ಗ್ಯಾರಂಟಿ ಉತ್ಸವಕ್ಕೆ ಫಲಾನುಭವಿಗಳನ್ನುಕರೆತನ್ನಿ

ಕೊಪ್ಪಳ ತಾಪಂ ಸಭಾಂಗಣದಲ್ಲಿ ಗುರುವಾರ  ಜರುಗಿದ ತಾಲೂಕು ಮಟ್ಟದ ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾ  ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ರೆಡ್ಡಿ ಶ್ರೀನಿವಾಸ ಮಾತನಾಡಿದರು. ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಬಾಲಚಂದ್ರನ್​ ಎಸ್​, ತಾಪಂ ಇಓ ದುಂಡಪ್ಪ ತುರಾದಿ, ಅನುಷ್ಠಾನ ಸಮಿತಿ ಸದಸ್ಯರಾದ ಜ್ಯೋತಿ ಗೊಂಡಬಾಳ, ರಮೇಶ ಹ್ಯಾಟಿ, ಪರಶುರಾಮ ಕೊರವರ, ರಾಮಣ್ಣ ಚೌಡ್ಕಿ, ಸವಿತಾ ಗೊರಂಟಿ ಇದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ರೆಡ್ಡಿ ಶ್ರೀನಿವಾಸ ಸೂಚನೆ
  • ತಾಲೂಕು ಗ್ಯಾರಂಟಿ ಪ್ರಗತಿ ಪರಿಶೀಲನಾ ಸಭೆ
ಕೊಪ್ಪಳ : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳ ಕುರಿತು ಜನಜಾಗೃತಿ ಮೂಡಿಸಲು ಇದೇ ಫೆ. 17ರಂದು ಹಮ್ಮಿಕೊಳ್ಳಲಾಗಿರುವ ಗ್ಯಾರಂಟಿ ಉತ್ಸವ ಹಾಗೂ ಕಾರ್ಯಾಗಾರಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಫಲಾನುಭವಿಗಳನ್ನು ಕರೆತರುವಂತೆ ಪಂಚ ಗ್ಯಾರಂಟಿ ಯೋಜನೆಗಳ ಜಿಲ್ಲಾ ಮಟ್ಟದ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ರೆಡ್ಡಿ ಶ್ರೀನಿವಾಸ ಸೂಚಿಸಿದರು.
ನಗರದ ತಾಪಂ ಸಭಾಂಗಣದಲ್ಲಿ ಗುರುವಾರ ಜರುಗಿದ ತಾಲೂಕು ಮಟ್ಟದ ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.
ಗ್ಯಾರಂಟಿ ಉತ್ಸವದ ದಿನದಂದು ಐದು ಅನುಷ್ಠಾನ ಇಲಾಖೆಗಳ ಅಧಿಕಾರಿಗಳು ಯೋಜನೆಗಳ ಸಂಪೂರ್ಣ ಮಾಹಿತಿಯುಳ್ಳ ಮಳಿಗೆಗಳನ್ನು ಅಚ್ಚುಕಟ್ಟಾಗಿ ಸಿದ್ಧಪಡಿಸಬೇಕು. ಮಳಿಗೆಗಳಿಗೆ ಭೇಟಿ ನೀಡುವ ಸಾರ್ವಜನಿಕರಿಗೆ ಯೋಜನೆಗಳ ಬಗ್ಗೆ ವಿವರವಾಗಿ ಮಾಹಿತಿ ನೀಡಲು ದಕ್ಷ ಸಿಬ್ಬಂದಿಗಳನ್ನು ನಿಯೋಜಿಸಬೇಕು. ನಗರಸಭೆ ಹಾಗೂ ಭಾಗ್ಯನಗರ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಫಲಾನುಭವಿಗಳ ಸಂಖ್ಯೆ ಹೆಚ್ಚಿರುವುದರಿಂದ, ಗರಿಷ್ಠ ಪ್ರಮಾಣದಲ್ಲಿ ಜನರನ್ನು ಕಾರ್ಯಕ್ರಮಕ್ಕೆ ತಲುಪಿಸುವ ವ್ಯವಸ್ಥೆಯಾಗಬೇಕು ಎಂದರು.
ಸಭೆಯ ಅಧ್ಯಕ್ಷತೆ ವಹಿಸಿದ್ದ ಬಾಲಚಂದ್ರನ್​ ಎಸ್​ ಅವರು ವಿವಿಧ ಯೋಜನೆಗಳ ಪ್ರಗತಿಯನ್ನು ಪರಿಶೀಲಿಸಿದರು. ಗ್ಯಾರಂಟಿ ಯೋಜನೆಗಳ ಅನುಷ್ಠಾನಾಧಿಕಾರಿಗಳು ಮಾಹಿತಿ ನೀಡಿದರು.
ತಾಪಂ ಇಓ ದುಂಡಪ್ಪ ತುರಾದಿ, ಅನುಷ್ಠಾನ ಸಮಿತಿ ಸದಸ್ಯರಾದ ಜ್ಯೋತಿ ಗೊಂಡಬಾಳ, ರಮೇಶ ಹ್ಯಾಟಿ, ಪರಶುರಾಮ ಕೊರವರ, ರಾಮಣ್ಣ ಚೌಡ್ಕಿ, ಸವಿತಾ ಗೊರಂಟ್ಲಿ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net