ಮಕ್ಕಳಲ್ಲಿ ಉತ್ತಮ ಸಂಸ್ಕಾರ ಬೆಳೆಸಿ

ಅಳವಂಡಿ ಸಮೀಪದ ಘಟ್ಟಿರಡ್ಡಿಹಾಳ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಮಕ್ಕಳ ಹಬ್ಬ, ಸಾಂಸ್ಕೃತಿಕ ಕಾರ್ಯಕ್ರಮ, ಪ್ರತಿಭಾ ಪುರಸ್ಕಾರ ಸಮ್ಮೇಳನವನ್ನು ಗಿಡಕ್ಕೆ ನೀರೆರೆದು ಉದ್ಘಾಟಿಸಲಾಯಿತು. ಸಾಹಿತಿ ನೀಲಪ್ಪ ಹಕ್ಕಂಡಿ, ಎಸ್‌ಡಿಎಂಸಿ ಅಧ್ಯಕ್ಷೆ ಶಕುಂತಲಾ ಡಂಬಳ, ಮಾಜಿ ತಾಪಂ ಸದಸ್ಯ ಶರಣಪ್ಪಗೌಡರ ಇತರರಿದ್ದರು.
ಅಳವಂಡಿ ಸಮೀಪದ ಘಟ್ಟಿರಡ್ಡಿಹಾಳ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಮಕ್ಕಳ ಹಬ್ಬ, ಸಾಂಸ್ಕೃತಿಕ ಕಾರ್ಯಕ್ರಮ, ಪ್ರತಿಭಾ ಪುರಸ್ಕಾರ ಸಮ್ಮೇಳನವನ್ನು ಗಿಡಕ್ಕೆ ನೀರೆರೆದು ಉದ್ಘಾಟಿಸಲಾಯಿತು. ಸಾಹಿತಿ ನೀಲಪ್ಪ ಹಕ್ಕಂಡಿ, ಎಸ್‌ಡಿಎಂಸಿ ಅಧ್ಯಕ್ಷೆ ಶಕುಂತಲಾ ಡಂಬಳ, ಮಾಜಿ ತಾಪಂ ಸದಸ್ಯ ಶರಣಪ್ಪಗೌಡರ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಪ್ರಾಥಮಿಕ
  • ಶಾಲೆಯಲ್ಲಿ
  • ಆಯೋಜಿಸಿದ್ದ
ಅಳವಂಡಿ: ಪಾಲಕರು ಮಕ್ಕಳ ಶಿಕ್ಷಣದ ಬಗ್ಗೆ ಚಿಂತಿಸಬೇಕು. ಪ್ರಾಥಮಿಕ ಹಂತದ ಶಿಕ್ಷಣ ಗಟ್ಟಿಯಾಗಿದ್ದರೆ ಮಾತ್ರ ಮುಂದಿನ ವಿದ್ಯಾರ್ಥಿ ಜೀವನ ಯಶಸ್ವಿಯಾಗಲಿದೆ ಎಂದು ಗಂಗಾವತಿ ಶಾರದಾ ಎಜುಕೇಷನ್ ಸೊಸೈಟಿ ಅಧ್ಯಕ್ಷ ಎಸ್. ಪ್ರಸಾದ ತಿಳಿಸಿದರು.
ಸಮೀಪದ ಘಟ್ಟಿರಡ್ಡಿಹಾಳ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ಮಕ್ಕಳ ಹಬ್ಬ, ಸಾಂಸ್ಕೃತಿಕ ಕಾರ್ಯಕ್ರಮ, ಪ್ರತಿಭಾ ಪುರಸ್ಕಾರ ಸಮ್ಮೇಳನಕ್ಕೆ ಚಾಲನೆ ನೀಡಿ ಸೋಮವಾರ ಮಾತನಾಡಿದರು.
ಮಕ್ಕಳು ಪಾಲಕರು, ಗುರುಗಳಿಗೆ ಗೌರವ ಕೊಟ್ಟಾಗ ಮಾತ್ರ ಒಳ್ಳೆಯ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯ. ಮಕ್ಕಳು ಶಿಸ್ತು, ಸಂಯಮ, ಸಂಸ್ಕಾರ ಬೆಳೆಸಿಕೊಳ್ಳಬೇಕು. ಇತ್ತೀಚಿಗೆ ಹಿರಿಯರನ್ನು ಗೌರವಿಸುವ ಗುಣ ಮಕ್ಕಳಲ್ಲಿ ಕಡಿಮೆಯಾಗುತ್ತಿದ್ದು ಇದು ಒಳ್ಳೆಯ ಲಕ್ಷಣವಲ್ಲ. ಉತ್ತಮ ಸಂಸ್ಕಾರ ಬೆಳೆಸಿಕೊಂಡಲ್ಲಿ ಸಮಾಜ ನಿಮ್ಮನ್ನು ಗುರುತಿಸುತ್ತದೆ. ಇತ್ತೀಚಿನ ವರ್ಷಗಳಲ್ಲಿ ಮೊಬೈಲ್ ಬಂದು ಮಕ್ಕಳು ದಾರಿ ತಪ್ಪುತ್ತಿದ್ದಾರೆ. ಈ ಬಗ್ಗೆ ಪಾಲಕರು ನಿಗಾ ವಹಿಸಬೇಕು ಎಂದರು.
ಶಿಕ್ಷಣ ಪ್ರೇಮಿ ಅಂದಾನಗೌಡ ಪೊಲೀಸ ಪಾಟೀಲ ಮಾತನಾಡಿ, ವಿದ್ಯಾರ್ಥಿಗಳು ಶೈಕ್ಷಣಿಕ ಗುರಿಯೊಂದಿಗೆ ಸಾಧನೆಯತ್ತ ಮುನ್ನುಗ್ಗಬೇಕು. ಪಾಲಕರು ಮಕ್ಕಳಿಗೆ ಶಿಸ್ತು ಕಲಿಸಬೇಕು. ಗುಣಮಟ್ಟದ ಶಿಕ್ಷಣದಿಂದ ನಮ್ಮ ಗುರಿ ಸಾಧಿಸಬಹುದು ಎಂದರು.
ಪ್ರಮುಖರಾದ ನೀಲಪ್ಪ, ಎಸ್. ಪ್ರಸಾದ, ಅಂದಾನಗೌಡ, ಯಂಕಪ್ಪ, ಅಶೋಕಬಾಬು, ರಣದಪ್ಪ, ಕೊಟ್ರಪ್ಪ ಮುಂಡರಗಿ, ಶೇಖಪ್ಪ, ಹನುಮರಡ್ಡಿ, ಶಿವಲಿಂಗಪ್ಪ, ನಿಲಕಂಠಪ್ಪ, ಮೌನೇಶ, ನಾಗರಾಜ, ಕೃಷ್ಣ, ಹನುಮಂತ, ವಿಶಾಲಾಕ್ಷಿ, ಮಹೇಶ, ಪುಷ್ಪಾ ಸಂಗರಡ್ಡಿ, ಕೆಂಚವ್ವ, ಶಕುಂತಲಾ, ಜುನಾಬಿ, ಮುಖ್ಯ ಶಿಕ್ಷಕ ಮಹ್ಮದರಫಿ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net