ದಿಟ್ಟ ನಿರ್ಧಾರದಿಂದ ಹೈಕ ಭಾಗಕ್ಕೆ ಸ್ವಾತಂತ್ರೃ

ಗಂಗಾವತಿ ತಾಲೂಕಾಡಳಿತ ಸೌಧದ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಏಕತಾ ದಿವಸ್ ಕಾರ್ಯಕ್ರಮದಲ್ಲಿ ಶಿರಸ್ತೇದಾರ್ ರವಿಕುಮಾರ ನಾಯಕ್ವಾಡಿ ಪ್ರತಿಜ್ಞಾವಿಧಿ ಬೋಧಿಸಿದರು.
ಗಂಗಾವತಿ ತಾಲೂಕಾಡಳಿತ ಸೌಧದ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಏಕತಾ ದಿವಸ್ ಕಾರ್ಯಕ್ರಮದಲ್ಲಿ ಶಿರಸ್ತೇದಾರ್ ರವಿಕುಮಾರ ನಾಯಕ್ವಾಡಿ ಪ್ರತಿಜ್ಞಾವಿಧಿ ಬೋಧಿಸಿದರು.
Published on

ಪ್ರಮುಖ ಮುಖ್ಯಾಂಶಗಳು

  • ಉಕ್ಕಿನ ಮನುಷ್ಯ ಎಂದೇ ಪ್ರಸಿದ್ಧಿಯಾದ ಸರ್ದಾರ್ ವಲ್ಲಭಬಾಯಿ ಪಟೇಲ್
  • ಶಿರಸ್ತೇದಾರ್ ರವಿಕುಮಾರ ನಾಯಕ್ವಾಡಿ ಹೇಳಿಕೆ
ಗಂಗಾವತಿ: ಉಕ್ಕಿನ ಮನುಷ್ಯ ಎಂದೇ ಪ್ರಸಿದ್ಧಿಯಾದ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ದಿಟ್ಟ ನಿರ್ಧಾರದಿಂದ ಹೈದರಾಬಾದ್ ಕರ್ನಾಟಕ ನಿಜಾಮರಿಂದ ಸ್ವಾತಂತ್ರ್ಯ ಪಡೆಯಿತು ಎಂದು ಶಿರಸ್ತೇದಾರ್ ರವಿಕುಮಾರ ನಾಯಕ್ವಾಡಿ ಹೇಳಿದರು.
ನಗರದ ತಾಲೂಕಾಡಳಿತ ಸೌಧದ ಕಚೇರಿಯಲ್ಲಿ ದೇಶದ ಮೊದಲ ಗೃಹ ಸಚಿವ ಸರ್ದಾರ್ ವಲ್ಲಭಭಾಯಿ ಜನ್ಮದಿನದ ನಿಮಿತ್ತ ಶುಕ್ರವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಏಕತಾ ದಿವಸ್ ಕಾರ್ಯಕ್ರಮದಲ್ಲಿ ಮಾತನಾಡಿದರು. ನಂತರ ಪ್ರತಿಜ್ಞಾವಿಧಿ ಬೋಧಿಸಲಾಯಿತು. ಶಿರಸ್ತೇದಾರರಾದ ಶ್ರೀಕಂಠೇಶ, ಮಹ್ಮದ್ ರಫಿ, ಅನ್ನಪೂರ್ಣಾ, ಹಾಲೇಶ, ಕವಿತಾ, ನಾಗರತ್ನಮ್ಮ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net