ಯಲಬುರ್ಗಾದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ವಿಶ್ವ ಮಹಿಳಾ ದಿನ ಕಾರ್ಯಕ್ರಮವನ್ನು ಬಳ್ಳಾರಿಯ ಪ್ರಾಧ್ಯಾಪಕಿ ಗಾಯತ್ರಿ ಭಾವಿಕಟ್ಟಿ ಉದ್ಘಾಟಿಸಿದರು. ಪ್ರಾಚಾರ್ಯ ಕೆ.ಎಚ್.ಛತ್ರದ್, ಪ್ರಾಧ್ಯಾಪಕರಾದ ಡಾ.ನಂದಾ, ಲಕ್ಷ್ಮೀ ಬಾಯಿ, ಬಿ.ಶಶಿಕುಮಾರ್, ಅಶೋಕ ಕೆಂಚರೆಡ್ಡಿ, ಶಂಕರಯ್ಯ, ಶಿಲ್ಪಾ, ಶಿವಲೀಲಾ ಇತರರಿದ್ದರು.
ಯಲಬುರ್ಗಾ: ದೇಶದಲ್ಲಿ ಮಹಿಳೆಯರಿಗೆ ವಿಶೇಷ ಸ್ಥಾನ ನೀಡಲಾಗಿದೆ. ಆದ್ದರಿಂದ ಮಹಿಳೆಯರ ಮೇಲಿನ ದೌರ್ಜನ್ಯ, ದಬ್ಬಾಳಿಕೆ ತಡೆಯಲು ಎಲ್ಲರೂ ಕೈಜೋಡಿಸಿ ಎಂದು ಬಳ್ಳಾರಿಯ ಪ್ರಾಧ್ಯಾಪಕಿ ಗಾಯತ್ರಿ ಭಾವಿಕಟ್ಟಿ ಹೇಳಿದರು.
ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ವಿಶ್ವ ಮಹಿಳಾ ದಿನ ಕಾರ್ಯಕ್ರಮದಲ್ಲಿ ಮಾತನಾಡಿದರು. ಕೇವಲ ಅಡುಗೆ ಮನೆಗೆ ಸೀಮಿತವಾಗದೆ ಸಮಾಜದಲ್ಲಿ ಗುರುತಿಸುವ ವ್ಯಕ್ತಿಯಾಗಿ ಬೆಳೆಯಬೇಕು. ಮಹಿಳೆಯರು ಉನ್ನತ ಸ್ಥಾನದಲ್ಲಿ ಅಧಿಕಾರ ನಡೆಸಿ ದೇಶಕ್ಕೆ ಪ್ರೆರಣೆಯಾಗಿದ್ದಾರೆ.
ಸಂವಿಧಾನದಲ್ಲಿ ಮಹಿಳೆಯರಿಗೆ ವಿಶೇಷ ಹಕ್ಕು ನೀಡಿದೆ. ಸಮಸಮಾಜ ನಿರ್ಮಾಣಕ್ಕೆ ಹೆಣ್ಣುಮಕ್ಕಳು ಶಿಕ್ಷಣವಂತರಾಗಬೇಕು. ಅನ್ಯಾಯ ಕಂಡಾಗ ಪ್ರತಿಭಟಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದರು.
ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯೆ ಲಕ್ಷ್ಮೀ ಛಲವಾದಿ ಮಾತನಾಡಿ, ದೇಶದ ಪ್ರಗತಿಗೆ ಮಹಿಳೆಯರು ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಅವರ ಸಾಧನೆ ಹಾದಿಯಲ್ಲಿ ನಾವು ಮುಂದೆ ಸಾಗಬೇಕು. ಸಿಎಂ ಆರ್ಥಿಕ ಸಲಹೆಗಾರ, ಶಾಸಕ ಬಸವರಾಜ ರಾಯರೆಡ್ಡಿ ಅವರು ಕ್ಷೇತ್ರದಲ್ಲಿ ಶೈಕ್ಷಣಿಕ ಪ್ರಗತಿಗೆ ವಿಶೇಷ ಒತ್ತು ನೀಡಿದ್ದಾರೆ.
ಇದರಿಂದ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಅನುಕೂಲವಾಗಿದೆ ಎಂದು ತಿಳಿಸಿದರು. ವಿವಿಧ ಸ್ಪರ್ಧೆಯ ವಿಜೇತರಿಗೆ ಬಹುಮಾನ ನೀಡಲಾಯಿತು.