ಪೌರ ಕಾರ್ಮಿಕ ಕುಟುಂಬಕ್ಕೂ ವಿಮೆ ವಿಸ್ತರಣೆ

ಗಂಗಾವತಿ ನಗರಸಭೆ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಆರೋಗ್ಯ ತಪಾಸಣೆ ಉಚಿತ ಶಿಬಿರ ಮತ್ತು ವಿಮೆ ಕಾರ್ಡ್ ವಿತರಣೆ ಕಾರ್ಯಕ್ರಮದಲ್ಲಿ ಕಾರ್ಮಿಕರಿಗೆ ವಿಮೆ ಕಾರ್ಡ್ ಗುರುವಾರ ವಿತರಿಸಲಾಯಿತು. ನಿಗಮದ ಅಧ್ಯಕ್ಷ ಮುರಳಿ ಅಶೋಕ ಸಾಲಪ್ಪ, ವ್ಯವಸ್ಥಾಪಕ ನಿರ್ದೇಶಕ ಟಿ.ಕುಮಾರ, ಪೌರಾಯುಕ್ತ ಆರ್.ವಿರೂಪಾಕ್ಷಮೂರ್ತಿ ಇತರರಿದ್ದರು.
ಗಂಗಾವತಿ ನಗರಸಭೆ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಆರೋಗ್ಯ ತಪಾಸಣೆ ಉಚಿತ ಶಿಬಿರ ಮತ್ತು ವಿಮೆ ಕಾರ್ಡ್ ವಿತರಣೆ ಕಾರ್ಯಕ್ರಮದಲ್ಲಿ ಕಾರ್ಮಿಕರಿಗೆ ವಿಮೆ ಕಾರ್ಡ್ ಗುರುವಾರ ವಿತರಿಸಲಾಯಿತು. ನಿಗಮದ ಅಧ್ಯಕ್ಷ ಮುರಳಿ ಅಶೋಕ ಸಾಲಪ್ಪ, ವ್ಯವಸ್ಥಾಪಕ ನಿರ್ದೇಶಕ ಟಿ.ಕುಮಾರ, ಪೌರಾಯುಕ್ತ ಆರ್.ವಿರೂಪಾಕ್ಷಮೂರ್ತಿ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ನಿಗಮದ ಅಧ್ಯಕ್ಷ ಮುರಳಿ ಅಶೋಕ ಸಾಲಪ್ಪ ಹೇಳಿಕೆ
  • ಮುಂದಿನ ಬಜೆಟ್‌ನಲ್ಲಿ ಅನುಷ್ಠಾನಕ್ಕೆ ಕ್ರಮ
ಗಂಗಾವತಿ: ಪೌರ ಕಾರ್ಮಿಕರಿಗೆ ಸೀಮಿತವಾಗಿರುವ ವಿಮೆ ಯೋಜನೆಯನ್ನು ಅವರ ಕುಟುಂಬಕ್ಕೂ ವಿಸ್ತರಿಸುವ ಪ್ರಸ್ತಾವನೆಯಿದ್ದು, ಮುಂದಿನ ಬಜೆಟ್‌ನಲ್ಲಿ ಅನುಷ್ಠಾನಗೊಳಿಸಲಾಗುವುದು ಎಂದು ರಾಜ್ಯ ಸಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುರಳಿ ಅಶೋಕ ಸಾಲಪ್ಪ ಹೇಳಿದರು.
ನಗರಸಭೆ ಸಭಾಂಗಣದಲ್ಲಿ ರಾಜ್ಯ ಸಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ ಮತ್ತು ನಗರಸಭೆಯಿಂದ ನೇರ ಪಾವತಿ ಪೌರ ಕಾರ್ಮಿಕರಿಗೆ ಗುರುವಾರ ಹಮ್ಮಿಕೊಂಡಿದ್ದ ಆರೋಗ್ಯ ತಪಾಸಣೆ ಉಚಿತ ಶಿಬಿರ ಮತ್ತು ವಿಮೆ ಕಾರ್ಡ್ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ರಾಜ್ಯ ಸರ್ಕಾರ 25ಸಾವಿರ ಹೊರಗುತ್ತಿಗೆ ಕಾರ್ಮಿಕರ ಪೈಕಿ 18ಸಾವಿರ ಕಾರ್ಮಿಕರನ್ನು