ದೇಶ ಕಂಡ ಶ್ರೇಷ್ಠ ಆಡಳಿತಗಾರ

ಗಂಗಾವತಿ ಬಾಲಕರ ಸ.ಪ.ಪೂ.ಕಾಲೇಜಿನಲ್ಲಿ ಡಾ.ಅಂಬೇಡ್ಕರ್ ಮತ್ತು ಡಾ.ಬಾಬು ಜಗಜೀವನರಾಮ್ ಜಯಂತಿ ನಿಮಿತ್ತ ದಲಿತ ಸೇನೆ ಜಿಲ್ಲಾ ಘಟಕ ಹಮ್ಮಿಕೊಂಡಿದ್ದ ಜಿಲ್ಲಾಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ವಿಜೇತರಾದವರಿಗೆ ಪ್ರಮಾಣ ಪತ್ರ ವಿತರಿಸಲಾಯಿತು. ಡಿವೈಎಸ್ಪಿ ಜೆ.ಎಸ್.ನ್ಯಾಮಗೌಡರ್, ದಲಿತ ಸೇನೆ ಜಿಲ್ಲಾಧ್ಯಕ್ಷ ಉಡುಚಪ್ಪ ನಾಯಕ, ಗ್ರಂಥಪಾಲಕ ರಮೇಶ ಗಬ್ಬೂರ್ ಇತರರಿದ್ದರು.
ಗಂಗಾವತಿ ಬಾಲಕರ ಸ.ಪ.ಪೂ.ಕಾಲೇಜಿನಲ್ಲಿ ಡಾ.ಅಂಬೇಡ್ಕರ್ ಮತ್ತು ಡಾ.ಬಾಬು ಜಗಜೀವನರಾಮ್ ಜಯಂತಿ ನಿಮಿತ್ತ ದಲಿತ ಸೇನೆ ಜಿಲ್ಲಾ ಘಟಕ ಹಮ್ಮಿಕೊಂಡಿದ್ದ ಜಿಲ್ಲಾಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ವಿಜೇತರಾದವರಿಗೆ ಪ್ರಮಾಣ ಪತ್ರ ವಿತರಿಸಲಾಯಿತು. ಡಿವೈಎಸ್ಪಿ ಜೆ.ಎಸ್.ನ್ಯಾಮಗೌಡರ್, ದಲಿತ ಸೇನೆ ಜಿಲ್ಲಾಧ್ಯಕ್ಷ ಉಡುಚಪ್ಪ ನಾಯಕ, ಗ್ರಂಥಪಾಲಕ ರಮೇಶ ಗಬ್ಬೂರ್ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಪ್ರಾಚಾರ್ಯ ಪ್ರೊ.ಸುಂಕೇಶ್ವರ ಕರಿಗೂಳಿ ಅಭಿಮತ
ಗಂಗಾವತಿ: ತಾಲೂಕಿನ ಶ್ರೀರಾಮನಗರದ ಸಿಎನ್‌ಆರ್ ಸರ್ಕಾರಿ ಪದವಿ ಕಾಲೇಜಿನಲ್ಲಿ ಹಸಿರು ಕ್ರಾಂತಿ ಹರಿಕಾರ, ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನರಾಮ್ ಜಯಂತಿ ಸೋಮವಾರ ಆಚರಿಸಲಾಯಿತು.
ಭಾವಚಿತ್ರಕ್ಕೆ ಪುಷ್ಪಾರ್ಪಣೆ ಸಲ್ಲಿಸಿದ ಪ್ರಾಚಾರ್ಯ ಪ್ರೊ.ಸುಂಕೇಶ್ವರ ಕರಿಗೂಳಿ ಮಾತನಾಡಿ, ನವಭಾರತದ ಆಹಾರಭದ್ರತೆಗೆ ಭದ್ರ ಬುನಾದಿ ಹಾಕಿದ ಬಾಬೂಜಿ ದೇಶ ಕಂಡ ಶ್ರೇಷ್ಠ ಆಡಳಿತಗಾರ. ಶೋಷಣೆ ಮುಕ್ತಗೊಳಿಸುವುದೇ ರಾಜಕೀಯ ಅಧಿಕಾರದ ಪರಮ ಧ್ಯೇಯ ಎಂದು ನಂಬಿದ್ದರು ಎಂದರು.
ಐಕ್ಯೂಎಸಿ ಸಹ ಸಂಚಾಲಕ ಡಾ.ಕೆ.ವಿರೂಪಾಕ್ಷ, ಪ್ರಾಸ್ತಾವಿಕ ನುಡಿಗಳನ್ನಾಡಿದರು. ಸಹ ಪ್ರಾಧ್ಯಾಪಕರಾದ ಡಾ.ಸರರಾಜ್ ಅಹ್ಮದ್, ಎಂ.ಶಂಕ್ರಪ್ಪ, ರವಿಕುಮಾರ್, ಡಾ.ಶಶಿಕುಮಾರ, ಉಪನ್ಯಾಸಕರಾದ ವೆಂಕಟರಾಜು, ದೇವರಾಜ, ವೀರೇಶ, ಮಲ್ಲಯ್ಯ, ಡಾ.ರಸೂಲ್‌ಸಾಬ್, ಸಾಯಿಕುಮಾರ್, ಈಶಪ್ಪ, ಪೆನಜಾ, ಸಿಬ್ಬಂದಿ ಶಾಮೀದ್, ಜಬೀನಾ ಬೇಗಂ, ವಿನಾಯಕ, ಶಾಂತಿ, ಶರಣಬಸವ ಇತರರಿದ್ದರು.

ಸ್ಪರ್ಧಾತ್ಮಕ ಪರೀಕ್ಷೆ

ನಗರದ ಬಾಲಕರ ಸ.ಪ.ಪೂ.ಕಾಲೇಜು ಆವರಣದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಹಸಿರುಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನರಾಮ್ ಜಯಂತಿ ನಿಮಿತ್ತ ದಲಿತ ಸೇನೆ ಜಿಲ್ಲಾ ಘಟಕದಿಂದ ಜಿಲ್ಲಾಮಟ್ಟದ ಸ್ಪರ್ಧಾತ್ಮಕ ಪರೀಕ್ಷೆ ಭಾನುವಾರ ಹಮ್ಮಿಕೊಳ್ಳಲಾಗಿತ್ತು. ಜಿಲ್ಲೆಯ ವಿವಿಧ ತಾಲೂಕಿನಿಂದ 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಡಿವೈಎಸ್ಪಿ ಜೆ.ಎಸ್.ನ್ಯಾಮಗೌಡರ್ ಮಾತನಾಡಿ, ಅರ್ಥಪೂರ್ಣ ಕಾರ್ಯಕ್ರಮ ಆಯೋಜಿಸಿದ್ದು ಪ್ರಶಂಸನೀಯ ಎಂದರು. ದಲಿತ ಸೇನೆ ಜಿಲ್ಲಾಧ್ಯಕ್ಷ ಉಡುಚಪ್ಪ ನಾಯಕ ಮಾತನಾಡಿದರು. ಕಾಲೇಜಿನ ಗ್ರಂಥಪಾಲಕ ರಮೇಶ ಗಬ್ಬೂರ್, ಸಿಎನ್‌ಆರ್ ಸರ್ಕಾರಿ ಪದವಿ ಕಾಲೇಜಿನ ಪ್ರಾಚಾರ್ಯ ಪ್ರೊ.ಸುಂಕೇಶ್ವರ ಕರಿಗೂಳಿ, ಪ್ರಮುಖರಾದ ಕೆ.ಪವನ್, ಶಿವರಾಜ್ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net