಂಚಿಕೆಯಲ್ಲಿ ರಾಯಚೂರಿಗೆ ಅನ್ಯಾಯ

ಹಂಪನಗೌಡ ಬಾದರ್ಲಿ
ಹಂಪನಗೌಡ ಬಾದರ್ಲಿ
Published on

ಪ್ರಮುಖ ಮುಖ್ಯಾಂಶಗಳು

  • ಹಂಪನಗೌಡ ಬಾದರ್ಲಿ ಕಳವಳ

ಕೊಪ್ಪಳ : ಸಚಿವ ಸ್ಥಾನ ನೀಡುವಲ್ಲಿ ರಾಯಚೂರು ಜಿಲ್ಲೆಗೆ ಅನ್ಯಾಯವಾಗಿದೆ. ಈ ಕುರಿತು ನಮ್ಮ ಪ್ರಯತ್ನವನ್ನು ಮುಂದುವರಿಸಿದ್ದು, ಹೈಕಮಾಂಡ್​ ಬಳಿ ಬೇಡಿಕೆ ಇಟ್ಟಿದ್ದೇವೆ ಎಂದು ಸಿಂಧನೂರು ಶಾಸಕ ಹಂಪನಗೌಡ ಬಾದರ್ಲಿ ಹೇಳಿದರು.

ತಾಲೂಕಿನ ಮುನಿರಾಬಾದ್​ನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ರಾಯಚೂರು ಜಿಲ್ಲೆಗೆ ಸಚಿವ ಸ್ಥಾನ ನೀಡುವಂತೆ ನಾವು ಸಾಧ್ಯವಾದಷ್ಟು ಪ್ರಯತ್ನ ಮಾಡಿದ್ದೇವೆ. ನೀಡದಿದ್ದರೆ ನಾವೇನು ಮಾಡಲು ಸಾಧ್ಯ? ನಮ್ಮ ಬೇಡಿಕೆಯನ್ನು ಹೈಕಮಾಂಡ್​ ಮುಂದಿಡುತ್ತೇವೆ. ಈ ವಿಚಾರದಲ್ಲಿ ಒತ್ತಡವನ್ನೂ ಹೇರುತ್ತಿದ್ದೇವೆ. ರಾಯಚೂರು ಜಿಲ್ಲೆಯಲ್ಲಿ ಕಳೆದ 52 ವರ್ಷಗಳಿಂದ ವೀರಶೈವ-ಲಿಂಗಾಯತ ಸಮುದಾಯಕ್ಕೆ ಸಚಿವ ಸ್ಥಾನ ದೊರೆತಿಲ್ಲ. ಅಲ್ಲದೆ, ಇನ್ನೂ ಕೆಲವು ಸಮಾಜಗಳಿಗೂ ಸುಮಾರು 20 ವರ್ಷಗಳಿಂದ ಸಚಿವ ಸ್ಥಾನ ಸಿಕ್ಕಿಲ್ಲ. ಸಚಿವ ಸಂಪುಟದಲ್ಲಿ ಪ್ರಾತಿನಿಧ್ಯ ದೊರೆಯದ ಜಿಲ್ಲೆ ಹಾಗೂ ಸಮುದಾಯಗಳಿಗೆ ಅವಕಾಶ ನೀಡಬೇಕು ಎಂಬುದು ನಮ್ಮ ಬೇಡಿಕೆಯಾಗಿದೆ ಎಂದರು.
ಸಚಿವರ ಬದಲಾವಣೆ ಹಾಗೂ ಖಾತೆ ಅದಲು-ಬದಲು ಕುರಿತು ಪ್ರತಿಕ್ರಿಯೆ ನೀಡಿ, ಈ ಬಗ್ಗೆ ನಮಗೆ ಯಾವುದೇ ಮಾಹಿತಿ ಇಲ್ಲ. ಅಲ್ಲಿ ಹೋದ ಬಳಿಕವಷ್ಟೇ ಗೊತ್ತಾಗಲಿದೆ. ಸಚಿವ ಸ್ಥಾನ ಬದಲಾವಣೆ ಮಾಡುವುದು ಮುಖ್ಯಮಂತ್ರಿ ಮಟ್ಟದಲ್ಲಿ ನಿರ್ಧಾರವಾಗುವ ವಿಚಾರ. ಸಚಿವ ಸಂಪುಟದಲ್ಲಿ ಪ್ರಾತಿನಿಧ್ಯ ಸಿಗದ ಜಿಲ್ಲೆಗಳಿಗೆ ಹಾಗೂ ಸಮುದಾಯಗಳಿಗೆ ಅವಕಾಶ ಕಲ್ಪಿಸುವ ಮೂಲಕ ಅನ್ಯಾಯ ಸರಿಪಡಿಸಬೇಕು ಎಂದು ನಾವು ಮುಖ್ಯಮಂತ್ರಿ ಹಾಗೂ ಹೈಕಮಾಂಡ್​ಗೆ ಮನವಿ ಮಾಡಿದ್ದೇವೆ. ಯಾರಿಗೆ ಸಚಿವ ಸ್ಥಾನ ದೊರೆತಿಲ್ಲವೋ ಅವರಿಗೆ ಅವಕಾಶ ನೀಡಬೇಕು ಎಂಬುದು ನಮ್ಮ ಒತ್ತಾಯ ಎಂದು ಹೇಳಿದರು.
===
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net