ಕಾಯಂಗೊಳಿಸಿದೆ. ಪೌರ ಕಾರ್ಮಿಕರ ಹಕ್ಕುಗಳು ಮತ್ತು ಸೌಲಭ್ಯಗಳನ್ನು ಸಕಾಲಕ್ಕೆ ಒದಗಿಸಲಾಗುತ್ತಿದ್ದು, ಅನುದಾನದ ಕೊರತೆಯಿಲ್ಲ. ಕಾರ್ಮಿಕರಿಗೆ ವಿತರಿಸುತ್ತಿರುವ ವಿಮೆ ಕಾರ್ಡ್ ಕ್ಯಾಶ್‌ಲೆಸ್ ಸೌಲಭ್ಯವಾಗಿದ್ದು, ಮೂರು ಸಾವಿರ ರೋಗಗಳಿಗೆ 5ಲಕ್ಷ ರೂ.ವರೆಗೂ ಕ್ಲೈಮ್ ಮಾಡಿಕೊಳ್ಳುವ ಅವಕಾಶವಿದೆ. ಪೌರ ಕಾರ್ಮಿಕರು ಸುರಕ್ಷತಾ ಕ್ರಮಗಳ ಜತೆಗೆ ಮಕ್ಕಳನ್ನು ಉನ್ನತ ಶಿಕ್ಷಣ ಕೊಡಿಸುವ ನಿಟ್ಟಿನಲ್ಲಿ ಗಮನಹರಿಸುವಂತೆ ಸಲಹೆ ನೀಡಿದರು.
ಪೌರಾಯುಕ್ತ ಆರ್. ವಿರೂಪಾಕ್ಷಮೂರ್ತಿ ಮಾತನಾಡಿ, ನಗರದ ಸ್ವಚ್ಛತೆಯಲ್ಲಿ ಪ್ರಮುಖ ಪಾತ್ರವಹಿಸುವ ಪೌರ ಕಾರ್ಮಿಕರ ಆರೋಗ್ಯದತ್ತಲೂ ಗಮನಹರಿಸಲಾಗುತ್ತಿದೆ. ಚಿಕಿತ್ಸೆ ಮತ್ತು ಅಪಘಾತ ವಿಮೆ ಯೋಜನೆ ರಾಜ್ಯದಲ್ಲಿ ಮೊದಲಾಗಿದ್ದು, ಒಂದು ರೂ. ಖರ್ಚು ಮಾಡದೇ ತಪಾಸಣೆಯಿಂದ ಶಸಚಿಕಿತ್ಸೆವರೆಗೂ ಸೌಲಭ್ಯ ಪಡೆಯಲು ಅವಕಾಶವಿದೆ. ಎಟಿಎಂ ಮಾದರಿಯಲ್ಲಿರುವ ವಿಮೆ ಯೋಜನೆ ತಾಲೂಕಿನ 6 ಪ್ರಮುಖ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಬಹುದಾಗಿದೆ. ಪೌರ ಕಾರ್ಮಿಕರ ಹಕ್ಕುಗಳು ಮತ್ತು ಸೌಲಭ್ಯಗಳನ್ನು ಸಕಾಲಕ್ಕೆ ಒದಗಿಸಲಾಗುತ್ತಿದೆ ಎಂದರು.
ಆರೋಗ್ಯ ವಿಮೆ ಯೋಜನೆ ಕುರಿತು ನಿಗಮದ ವ್ಯವಸ್ಥಾಪಕ ನಿರ್ದೇಶಕ ಟಿ.ಕುಮಾರ ಪ್ರಾಸ್ತಾವಿಕ ಮಾತನಾಡಿದರು. ಜಿಲ್ಲಾ ವ್ಯವಸ್ಥಾಪಕಿ ಪುಷ್ಪಲತಾ, ಸಮುದಾಯ ಸಂಘಟಕರಾದ ವಿಶ್ವನಾಥ, ಟಿ.ಕಿಶೋರ್, ನೈರ್ಮಲ್ಯ ನಿರೀಕ್ಷಕಿ ರಾಧಿಕಾ, ಆರೋಗ್ಯ ನಿರೀಕ್ಷಕ ಎ.ನಾಗರಾಜ್ ಇತರರಿದ್ದರು.
"

ಪೌರ ಕಾರ್ಮಿಕರ ಸುರಕ್ಷತೆ ಮತ್ತು ಆರೋಗ್ಯ ಭದ್ರತೆಗೆ ಪೂರಕವಾದ ಯೋಜನೆಗಳನ್ನು ಈಗಾಗಲೇ ಅನುಷ್ಠಾನಗೊಳಿಸಲಾಗಿದ್ದು, ನೇರಪಾವತಿದಾರರ ವಿಮೆ ಯೋಜನೆ ಜಾರಿಗೊಳಿಸಲಾಗಿದ್ದು, ಇದು ನಗದು ರಹಿತ ವಿಮೆ ಯೋಜನೆಯಾಗಿದೆ.

— ಮುರಳಿ ಅಶೋಕ ಸಾಲಪ್ಪ ಅಧ್ಯಕ್ಷ, ರಾಜ್ಯ ಸಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net