ಕುಟುಂಬ ನಿರ್ವಹಣೆಗೆ ಗಂಡು-ಹೆಣ್ಣಿಗೆ ದುಡಿಮೆ ಅನಿವಾರ್ಯ

ಕನಕಗಿರಿಯ ಶ್ರೀ ಪಂಪಣ್ಣ ಶರಣಪ್ಪ ಗುಗ್ಗಳಶೆಟ್ರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶುಕ್ರವಾರ ಉದ್ಯೋಗ ಮೇಳಕ್ಕೆ ಪ್ರಾಚಾರ್ಯ ಬಜರಂಗ ಬಲಿ ಚಾಲನೆ ನೀಡಿದರು. ಐಕ್ಯೂಎಸಿ ಘಟಕದ ಸಂಯೋಜಕ ರಕ್ಷಿತ್ ಎ, ಸಾಂಸ್ಕೃತಿಕ ಘಟಕದ ಸಂಯೋಜಕಿ  ಲಲಿತಾ ಎನ್.ಕೆ, ರೆಡ್‌ಕ್ರಾಸ್ ಘಟಕದ ಸಂಯೋಜಕಿ ಸರ್ವಮಂಗಳಮ್ಮ ಟಿ.ಆರ್., ಹಿರಿಯ ಉಪನ್ಯಾಸಕರಾದ ಅಮರೇಶ್.ವಿ, ಜಿಲ್ಲಾ ಉದ್ಯೋಗ ಅಭಿವೃದ್ಧಿ ನಿರ್ವಾಹಕ ಹನುಮೇಶ್ ತೊಂಡಿಹಾಳ ಇತರರಿದ್ದರು.
ಕನಕಗಿರಿಯ ಶ್ರೀ ಪಂಪಣ್ಣ ಶರಣಪ್ಪ ಗುಗ್ಗಳಶೆಟ್ರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶುಕ್ರವಾರ ಉದ್ಯೋಗ ಮೇಳಕ್ಕೆ ಪ್ರಾಚಾರ್ಯ ಬಜರಂಗ ಬಲಿ ಚಾಲನೆ ನೀಡಿದರು. ಐಕ್ಯೂಎಸಿ ಘಟಕದ ಸಂಯೋಜಕ ರಕ್ಷಿತ್ ಎ, ಸಾಂಸ್ಕೃತಿಕ ಘಟಕದ ಸಂಯೋಜಕಿ ಲಲಿತಾ ಎನ್.ಕೆ, ರೆಡ್‌ಕ್ರಾಸ್ ಘಟಕದ ಸಂಯೋಜಕಿ ಸರ್ವಮಂಗಳಮ್ಮ ಟಿ.ಆರ್., ಹಿರಿಯ ಉಪನ್ಯಾಸಕರಾದ ಅಮರೇಶ್.ವಿ, ಜಿಲ್ಲಾ ಉದ್ಯೋಗ ಅಭಿವೃದ್ಧಿ ನಿರ್ವಾಹಕ ಹನುಮೇಶ್ ತೊಂಡಿಹಾಳ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಪ್ರಾಚಾರ್ಯ ಬಜರಂಗಬಲಿ ಹೇಳಿಕೆ
  • ಕನಕಗಿರಿಯಲ್ಲಿ ಉದ್ಯೋಗ ಮೇಳ
ಕನಕಗಿರಿ: ಪೈಪೋಟಿಯಿರುವ ಪ್ರಸ್ತುತ ದಿನಮಾನಗಳಲ್ಲಿ ಕುಟುಂಬವನ್ನು ನಿರ್ವಹಿಸಲು ಗಂಡು-ಹೆಣ್ಣು ಎನ್ನುವ ತಾರತಮ್ಯವಿಲ್ಲದೇ ಇಬ್ಬರೂ ದುಡಿಯಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ ಎಂದು ಪ್ರಾಚಾರ್ಯ ಬಜರಂಗಬಲಿ ಹೇಳಿದರು.
