ಅಕ್ರಮ ಚಟುವಟಿಕೆಗಳಿಗೆ ಬೀಳಲಿ ಕಡಿವಾಣ

ಅಕ್ರಮ ಚಟುವಟಿಕೆಗಳನ್ನು ತಡೆಯಲು ಆಗ್ರಹಿಸಿ ಕನಕಗಿರಿಯಲ್ಲಿ ರಾಜ್ಯ ದಲಿತ ಸಂಘರ್ಷ ಸಮಿತಿ ತಾಲೂಕು ಘಟಕದಿಂದ ಸಂಚಾರ ಬಂದ್ ಮಾಡಿ ಪ್ರತಿಭಟನೆ ಮಾಡಲಾಯಿತು. ತಾಲೂಕು ಸಂಚಾಲಕ ಕನಕಪ್ಪ ಮ್ಯಾಗಡೆ, ಜಿಲ್ಲಾ ಪ್ರಧಾನ ಸಂಚಾಲಕ ಮೈಲಪ್ಪ ಮಾದಿನೂರು, ಜಿಲ್ಲಾ ಮಾಧ್ಯಮ ವಕ್ತಾರ ಸಂಜೀವಮೂರ್ತಿ ಇತರರಿದ್ದರು.
ಅಕ್ರಮ ಚಟುವಟಿಕೆಗಳನ್ನು ತಡೆಯಲು ಆಗ್ರಹಿಸಿ ಕನಕಗಿರಿಯಲ್ಲಿ ರಾಜ್ಯ ದಲಿತ ಸಂಘರ್ಷ ಸಮಿತಿ ತಾಲೂಕು ಘಟಕದಿಂದ ಸಂಚಾರ ಬಂದ್ ಮಾಡಿ ಪ್ರತಿಭಟನೆ ಮಾಡಲಾಯಿತು. ತಾಲೂಕು ಸಂಚಾಲಕ ಕನಕಪ್ಪ ಮ್ಯಾಗಡೆ, ಜಿಲ್ಲಾ ಪ್ರಧಾನ ಸಂಚಾಲಕ ಮೈಲಪ್ಪ ಮಾದಿನೂರು, ಜಿಲ್ಲಾ ಮಾಧ್ಯಮ ವಕ್ತಾರ ಸಂಜೀವಮೂರ್ತಿ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ದಲಿತ ಸಂಘರ್ಷ ಸಮಿತಿ ಆಗ್ರಹ
  • ಕನಕಗಿರಿ ಸಂಚಾರ ಬಂದ್ ಪ್ರತಿಭಟನೆ
ಕನಕಗಿರಿ; ತಾಲೂಕಿನಾದ್ಯಂತ ನಡೆಯುತ್ತಿರುವ ಅಕ್ರಮ ಚಟುವಟಿಕೆಗಳನ್ನು ತಡೆಯಲು ಆಗ್ರಹಿಸಿ ಸೋಮವಾರ ಪಟ್ಟಣದ ವಾಲ್ಮೀಕಿ ವೃತ್ತದಲ್ಲಿ ದಲಿತ ಸಂಘರ್ಷ ಸಮಿತಿ ತಾಲೂಕು ಘಟಕದಿಂದ ಕೆಲಹೊತ್ತು ಸಂಚಾರ ಬಂದ್ ಮಾಡಿ ಪ್ರತಿಭಟನೆ ಮಾಡಲಾಯಿತು.
