ತಂತ್ರಜ್ಞಾನದ ಯುಗದಲ್ಲಿ ಸಂಶೋಧನೆ ವೈಜ್ಞಾನಿಕವಾಗಿರಲಿ

ಕೊಪ್ಪಳ ಸರ್ಕಾರಿ ಪದವಿ ಕಾಲೇಜಿನಲ್ಲಿ ಆಯೋಜಿಸಿದ್ದ ಮೂರು ದಿನಗಳ ರಾಜ್ಯ ಮಟ್ಟದ ಅಧ್ಯಾಪಕರ ಅಭಿವೃದ್ಧಿ ಕಾರ್ಯಕ್ರಮವನ್ನು ಕೊಪ್ಪಳ ವಿವಿ ಕುಲಪತಿ ಡಾ. ಎಸ್​. ವಿ. ಡಾಣಿ ಉದ್ಘಾಟಿಸಿದರು. ವಿವಿ ಮೌಲ್ಯಮಾಪನ ಕುಲಸಚಿವ ಡಾ.ರಮೇಶ್​ ಕೆ, ಕಾಲೇಜಿನ ಪ್ರಾಚಾರ್ಯ ಡಾ. ವೈ. ಬಿ. ಅಂಗಡಿ, ಡಾ. ಮಲ್ಲಿಕಾರ್ಜುನ ಆನಂದಹಳ್ಳಿ, ಸುಧಾ ಹೆಗಡೆ ಇದ್ದರು.
ಕೊಪ್ಪಳ ಸರ್ಕಾರಿ ಪದವಿ ಕಾಲೇಜಿನಲ್ಲಿ ಆಯೋಜಿಸಿದ್ದ ಮೂರು ದಿನಗಳ ರಾಜ್ಯ ಮಟ್ಟದ ಅಧ್ಯಾಪಕರ ಅಭಿವೃದ್ಧಿ ಕಾರ್ಯಕ್ರಮವನ್ನು ಕೊಪ್ಪಳ ವಿವಿ ಕುಲಪತಿ ಡಾ. ಎಸ್​. ವಿ. ಡಾಣಿ ಉದ್ಘಾಟಿಸಿದರು. ವಿವಿ ಮೌಲ್ಯಮಾಪನ ಕುಲಸಚಿವ ಡಾ.ರಮೇಶ್​ ಕೆ, ಕಾಲೇಜಿನ ಪ್ರಾಚಾರ್ಯ ಡಾ. ವೈ. ಬಿ. ಅಂಗಡಿ, ಡಾ. ಮಲ್ಲಿಕಾರ್ಜುನ ಆನಂದಹಳ್ಳಿ, ಸುಧಾ ಹೆಗಡೆ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಡಾ. ಎಸ್​. ವಿ. ಡಾಣಿ ಹೇಳಿಕೆ
  • ರಾಜ್ಯ ಮಟ್ಟದ ಅಧ್ಯಾಪಕರ ಅಭಿವೃದ್ಧಿ ಕಾರ್ಯಕ್ರಮ
ಕೊಪ್ಪಳ : ಸ್ಪರ್ಧಾತ್ಮಕ ಮತ್ತು ತಂತ್ರಜ್ಞಾನ ಆಧಾರಿತ ಯುಗದಲ್ಲಿ ಸಂಶೋಧನೆ ಕೇವಲ ಪದವಿ ಪಡೆಯುವ ಪ್ರಕ್ರಿಯೆಯಾಗದೆ, ಸಮಾಜದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಜವಾಬ್ದಾರಿಯುತ ಕಾರ್ಯವಾಗಬೇಕು ಎಂದು ಕೊಪ್ಪಳ ವಿವಿ ಕುಲಪತಿ ಡಾ. ಎಸ್​. ವಿ. ಡಾಣಿ ಅಭಿಪ್ರಾಯಪಟ್ಟರು.
ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗುರುವಾರ ಸುಧಾರಿತ ಸಂಶೋಧನಾ ಪರಿಕರಗಳ ಕುರಿತು ಆಯೋಜಿಸಿದ್ದ ಮೂರು ದಿನಗಳ ರಾಜ್ಯ ಮಟ್ಟದ ಅಧ್ಯಾಪಕರ ಅಭಿವೃದ್ಧಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಸಂಶೋಧನೆ ಎಂದರೆ ಸತ್ಯವನ್ನು ಅನ್ವೇಷಿಸುವುದು ಮತ್ತು ಹೊಸ ಜ್ಞಾನವನ್ನು ಸಮಾಜಕ್ಕೆ ಪರಿಚಯಿಸುತ್ತದೆ. ಉತ್ತಮ ಸಂಶೋಧನೆ ಮಾನವ ಕುಲದ ಅಭಿವೃದ್ಧಿಗೆ ಪೂರಕವಾಗುತ್ತದೆ. ಆಧುನಿಕ ತಂತ್ರಜ್ಞಾನ ಬಳಸಿ ಪರಿಣಾಮಕಾರಿಯಾಗಿ ಸಂಶೋಧನೆ ನಡೆಸಬೇಕು. ಪ್ರತಿಯೊಬ್ಬರೂ ಸಂಶೋಧನೆಯ ಮೂಲಕ ಸಮಾಜಕ್ಕೆ ವಿಶಿಷ್ಟ ಕೊಡುಗೆ ನೀಡಬೇಕು ಎಂದರು.
ಕಲಬುರಗಿ ಕರ್ನಾಟಕ ಕೇಂದ್ರೀಯ ವಿವಿ ಎಲೆಕ್ಟ್ರಾನಿಕ್ಸ್​ ಮತ್ತು ಸಂವಹನ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಮಲ್ಲಿಕಾರ್ಜುನ ಆನಂದಹಳ್ಳಿ ಮಾತನಾಡಿ, ಇಂದಿನ ಜಗತ್ತಿನಲ್ಲಿ ದತ್ತಾಂಶವೇ ಸಂಪತ್ತು. ಕೃತಕ ಬುದ್ಧಿಮತ್ತೆ ದತ್ತಾಂಶದ ಆಧಾರದ ಮೇಲೆಯೇ ಕಾರ್ಯನಿರ್ವಹಿಸುತ್ತಿದ್ದು, ಸಂಶೋಧಕರು ದತ್ತಾಂಶದ ಮಹತ್ವವನ್ನು ಅರಿತು ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.
ಕಾಲೇಜಿನ ಪ್ರಾಚಾರ್ಯ ಡಾ. ವೈ. ಬಿ. ಅಂಗಡಿ ಮಾತನಾಡಿ, ಶಿಕ್ಷಣ ಮತ್ತು ಸಂಶೋಧನೆ ಎರಡು ಜೋಡೆತ್ತುಗಳಿದ್ದಂತೆ. ಸಂಶೋಧನೆಯಲ್ಲಿ ಜ್ಞಾನ, ವಿಶ್ಲೇಷಣೆ ಹಾಗೂ ದತ್ತಾಂಶ ಬಹಳ ಮುಖ್ಯವಾಗಿವೆ. ಸಂಶೋಧನೆಯ ಮೂಲಕ ಶಿಕ್ಷಣ ಪದ್ಧತಿಯಲ್ಲಿ ಗುಣಾತ್ಮಕ ಬದಲಾವಣೆ ತರಬೇಕು. ಪ್ರಾಧ್ಯಾಪಕರು ನಿರಂತರ ಕಲಿಕೆಯಲ್ಲಿ ತೊಡಗಿಸಿಕೊಂಡು ಕಾಲಕ್ಕೆ ತಕ್ಕಂತೆ ತಮ್ಮ ಜ್ಞಾನವನ್ನು ನವೀಕರಿಸಿಕೊಳ್ಳಬೇಕು ಎಂದು ಹೇಳಿದರು.
ಕೊಪ್ಪಳ ವಿವಿ ಮೌಲ್ಯಮಾಪನ ಕುಲಸಚಿವ ಡಾ.ರಮೇಶ್​ ಕೆ, ಪಿಎಮ್​&ಉಷಾ ಪ್ರಾಯೋಜಿಕತ್ವದ ಸಂಚಾಲಕಿ ಸುಧಾ ಹೆಗಡೆ, ಕಾಲೇಜಿನ ಐಕ್ಯೂಎಸಿ ಸಂಯೋಜಕ ಪ್ರಕಾಶ್​ ಗೌಡ, ಅರ್ಥಶಾಸ್ತ್ರ ವಿಭಾಗ ಮುಖ್ಯಸ್ಥೆ ಸಂತೋಷಿಕುಮಾರಿ, ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net