ಸಂಸ್ಕೃತಿ- ಸಂಪ್ರದಾಯ ಉಳಿವಿಗೆ ಕೈಜೋಡಿಸಿ

ಗಂಗಾವತಿ ತಾಲೂಕಿನ ರಾಂಪುರದಲ್ಲಿ ಹಮ್ಮಿಕೊಂಡ ಕಾರ್ಯಾಗಾರದ ಸಮಾರೋಪದಲ್ಲಿ ಸಂಪನ್ಮೂಲ ವ್ಯಕ್ತಿ ಛತ್ರಪ್ಪ ತಂಬೂರಿ ಮಾತನಾಡಿದರು. ಅಖಿಲ ಭಾರತ ಬಂಜಾರ ಸೇವಾ ಸಮಿತಿ ಜಿಲ್ಲಾಧ್ಯಕ್ಷ ಲಕ್ಷ್ಮಣನಾಯ್ಕ, ಕಾರಟಗಿ ತಾಲೂಕು ಗ್ಯಾರಂಟಿ ಸಮಿತಿ ಸದಸ್ಯೆ ದೀಪಾ ರಾಠೋಡ, ಅಕಾಡೆಮಿ ಸದಸ್ಯ ಸಂಚಾಲಕ ಕುಮಾರ ರಾಠೋಡ್ ಇತರರಿದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ರಾಷ್ಟ್ರ
  • ಪ್ರಶಸ್ತಿ
  • ಪುರಸ್ಕೃತ
ಗಂಗಾವತಿ: ತಾಲೂಕಿನ ರಾಂಪುರ ಶ್ರೀ ಸೇವಾಲಾಲ್ ದೇವಾಲಯದ ಅವರಣದಲ್ಲಿ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯಿಂದ ಹಮ್ಮಿಕೊಂಡ ಬಂಜಾರ ಯುವಕ-ಯುವತಿಯರಿಗಾಗಿ ತರಬೇತಿ ಕಾರ್ಯಾಗಾರದ ಸಮಾರೋಪ ಬುಧವಾರ ಹಮ್ಮಿಕೊಳ್ಳಲಾಗಿತ್ತು.
ಬಂಜಾರ ಸಂಸ್ಕೃತಿ ಸಂರಕ್ಷಿಸುವ ದೃಷ್ಟಿಯಿಂದ ಹವೇಲಿ, ವಳಂಗ, ವೀತಿ, ಕಸಳಾತ, ಸಿಕವಾಡಿ ಕುರಿತು ಮೂರು ದಿನ ತರಬೇತಿ ಕಾರ್ಯಾಗಾರ ಹಮ್ಮಿಕೊಂಡಿದ್ದು, ಸಂಪನ್ಮೂಲ ವ್ಯಕ್ತಿಗಳಾದ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕ ತಾವರೆಪ್ಪ ಕಾರಭಾರಿ, ಬಂಜಾರ ಭಾಷಾ ಅಕಾಡೆಮಿ ಸದಸ್ಯ ಛತ್ರಪ್ಪ ತಂಬೂರಿ ತರಬೇತಿ ನೀಡಿದರು.
ಅಖಿಲ ಭಾರತ ಬಂಜಾರ ಸೇವಾ ಸಮಿತಿ ಜಿಲ್ಲಾಧ್ಯಕ್ಷ ಲಕ್ಷ್ಮಣನಾಯ್ಕ ಮಾತನಾಡಿ, ಸಮುದಾಯದ ಯುವಕರು ಸಂಸ್ಕೃತಿ ಮತ್ತು ಸಂಪ್ರದಾಯ ಉಳಿಸಿಕೊಂಡು ಹೋಗಬೇಕಿದೆ ಎಂದರು. ಕಾರಟಗಿ ತಾಲೂಕು ಗ್ಯಾರಂಟಿ ಸಮಿತಿ ಸದಸ್ಯೆ ದೀಪಾ ರಾಠೋಡ, ಅಕಾಡೆಮಿ ಸದಸ್ಯ ಸಂಚಾಲಕ ಕುಮಾರ ರಾಠೋಡ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net