ಪದವಿ ಪರೀಕ್ಷಾ ಕಾರ್ಯ ಹಾಗೂ ಮೌಲ್ಯವಾಪನ ಕಾರ್ಯ ಬಹಿಷ್ಕರಿಸಿ ಜಿಲ್ಲಾ ಅತಿಥಿ ಉಪನ್ಯಾಸಕರ ಸಂದಿಂದ ಕಾಲೇಜು ಪ್ರಾಚಾರ್ಯ ಡಾ. ವೈ. ಬಿ. ಅಂಗಡಿ ಮೂಲಕ ಕುಲಪತಿಗೆ ಮನವಿ ಸಲ್ಲಿಸಲಾಯಿತು.ಸಂಘದ ಜಿಲ್ಲಾಧ್ಯಕ್ಷ ಡಾ.ವೀರಣ್ಣ ಸಜ್ಜನರ್, ಅತಿಥಿ ಉಪನ್ಯಾಸಕರಾದ ಡಾ.ಪ್ರಕಾಶ ಬಳ್ಳಾರಿ, ಡಾ.ತುಕಾರಾಂ ನಾಯ್ಕ, ಡಾ.ಸಣ್ಣದೇವೇಂದ್ರಸ್ವಾಮಿ, ಡಾ.ಶಿವಬಸಪ್ಪ ಮಸ್ಕಿ, ಜ್ಞಾನೇಶ್ವರ ಪತ್ತಾರ, ಡಾ.ಪ್ರಕಾಶ ಜಡಿಯವರ್, ಡಾ.ವಿಜಯಕುವಾರ್ ಕೆಂಚಪ್ಪನವರ್, ಡಾ.ಗಿರಿಜಾ ತುರುಮುರಿ, ಡಾ.ವಿಪ್ಲವಿ ಇತರರಿದ್ದರು.
ಕೊಪ್ಪಳ: ಹತ್ತು ತಿಂಗಳ ಮುಂಚೆಯೇ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರನ್ನು ಸೇವೆಯಿಂದ ಬಿಡುಗಡೆಗೊಳಿಸಿರುವ ಕ್ರಮ ಖಂಡಿಸಿ, ಜೂನ್‌ನಲ್ಲಿ ನಡೆಯಲಿರುವ ಪದವಿ ಪರೀಕ್ಷಾ ಕಾರ್ಯ ಹಾಗೂ ಮೌಲ್ಯವಾಪನ ಕಾರ್ಯ ಬಹಿಷ್ಕರಿಸಿ ಜಿಲ್ಲಾ ಅತಿಥಿ ಉಪನ್ಯಾಸಕರ ಸಂದಿಂದ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯರ ಮೂಲಕ ಆಯುಕ್ತರಿಗೆ, ಕುಲಪತಿಗಳಿಗೆ ಮನವಿ ಸಲ್ಲಿಸಲಾಯಿತು.
ಕೊಪ್ಪಳ ವಿಶ್ವವಿದ್ಯಾಲಯ ಅತಿಥಿ ಉಪನ್ಯಾಸಕರನ್ನು ಪಾಠಪ್ರವಚನಗಳಿಗೆ ಹೊರತುಪಡಿಸಿ ಬೇರೆ ಕಾರ್ಯಗಳಿಗೆ ಬಳಸಬಾರದು. ಅತಿಥಿ ಉಪನ್ಯಾಸಕರ ನ್ಯಾಯಯುತ ಬೇಡಿಕೆಗಳ ಬಗ್ಗೆ ಅಸಡ್ಡೆ ತೋರಲಾಗುತ್ತಿದೆ. ಹಲವು ವರ್ಷಗಳಿಂದ ವಿವಿಧ ವಿಷಯಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಕೆಲಸ ಮಾಡುತ್ತಿದ್ದಾರೆ. ಅವರನ್ನು ಕರ್ತವ್ಯದಿಂದ ಬಿಡುಗಡೆ ವಾಡಲಾಗಿದೆ.
ಕೊಪ್ಪಳ ವಿಶ್ವವಿದ್ಯಾಲಯವು ಪರೀಕ್ಷಾ ಕಾರ್ಯದಂಥ ಗಂಭೀರ ವಿಷಯಗಳಲ್ಲಿ ಅತಿಥಿ ಉಪನ್ಯಾಸಕರನ್ನು ನಿರ್ಲಕ್ಷಿಸಿರುವುದು ಸ್ಪಷ್ಟವಾಗಿ ಕಾಣುತ್ತದೆ. ವಿಶ್ವವಿದ್ಯಾಲಯದ ವ್ಯಾಪ್ತಿಯ ಎಲ್ಲ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರು 2025-26ನೇ ಸಾಲಿನ ಪರೀಕ್ಷಾ ಕಾರ್ಯ ಮತ್ತು ಮೌಲ್ಯವಾಪನ ಕಾರ್ಯವನ್ನು ಬಹಿಷ್ಕರಿಸಲಾಗಿದೆ ಎಂದು ಪ್ರಾಚಾರ್ಯರ ಡಾ. ವೈ. ಬಿ. ಅಂಗಡಿ ಅವರಿಗೆ ಮನವಿ ಸಲ್ಲಿಸಿದರು.