ಇಲ್ಲಿನ ಶ್ರೀ ಪಂಪಣ್ಣ ಶರಣಪ್ಪ ಗುಗ್ಗಳಶೆಟ್ರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಮತ್ತು ಉದ್ಯೋಗ ಕೋಶ, ಆಂತರಿಕ ಗುಣಮಟ್ಟ ಭರವಸೆ ಕೋಶ (ಐಕ್ಯೂಎಸಿ) ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಸಹಯೋಗದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಉದ್ಯೋಗ ಮೇಳದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಆರ್ಥಿಕ ಸ್ವಾವಲಂಬನೆಗಾಗಿ ಪ್ರತಿಯೊಬ್ಬರಿಗೂ ದುಡಿಮೆ ಅನಿವಾರ್ಯ. ಒಬ್ಬರಿಗೆ ಉದ್ಯೋಗ ಸಿಕ್ಕರೆ ಅದರಿಂದ ಒಂದು ಕುಟುಂಬವೇ ಬದುಕುತ್ತದೆ. ಪ್ರತಿಷ್ಠಿತ ಖಾಸಗಿ ಕಾಲೇಜುಗಳಲ್ಲಿ ಉದ್ಯೋಗ ಮೇಳ ಆಯೋಜಿಸಿ ಹಲವರಿಗೆ ಉದ್ಯೋಗ ಕೊಡಿಸುವ ಪ್ರಯತ್ನ ಮಾಡುತ್ತವೆ. ಆದರೆ, ಗ್ರಾಮೀಣ ಭಾಗದಲ್ಲಿ ಅದರಲ್ಲೂ ಸರ್ಕಾರಿ ಕಾಲೇಜುಗಳಲ್ಲಿ ಈ ಸೌಲಭ್ಯವಿರುವುದಿಲ್ಲ. ಇದರಿಂದ ಆರ್ಥಿಕವಾಗಿ ಹಿಂದುಳಿದಿರುವ, ಹೊರ ಮತ್ತು ಕಾರ್ಪೋರೇಟ್ ಜಗತ್ತಿನ ಪರಿಚಯವಿರದ ಗ್ರಾಮೀಣ ಅಭ್ಯರ್ಥಿಗಳು ಅವಕಾಶದಿಂದ ವಂಚಿತರಾಗುತ್ತಾರೆ. ಇವರಿಗೆ ಉದ್ಯೋಗಾವಕಾಶ ಒದಗಿಸುವುದಕ್ಕಾಗಿ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು..
ವೃತ್ತಿ ಮಾರ್ಗದರ್ಶನ ಮತ್ತು ಉದ್ಯೋಗ ಕೋಶದ ಸಂಯೋಜಕ ಡಾ. ವೀರೇಶ ಕೆಂಗಲ್ ಮಾತನಾಡಿ, ಶಿಕ್ಷಣದ ಜತೆಗೆ ಪ್ರಮಾಣಪತ್ರಗಳನ್ನು ನೀಡುವುದು ಮಾತ್ರ ಶಿಕ್ಷಣ ಸಂಸ್ಥೆಗಳ ಕೆಲಸ ಆಗಬಾರದು. ಶಿಕ್ಷಣವು ಜೀವನ ಕಟ್ಟಿಕೊಳ್ಳುವ ಮಾರ್ಗಗಳನ್ನು ಕಲ್ಪಿಸುವುದಾಗಿರಬೇಕು ಎಂದು ಹೇಳಿದರು..
ಕೊಪ್ಪಳ, ಹುಬ್ಬಳ್ಳಿ, ಬೆಂಗಳೂರು ಸೇರಿ ರಾಜ್ಯದ 15ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಮೇಳದಲ್ಲಿ ಭಾಗವಹಿಸಿದ್ದವು. ಐಕ್ಯೂಎಸಿ ಘಟಕದ ಸಂಯೋಜಕ ರಕ್ಷಿತ್ ಎ, ಸಾಂಸ್ಕೃತಿಕ ಘಟಕದ ಸಂಯೋಜಕಿ ಲಲಿತಾ ಎನ್.ಕೆ, ರೆಡ್‌ಕ್ರಾಸ್ ಘಟಕದ ಸಂಯೋಜಕಿ ಸರ್ವಮಂಗಳಮ್ಮ ಟಿ.ಆರ್., ಹಿರಿಯ ಉಪನ್ಯಾಸಕರಾದ ಅಮರೇಶ್ ವಿ, ಜಿಲ್ಲಾ ಉದ್ಯೋಗ ಅಭಿವೃದ್ಧಿ ನಿರ್ವಾಹಕ ಹನುಮೇಶ್ ತೊಂಡಿಹಾಳ, ನಾನಾ ಸಂಸ್ಥೆಗಳ ಪದಾಧಿಕಾರಿಗಳಾದ ರವಿಚಂದ್ರ, ಚನ್ನಬಸವ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net