ಸಮಿತಿ ಜಿಲ್ಲಾಧ್ಯಕ್ಷ ನಿಂಗಣ್ಣ ಬೆಣಕಲ್ ಮಾತನಾಡಿ, ಕನಕಗಿರಿ ಹಾಗೂ ಸುತ್ತಲಿನ ಗ್ರಾಮೀಣ ಭಾಗದಲ್ಲಿ ಹಲವು ದಿನಗಳಿಂದ ಅಕ್ರಮ ಚಟುವಟಿಕೆಗಳು ನಡೆಯುತ್ತಿದ್ದರೂ ಸಂಬಂಧಿಸಿದ ಇಲಾಖೆಯವರು ಕಣ್ಮುಚ್ಚಿ ಕುಳಿತಿದ್ದಾರೆ. ತಾಲೂಕಿನ ನವಲಿ, ಯತ್ನಟ್ಟಿ, ಬುನ್ನಟ್ಟಿ, ಕರಡೋಣ, ಈಚನಾಳ, ಕೆ.ಮಲ್ಲಾಪುರ, ಗುಡುದೂರು, ಚಿಕ್ಕಮಾದಿನಾಳ ಸೇರಿ ಹಲವು ಕಡೆಗಳಲ್ಲಿ ನಿತ್ಯ ಅಕ್ರಮ ಮರಳು ಹಾಗೂ ಸರ್ಕಾರಿ ಜಮೀನುಗಳಲ್ಲಿ ಮರಂ ಅಗೆದು ಹಲವು ಕಡೆಗಳಿಗೆ ಸಾಗಣೆ ಮಾಡಲಾಗುತ್ತಿದೆ. ಇದರಿಂದ ಪರಿಸರದ ಜತೆಗೆ ರಾಜ್ಯ ಸರ್ಕಾರದ ಬೊಕ್ಕಸಕ್ಕೆ ನಷ್ಟವಾಗುತ್ತಿದ್ದರೂ ಸಹ ಅಧಿಕಾರಿ ವರ್ಗ ಮಾತ್ರ ಕ್ರಮವಹಿಸಿಲ್ಲ. ಈ ಬಗ್ಗೆ ಹಲವು ಬಾರಿ ದೂರು ಸಲ್ಲಿಕೆ ಮಾಡಿದ್ದರೂ ಸಹ ಕ್ರಮವಾಗಿಲ್ಲ. ಇನ್ನು ಪಟ್ಟಣ ಸೇರಿ ಗ್ರಾಮೀಣ ಭಾಗದಲ್ಲಿ ಕಿರಾಣಿ ಅಂಗಡಿ, ಪಾನ್‌ಶಾಪ್‌ಗಳಲ್ಲಿ ಮದ್ಯ ಅಕ್ರಮ ಮಾರಾಟ ಮಾಡಲಾಗುತ್ತಿದ್ದು, ಇದರಿಂದ ಮಕ್ಕಳು, ಯುವಕರು ಕುಡಿತಕ್ಕೆ ಬಲಿಯಾಗುತ್ತಿದ್ದು, ಕುಟುಂಬಗಳು ಬೀದಿಗೆ ಬಿದ್ದಿವೆ. ಶಾಲಾ-ಕಾಲೇಜು, ದೇವಸ್ಥಾನಗಳ ಪಕ್ಕದಲ್ಲಿಯೇ ಅಕ್ರಮ ಮದ್ಯದಂಗಡಿಗಳು ಇದ್ದು, ಸಮಾಜದಲ್ಲಿ ಅಶಾಂತಿ ನಿರ್ಮಾಣವಾದರೂ ಇದುವರೆಗೂ ಕ್ರಮವಾಗಿಲ್ಲ ಎಂದು ದೂರಿದರು.
ಸ್ಪೀಟ್ ಹಾಗೂ ಮಟ್ಕಾ ದಂಧೆಯಂತೂ ರಾಜಾರೋಷವಾಗಿ ನಡೆಯುತ್ತಿದ್ದು, ಸಾಲ ಮಾಡಿ ಊರು ತೊರೆಯುವ ಉದಾಹರಣೆಗಳು ಸಾಕಷ್ಟಿದ್ದು, ತಾಲೂಕಿನಾದ್ಯಂತ ನಡೆಯುತ್ತಿರುವ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ತಾಲೂಕಾಡಳಿತ ಮುಂದಾಗಬೇಕಿದೆ ಎಂದು ಆಗ್ರಹಿಸಿದರು. ನೂತನ ತಹಸೀಲ್ದಾರ್ ಚಂದ್ರಶೇಖರ ಗಾಳಿಗೆ ಮನವಿ ಸಲ್ಲಿಸಿದರು.
ತಾಲೂಕು ಸಂಚಾಲಕ ಕನಕಪ್ಪ ಮ್ಯಾಗಡೆ, ಜಿಲ್ಲಾ ಪ್ರಧಾನ ಸಂಚಾಲಕ ಮೈಲಪ್ಪ ಮಾದಿನೂರು, ಜಿಲ್ಲಾ ಮಾಧ್ಯಮ ವಕ್ತಾರ ಸಂಜೀವಮೂರ್ತಿ, ಜಿಲ್ಲಾ ಸಂಘಟನಾ ಸಂಚಾಲಕ ಕನಕಪ್ಪ, ಕೊಪ್ಪಳ ತಾಲೂಕು ಅಧ್ಯಕ್ಷ ಭರಮಪ್ಪ ತಿಗರಿ, ಶಿವಗಂಗಮ್ಮ ಕವಲೂರು, ದುರಗಮ್ಮ ಬೆಟಗೇರಿ, ಕನಕರಾಯ ಕಡೆಮನಿ, ನಿಂಗಪ್ಪ ಕಾಮನೂರು ಸೇರಿ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net